ಸಂಗ್ರಹ ಚಿತ್ರ 
ರಾಜ್ಯ ಬಜೆಟ್

ರಾಜ್ಯ ಬಜೆಟ್ 2023: ಕ್ರೀಡಾ ಕ್ಷೇತ್ರಕ್ಕೆ ಸಿಕ್ಕಿದ್ದೆಷ್ಟು? ಇಲ್ಲಿದೆ ಮಾಹಿತಿ...

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಸರ್ಕಾರದ ಕೊನೆಯ ಬಜೆಟ್'ನ್ನು ಮಂಡನೆ ಮಾಡಿದ್ದು, ರಾಜ್ಯದ ಕ್ರೀಡಾ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುವ ಸಲುವಾಗಿ ನಾನಾ ಯೋಜನೆಗಳನ್ನು ಘೋಷಿಸಿದ್ದಾರೆ.

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಸರ್ಕಾರದ ಕೊನೆಯ ಬಜೆಟ್'ನ್ನು ಮಂಡನೆ ಮಾಡಿದ್ದು, ರಾಜ್ಯದ ಕ್ರೀಡಾ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುವ ಸಲುವಾಗಿ ನಾನಾ ಯೋಜನೆಗಳನ್ನು ಘೋಷಿಸಿದ್ದಾರೆ.

ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣ, ಮಂಡ್ಯ ಮತ್ತು ಉಡುಪಿ ಜಿಲ್ಲಾ ಕ್ರೀಡಾಂಗಣಗಳಲ್ಲಿ ಸುಸಜ್ಜಿತ ಕ್ರೀಡಾ ವಿಜ್ಞಾನ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಮುಂದಿನ ವರ್ಷಗಳಲ್ಲಿ ರಾಜ್ಯ ಎಲ್ಲಾ ಜಿಲ್ಲಾ ಹಾಗೂ ತಾಲ್ಲೂಕು ಕ್ರೀಡಾಂಗಣಗಳ ಸಮಗ್ರ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು. ಈ ಕ್ರೀಡಾಂಗಣಗಳಲ್ಲಿ ಮಹಿಳೆಯರು ಮತ್ತು ವಿಶೇಷಚೇತನರಿಗೆ ಸೂಕ್ತ ಸೌಕರ್ಯಗಳು ಹಾಗೂ ಯುವಜನರಿಗೆ ಹೊರಾಂಗಣ ಜಿಮ್ ಸೌಲಭ್ಯಗಳನ್ನು ಒದಗಿಸಲಾಗುವುದು. ಈ ಉದ್ದೇಶಕ್ಕಾಗಿ ಪ್ರಸಕ್ತ ಸಾಲಿನಲ್ಲಿ ರೂ.100 ಕೋಟಿ ಅನುದಾನ ಮೀಸಲಿಡಲಾಗಿದೆ ಎಂದು ಹೇಳಿದರು.

ಅಂತರಾಷ್ಟ್ರೀಯ ಮಟ್ಟಡ ಕ್ರೀಡಾಪಟುಗಳನ್ನು ರೂಪಿಸುವ ಅಧಿಕೃತವಾಗಿ ನೋಂದಾವಣಿಯಾಗಿರುವ ಖಾಸಗಿ ಕ್ರೀಡಾ ಸಂಸ್ಥೆಗಳಿಗೆ ರೂ.25 ಲಕ್ಷ ಗಳವರೆಗೆ ಪ್ರೋತ್ಸಾಹಧನವನ್ನು ನೀಡಲಾಗುವುದು. ಬಾಸ್ಕೆಟ್ ಬಾಲ್ ಮತ್ತು ವಾಲಿ ಬಾಲ್ ಕ್ರೀಡೆಗಳನ್ನು ಹೆಚ್ಚಿನ ಸಂಖ್ಯೆಯ ಮಕ್ಕಳಿಗೆ ಪರಿಚಯಿಸಲು ಹೊಸ ಅಂಕಣಗಳನ್ನು ಮತ್ತು ತರಬೇತಿ ಕೇಂದ್ರಗಳನ್ನು ನಿರ್ಮಿಸಲಾಗುವುದು.

ಗ್ರಾಮೀಣ ಮತ್ತು ಸಾಂಪ್ರದಾಯಿಕ ಕ್ರೀಡೆಗಳಾದ ಖೋ-ಖೋ, ಕುಸ್ತಿ, ಕಬಡ್ಡಿ, ಕಂಬಳ, ಎತ್ತಿನಗಾಡಿ ಓಟ ಮುಂತಾದವುಗಳನ್ನು ಇಂದಿನ ಮಕ್ಕಳಿಗೆ ಪರಿಚಯಿಸಲು ಮತ್ತು ಉತ್ತೇಜಿಸಲು ಗ್ರಾಮ ಮಟ್ಟದಿಂದ ರಾಜ್ಯ ಮಟ್ಟದವರೆಗೆ ಗ್ರಾಮೀಣ ಕ್ರೀಡಾಕೂಟಗಳನ್ನು ಆಯೋಜಿಸಲಾಗುವುದು. ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಸಜ್ಜಿತವಾದ ಕ್ರೀಡಾ ಅಂಕಣವನ್ನು ನರೇಗಾ ಯೋಜನೆಯಡಿ 5 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು.

ರಾಜ್ಯದ ಯುವ ಪ್ರತಿಭೆಗಳನ್ನು ಪ್ರೋತ್ಸಾಹಿಸಲು ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆಗೈದ ಐದು ಯುವ ಜನರಿಗೆ ಪ್ರಸಕ್ತ ಸಾಲಿನಿಂದ ಸ್ವಾಮಿ ವಿವೇಕಾನಂದ ಯುವ ಪ್ರಶಸ್ತಿ ನೀಡಲಾಗುವುದು.

ಒಲಿಂಪಿಕ್ಸ್ ಮತ್ತು ಇತರ ಅಂತರರಾಷ್ಟ್ರೀಯ ಕ್ರೀಡೆಗಳಲ್ಲಿ ಪದಕ ಪಡೆಯುವ ಉದ್ದೇಶಕ್ಕೆ ಅತ್ಯುನ್ನತ ತರಬೇತಿ ಹಾಗೂ ಸಲಕರಣೆಗಳನ್ನು ಪಡೆಯಲು ಅನುವಾಗುವಂತೆ 50 ಕೋಟಿ ರೂ. ವೆಚ್ಚದಲ್ಲಿ ಕರ್ನಾಟಕ ಒಲಿಂಪಿಕ್ ಕನಸಿನ ಯೋಜನಾ ನಿಧಿ ಸ್ಥಾಪಿಸಲಾಗುವುದು. ಈ ಯೋಜನೆಯಡಿ 12 ರಿಂದ 19 ವರ್ಷ ವಯೋಮಾನದ ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶವನ್ನು ಪ್ರತಿನಿಧಿಸಿದ ಯುವ ಪ್ರತಿಭಾವಂತ ಕ್ರೀಡಾಪಟುಗಳ ಪ್ರಾಯೋಜನೆ ಮಾಡಲಾಗುವುದು ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ತಮಿಳುನಾಡಿನಲ್ಲಿ ಸಿಎಂ ವಿಜಯ್ ಬಂಪರ್ ಘೋಷಣೆ: ವರ್ಷಕ್ಕೆ 3 ಉಚಿತ LPG ಸಿಲಿಂಡರ್; ಮಹಿಳೆಯರ ಉಚಿತ ಬಸ್ ಪ್ರಯಾಣ ವಿಸ್ತರಣೆ, ಪರಂದೂರು ವಿಮಾನ ನಿಲ್ದಾಣಕ್ಕೆ ಬ್ರೇಕ್..!

ಕಾವೇರಿ ನೀರಿಗಾಗಿ ತಮಿಳುನಾಡು ಕ್ಯಾತೆ: ಆಗಸ್ಟ್.31ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್

ವಾಲ್ಮೀಕಿ ನಿಗಮ ಹಗರಣ: ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ BJP ಬೃಹತ್ ಪ್ರತಿಭಟನೆ, ಅಶೋಕ್-ವಿಜಯೇಂದ್ರ ಸೇರಿ ಹಲವರು ಪೊಲೀಸರ ವಶಕ್ಕೆ..!

ದೆಹಲಿಯಲ್ಲಿ ಭೀಕರ ಅಪಘಾತ: ನಿಯಂತ್ರಣ ತಪ್ಪಿ ಡಿವೈಡರ್‌ ದಾಟಿ SUVಗೆ ಕಾರು ಡಿಕ್ಕಿ, ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸೇರಿ 6 ಮಂದಿಗೆ ಗಾಯ..!

ಇರಾನ್ ಉಸಿರುಗಟ್ಟಿಸಲು ಟ್ರಂಪ್ ಮಾಸ್ಟರ್ ಪ್ಲ್ಯಾನ್: ಆರ್ಥಿಕ 'ಡಿ-ಡೇ’ ಘೋಷಣೆ, ಅಮೆರಿಕ ಹೊಸ ನಿರ್ಬಂಧದಿಂದ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಹೆಚ್ಚಿದ ಆತಂಕ..!