ಕ್ರಿಪ್ಟೋ ಕರೆನ್ಸಿ (ಸಾಂಕೇತಿಕ ಚಿತ್ರ) 
ಕೇಂದ್ರ ಬಜೆಟ್

ಕೇಂದ್ರ ಬಜೆಟ್ 2022: ಡಿಜಿಟಲ್ ಕರೆನ್ಸಿ ಘೋಷಣೆ; ಈ ವರ್ಷವೇ ಆರ್ ಬಿಐ ನಿಂದ "ಡಿಜಿಟಲ್ ರುಪೀ"; ಡಿಜಿಟಲ್ ಕರೆನ್ಸಿಗೆ ತೆರಿಗೆ!

ಡಿಜಿಟಲ್ ಕರೆನ್ಸಿಯ ಸಿಂಧುತ್ವಕ್ಕೆ ಸಂಬಂಧಿಸಿದಂತೆ ಈ ವರೆಗೂ ಇದ್ದ ಗೊಂದಲಗಳಿಗೆ ಫೆ.1 ರಂದು ಮಂಡನೆಯಾದ 2022-23 ನೇ ಸಾಲಿನ ಬಜೆಟ್ ನಲ್ಲಿ ಸ್ಪಷ್ಟತೆ ಸಿಕ್ಕಿದೆ. 

ನವದೆಹಲಿ: ಡಿಜಿಟಲ್ ಕರೆನ್ಸಿಯ ಸಿಂಧುತ್ವಕ್ಕೆ ಸಂಬಂಧಿಸಿದಂತೆ ಈ ವರೆಗೂ ಇದ್ದ ಗೊಂದಲಗಳಿಗೆ ಫೆ.1 ರಂದು ಮಂಡನೆಯಾದ 2022-23 ನೇ ಸಾಲಿನ ಬಜೆಟ್ ನಲ್ಲಿ ಸ್ಪಷ್ಟತೆ ಸಿಕ್ಕಿದೆ. 

ಬಜೆಟ್ ಮಂಡಿಸಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಡಿಜಿಟಲ್ ಕರೆನ್ಸಿಯನ್ನು ಅಧಿಕೃತವಾಗಿ ಘೋಷಿಸಿದ್ದಾರೆ. 2022 ರಲ್ಲೇ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ ಬಿಐ) "ಡಿಜಿಟಲ್ ರುಪೀ" ಪರಿಚಯಿಸಲಿದೆ ಎಂದು ತಿಳಿಸಿದ್ದಾರೆ. 

"ಬ್ಲಾಕ್ ಚೈನ್ ತಂತ್ರಜ್ಞಾನವನ್ನು ಆಧರಿಸಿ ಆರ್ ಬಿಐ ಡಿಜಿಟಲ್ ಕರೆನ್ಸಿಯನ್ನು 2022-23 ಆರ್ಥಿಕ ವರ್ಷದಲ್ಲೇ ಪರಿಚಯಿಸಲಿದೆ" ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.   

ಇದೇ ವೇಳೆ ಡಿಜಿಟಲ್ ಆಸ್ತಿ ಅಂದರೆ ಡಿಜಿಟಲ್ ಕರೆನ್ಸಿ ಅಥವಾ ಕ್ರಿಪ್ಟೋ ಕರೆನ್ಸಿ ವರ್ಗಾವಣೆ, ವರ್ಚ್ಯುಯಲ್ ಅಸೆಟ್ ಮೇಲೆ ಶೇ.1 ರಷ್ಟು ಟಿಡಿಎಸ್ ಹಾಗೂ ಡಿಜಿಟಲ್ ಕರೆನ್ಸಿ ವರ್ಗಾವಣೆ, ಆದಾಯದ ಮೇಲೆ ಮೇಲೆ ಶೇ.30 ರಷ್ಟು ತೆರಿಗೆ ವಿಧಿಸಲಾಗುವುದು ಎಂದು ನಿರ್ಮಲಾ ಸೀತಾರಾಮಾನ್ ತಿಳಿಸಿದ್ದಾರೆ. ಡಿಜಿಟಲ್ ಕರೆನ್ಸಿಗೆ ಸಂಬಂಧಿಸಿದಂತೆ ಆದಾಯ ಯಾವುದೇ ಹೊಂದಾಣಿಕೆಗೆ ಅವಕಾಶ ಇಲ್ಲ. ವರ್ಚುವಲ್ ಡಿಜಿಟಲ್ ಅಸೆಟ್​ (ಕ್ರಿಪ್ಟೋಕರೆನ್ಸಿ ಮಾದರಿಯ) ಕೊಡುಗೆ ಪಡೆಯುವವರೂ ಸಹ ತೆರಿಗೆ ಪಾವತಿ ಮಾಡಬೇಕಾಗುತ್ತದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test Day 3: ಫಾಲೋ ಆನ್ ಭೀತಿಯಲ್ಲಿ ಲಂಕಾಪಡೆ, ಮಳೆಯಿಂದಾಗಿ 3ನೇ ದಿನದಾಟ ಮೊಟಕು!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!