ಗೃಹ ಸಚಿವ ಆರಗ ಜ್ಞಾನೇಂದ್ರ 
ರಾಜ್ಯ ಬಜೆಟ್

ಬಡ, ಸಣ್ಣ, ಅತಿ ಸಣ್ಣ, ಬಗರ್ ಹುಕುಮ್ ಸಾಗುವಳಿದಾರರಿಗೆ ಭೂಮಿ ಮಂಜೂರು ಮಾಡಲು ಸಿಎಂ ಭರವಸೆ: ಆರಗ ಜ್ಞಾನೇಂದ್ರ

2023-24 ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ಬಡ, ಸಣ್ಣ ಹಾಗೂ ಅತಿ ಸಣ್ಣ, ಬಗರ್ ಹುಕುಮ್ ಸಾಗುವಳಿ ದಾರರಿಗೆ ಭೂಮಿ ಮಂಜೂರು ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿರುವುದನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ಸ್ವಾಗತಿಸಿದ್ದಾರೆ.

ಬೆಂಗಳೂರು: 2023-24 ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ಬಡ, ಸಣ್ಣ ಹಾಗೂ ಅತಿ ಸಣ್ಣ, ಬಗರ್ ಹುಕುಮ್ ಸಾಗುವಳಿ ದಾರರಿಗೆ ಭೂಮಿ ಮಂಜೂರು ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿರುವುದನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ಸ್ವಾಗತಿಸಿದ್ದಾರೆ.

ಮಲೆನಾಡು ಪ್ರದೇಶದಲ್ಲಿ, ಕಾಣೆ, ಬಾಣೆ, ಸೊಪ್ಪಿನ ಬೆಟ್ಟ, ಹುಲ್ಲುಬನ್ನಿ ಹಾಗೂ ಸರ್ಕಾರಿ ಬೀಳು, ಒಳಗೊಂಡಂತೆ, ಹಲವಾರು ವರ್ಷಗಳಿಂದ ಸಾಗುವಳಿ ಮಾಡಿಕೊಂಡು ಬರುತ್ತಿರುವ, ಸಾವಿರಾರು, ಬಡವರು ಹಾಗೂ ಸಣ್ಣ ಮತ್ತು ಅತಿ ಸಣ್ಣ ಹಿಡುವಳಿದಾರರ, ಬಗರ್ ಹುಕುಂ ಜಮೀನನ್ನು, ಮಂಜೂರು ಮಾಡಲು ಮುಖ್ಯಮಂತ್ರಿ ಭರವಸೆ ನೀಡಿರುವುದಾಗಿ ಅವರು ಹೇಳಿದ್ದಾರೆ. 

ದಶಕಗಳ ಕಾಲದ ಬೇಡಿಕೆಯ ಬಗ್ಗೆ ಸಕಾರಾತ್ಮಕ ವಾಗಿ ಸ್ಪಂದಿಸಿದ ಮುಖ್ಯಮಂತ್ರಿಗಳು, ಈ ಕಾರಣಕ್ಕಾಗಿ ರಚಿಸಲಾದ ಸಂಪುಟದ ಉಪ ಸಮಿತಿ ನೀಡುವ ಶಿಫಾರಸುಗಳನ್ನು ಅನುಷ್ಟಾನ ಗೊಳಿಸಲಾಗುವುದು ಎಂದು ತಿಳಿಸಿದ್ದಾರೆ. ಬಜೆಟ್ ನಲ್ಲಿ, ಈ ಕುರಿತು  ನಿರ್ಧಾರ ಪ್ರಕಟಿಸಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾಗಿ ವಿನಂತಿಸಿದ್ದರು.

ನಿನ್ನೆ ದಿನ ಮುಖ್ಯಮಂತ್ರಿಯನ್ನು ಭೇಟಿಯಾಗಿದ್ದ ಆರಗ ಜ್ಞಾನೇಂದ್ರ ಬಹು ದಿನಗಳ ಕಾಲದ ಬೇಡಿಕೆಯನ್ನು ಮನ್ನಿಸಿ, ಸಾವಿರಾರು ಬಡ ಕುಟುಂಬಗಳ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಬಗ್ಗೆ ಹೊಂದಿರುವ ಕನಸನ್ನು ನನಸು ಮಾಡಲು ಮನವಿ ಮಾಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿ SIR: ವಿದೇಶಾಂಗ ಸಚಿವ ಜೈಶಂಕರ್, ಎಲ್.ಕೆ ಅಡ್ವಾಣಿ ಸೇರಿದಂತೆ ಹಲವು ಮತದಾರರಿಗೆ ನೋಟಿಸ್; CEO ಕೊಟ್ಟ ಸ್ಪಷ್ಟನೆ ಏನು?

ಇದು ಎಂತಹ ವಿಶೇಷ ತೀವ್ರ ಪರಿಷ್ಕರಣೆ? ಅರ್ಹರನ್ನು ಕಿತ್ತುಹಾಕಿ, ಅನರ್ಹರನ್ನು ಸೇರಿಸುವುದೇ SIR: ಕಪಿಲ್ ಸಿಬಲ್ ಕಿಡಿ!

ಟಾಟಾ ಸನ್ಸ್ ಅಧ್ಯಕ್ಷರಾಗಿ ಎನ್ ಚಂದ್ರಶೇಖರನ್ ಮರುನೇಮಕ ಪ್ರಶ್ನಿಸಿದ ಟಾಟಾ ಟ್ರಸ್ಟ್ಸ್!

ಸಿಎಂ ಡಿಕೆ ಶಿವಕುಮಾರ್‌ ನೂರು ದಿನಗಳ ಆಡಳಿತಕ್ಕೆ ಬಿಜೆಪಿ ನಾಯಕ ಫಿದಾ! ಏನಂದ್ರು ಗೊತ್ತಾ?

ಅಂತಹ ಮನಸ್ಥಿತಿ ಇದ್ದಾಗ ಮೊದಲೇ ಅದರಿಂದ ದೂರ ಇರಬೇಕಿತ್ತು: ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಮಹದೇವಪ್ಪ ಟಾಂಗ್!