ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಹಲವು ಯೋಜನೆ 
ರಾಜ್ಯ ಬಜೆಟ್

ಕರ್ನಾಟಕ ಬಜೆಟ್ 2023: ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಹಲವು ಯೋಜನೆ ಘೋಷಣೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ 2023-24ನೇ ಸಾಲಿನ ಬಜೆಟ್ ಮಂಡಿಸಿದ್ದು, ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಹಲವು ವಿಶೇಷ ಯೋಜನೆಗಳನ್ನು ಘೋಷಿಸಿದ್ದಾರೆ.

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ 2023-24ನೇ ಸಾಲಿನ ಬಜೆಟ್ ಮಂಡಿಸಿದ್ದು, ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಹಲವು ವಿಶೇಷ ಯೋಜನೆಗಳನ್ನು ಘೋಷಿಸಿದ್ದಾರೆ.

ಅಲ್ಪಸಂಖ್ಯಾತ ಸಮುದಾಯಗಳ ವಿದ್ಯಾರ್ಥಿಗಳ ಅಭ್ಯುದಯಕ್ಕೆ ಬೊಮ್ಮಾಯಿ ಸರ್ಕಾರ ಆದ್ಯತೆ ನೀಡಿದ್ದು, ಅಲ್ಪಸಂಖ್ಯಾತರ ನಿರ್ದೇಶನಾಲಯದಡಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರಿಗೆ ಆತ್ಮ ರಕ್ಷಣೆ ತರಬೇತಿಯನ್ನು ನೀಡಲು 2 ಕೋಟಿ ರೂ. ನೀಡಲಾಗಿದೆ.

ವಿದೇಶದಲ್ಲಿ ಪದವಿ ಮತ್ತು ಸ್ನಾತಕೋತ್ತರ ವ್ಯಾಸಂಗವನ್ನು ಮಾಡಲು ಇಚ್ಛಿಸುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಶೂನ್ಯ ಬಡ್ಡಿ ದರದಲ್ಲಿ ತಲಾ 20 ಲಕ್ಷ ರೂ. ಸಾಲ ನೀಡುವುದಾಗಿ ಸಿಎಂ ಬೊಮ್ಮಾಯಿ ಘೋಷಿಸಿದ್ದಾರೆ.

ಅಲ್ಪಸಂಖ್ಯಾತರ ಪದವೀಧರ ಮಹಿಳೆಯರು ಉತ್ತಮ ಉದ್ಯೋಗಾವಕಾಶ ಪಡೆಯಲು ಹಾಗೂ ಸ್ವಂತ ಉದ್ದಿಮೆ ಪ್ರಾರಂಭಿಸಲು ಪ್ರತಿಷ್ಠಿತ ಸಂಸ್ಥೆಯಾದ ಐ.ಐ.ಎಂ.ಬಿ. (IIMB) ಬೆಂಗಳೂರಿನಲ್ಲಿ 300 ಅಭ್ಯರ್ಥಿಗಳಿಗೆ ಉದ್ಯಮಶೀಲತಾ ತರಬೇತಿಯನ್ನು 3 ಕೋಟಿ ರೂ. ವೆಚ್ಚದಲ್ಲಿ ನೀಡಲಾಗುವುದು. ರಾಜ್ಯದಲ್ಲಿ 40,000 ಕ್ಕಿಂತಲೂ ಹೆಚ್ಚು ವಕ್ಸ್ ಆಸ್ತಿಗಳಿದ್ದು, ಇವುಗಳ ಸಂರಕ್ಷಣೆ ಮತ್ತು ಅಭಿವೃದ್ಧಿಗಾಗಿ 2023-24 ನೇ ಸಾಲಿನಲ್ಲಿ 10 ಕೋಟಿ ರೂ. ಮತ್ತು ಖಬರಸ್ತಾನ್‌ಗಳ ಅಭಿವೃದ್ಧಿಗಾಗಿ 10 ಕೋಟಿ ರೂ. ಅನುದಾನ ನೀಡಲಾಗಿದೆ.

ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮಕ್ಕೆ ಕಳೆದ ಆಯವ್ಯಯದಲ್ಲಿ 60 ಕೋಟಿ ರೂ. ಒದಗಿಸಲಾಗಿದ್ದು, ಪ್ರಸಕ್ತ ಆಯವ್ಯಯದಲ್ಲಿ ಈ ಮೊತ್ತವನ್ನು 110 ಕೋಟಿ ರೂ. ಹೆಚ್ಚಿಸಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಯತ್ತ ನುಗ್ಗಿದ 'ಪಾಕ್ ಡ್ರೋನ್' ಗಳು!

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

SCROLL FOR NEXT