2023ನೇ ಸಾಲಿನ ಬಜೆಟ್ ಪ್ರತಿ ಹಸ್ತಾಂತರ 
ರಾಜ್ಯ ಬಜೆಟ್

ರಾಜ್ಯ ಬಜೆಟ್ ಮಂಡನೆ: ಹಣಕಾಸು ಇಲಾಖೆ ಅಧಿಕಾರಿಗಳಿಂದ ಬಜೆಟ್ ಪ್ರತಿ ಸಿಎಂಗೆ ಹಸ್ತಾಂತರ, ಮುಖ್ಯಮಂತ್ರಿಗಳಿಂದ ಟೆಂಪಲ್ ರನ್

ರಾಜ್ಯ ಬಜೆಟ್‌ಗೆ ಕ್ಷಣಗಣನೆ ಆರಂಭವಾಗಿದ್ದು, 2023-24 ನೇ ಸಾಲಿನ ಬಜೆಟ್ ಪ್ರತಿಯನ್ನು ಹಣಕಾಸು ಇಲಾಖೆ ಅಧಿಕಾರಿಗಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಇಂದು ಬೆಳಗ್ಗೆ ಹಸ್ತಾಂತರಿಸಿದರು. 

ಬೆಂಗಳೂರು: ರಾಜ್ಯ ಬಜೆಟ್‌ಗೆ ಕ್ಷಣಗಣನೆ ಆರಂಭವಾಗಿದ್ದು, 2023-24 ನೇ ಸಾಲಿನ ಬಜೆಟ್ ಪ್ರತಿಯನ್ನು ಹಣಕಾಸು ಇಲಾಖೆ ಅಧಿಕಾರಿಗಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಇಂದು ಬೆಳಗ್ಗೆ ಹಸ್ತಾಂತರಿಸಿದರು. 

ಇದಾದ ಬಳಿಕ ಮುಖ್ಯಮಂತ್ರಿ ಬೊಮ್ಮಾಯಿಯವರ ತಮ್ಮ ನಿವಾಸ ಆರ್ ಟಿ ನಗರದ ಹತ್ತಿರವಿರುವ ಶ್ರೀಕಂಠೇಶ್ವರ ದೇವಸ್ಥಾನಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದರು.

ಇದಕ್ಕೂ ಮೊದಲು ಬಾಲಬ್ರೂಯಿ ಅತಿಥಿ ಗೃಹದ ಬಳಿಯಿರುವ ಸೆವೆನ್ ಮಿನಿಸ್ಟರ್ಸ್ ಕ್ವಾಟ್ರಸ್ ಹತ್ತಿರದ ಆಂಜನೇಯ ದೇವಸ್ಥಾನಕ್ಕೆ ಕೂಡ ಹೋಗಿ ನಾಡಿನ ಜನರ ಹೆಸರಿನಲ್ಲಿ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಜೊತೆ ಸಂಪುಟದ ಹಲವು ಸಚಿವರು ಕೂಡ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. 

ಇಡೀ ರಾಜ್ಯದ ಮಹಾಜನತೆಗೆ ಒಳ್ಳೆಯದಾಗಲಿ ಎಂದು ದೇವರ ಮುಂದೆ ಪ್ರಾರ್ಥನೆ ಸಲ್ಲಿಸಿದೆನು ಎಂದು ಸುದ್ದಿಗಾರರಿಗೆ ಮುಖ್ಯಮಂತ್ರಿಗಳು ತಿಳಿಸಿದರು. 

ಬಿಜೆಪಿ ಸರ್ಕಾರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಂಡಿಸುತ್ತಿರುವ ಕನೆಯ ಬಜೆಟ್ ಇದಾಗಿದ್ದು ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವುದರಿಂದ ವಿವಿಧ ವಲಯಗಳಲ್ಲಿ ಬೆಟ್ಟದಷ್ಟು ನಿರೀಕ್ಷೆಯಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತೀಯ ನಾವಿಕರ ಸುರಕ್ಷತೆ ಮುಖ್ಯ; ನಾಗರಿಕ ಮೂಲಸೌಕರ್ಯಗಳ ಮೇಲಿನ ದಾಳಿ ಸ್ವೀಕಾರಾರ್ಹವಲ್ಲ: ಇರಾನ್‌ಗೆ ಅಜಿತ್ ದೋವಲ್

ಜರ್ಮನಿಯ ವಸತಿ ಕಟ್ಟಡದಲ್ಲಿ ಶಂಕಿತ ಬೆಂಕಿ ಅವಘಡ: 3 ಭಾರತೀಯರು ಸಾವು!

ಹನಿಟ್ರ್ಯಾಪ್ ಪಿತೂರಿ ಪ್ರಶ್ನಿಸಿದ್ದಕ್ಕೆ ಕಿರುಕುಳ; JDS ಕಾರ್ಯಕರ್ತ CCB ವಶಕ್ಕೆ: ಕುಮಾರಸ್ವಾಮಿ ಆಕ್ರೋಶ

ಕಾಂಗ್ರೆಸ್‌ನ ಆಂತರಿಕ ಕಲಹದಿಂದ 'ಮೂರನೇ ಮುಖ್ಯಮಂತ್ರಿ' ಬಂದರೂ ಅಚ್ಚರಿ ಇಲ್ಲ: ಬಿ.ವೈ ವಿಜಯೇಂದ್ರ; Video

ಯೂಟ್ಯೂಬರ್ ಧ್ರುವ್ ರಾಠಿಗೆ ಸಂಕಷ್ಟ: 8 ವರ್ಷಗಳ ಹಿಂದಿನ ಪ್ರಕರಣಕ್ಕೆ ಮರುಜೀವ; ದೆಹಲಿ ಕೋರ್ಟ್ ಸಮನ್ಸ್!