ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ 2023-24ನೇ ಸಾಲಿನ ಬಜೆಟ್ ಮಂಡಿಸಿದ್ದು, ನಾಡ ದೇವತೆ ಮೈಸೂರಿನ ಚಾಮುಂಡೇಶ್ವರಿ ಬೆಟ್ಟದ ಸಮಗ್ರ ಅಭಿವೃದ್ಧಿಗಾಗಿ ಶ್ರೀ ಚಾಮುಂಡೇಶ್ವರಿ ದೇವಸ್ಥಾನ ಅಭಿವೃದ್ದಿ ಪ್ರಾಧಿಕಾರ ರಚನೆ ಮಾಡುವುದಾಗಿ ಘೋಷಿಸಿದ್ದಾರೆ.
ಮುಖ್ಯಮಂತ್ರಿಯಾಗಿ ಇಂದು 7ನೇ ಬಾರಿ ಬಜೆಟ್ ಮಂಡಿಸಿದ ಸಿದ್ದರಾಮಯ್ಯ ಅವರು, ಮೈಸೂರಿನ ಚಾಮುಂಡೇಶ್ವರಿ ದೇವಾಲಯಕ್ಕೆ ರಾಜ್ಯ ಮತ್ತು ಇತರೆ ಭಾಗಗಳಿಂದ ಲಕ್ಷಾಂತರ ಭಕ್ತರು ಬಂದು ಹೋಗುತ್ತಾರೆ. ಭಕ್ತಾಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ಸಲುವಾಗಿ ಮತ್ತು ಚಾಮುಂಡಿ ಬೆಟ್ಟದ ಸಂಪೂರ್ಣ ಅಭಿವೃದ್ಧಿಗಾಗಿ ಶ್ರೀ ಚಾಮುಂಡೇಶ್ವರಿ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಲಾಗುವುದು ಎಂದು ತಿಳಿಸಿದರು.
ಇದನ್ನು ಓದಿ: ಮತ್ತೊಮ್ಮೆ ಮೌಢ್ಯಕ್ಕೆ ಸೆಡ್ಡು ಹೊಡೆದ ಸಿಎಂ ಸಿದ್ದರಾಮಯ್ಯ: ದೇವಸ್ಥಾನಕ್ಕೆ ಭೇಟಿ ನೀಡದೆಯೇ ಬಜೆಟ್ ಮಂಡನೆ
ರಾಜ್ಯದಲ್ಲಿರುವ ದೇವಾಲಯಗಳ ನಿರ್ಮಾಣಕ್ಕೆ ಹೊರ ರಾಜ್ಯಗಳ ಶಿಲ್ಪಿಗಳನ್ನು ಅಲಂಬಿಸಬೇಕಾಗುತ್ತದೆ. ಇದನ್ನು ತಪ್ಪಿಸಲು ಇನ್ನುಮುಂದೆ ನಮ್ಮ ರಾಜ್ಯದಲ್ಲೇ ಇರುವ ನುರಿತ ಶಿಲ್ಪಿಗಳನ್ನು ತಯಾರಿಸಲು ಕೋಲಾರ ಜಿಲ್ಲೆಯಲ್ಲಿ ಶಿಲ್ಪಕಲಾ ತರಬೇತಿ ಕೇಂದ್ರ ಪ್ರಾರಂಭಿಸುವುದಾಗಿ ಸಿಎಂ ಘೋಷಣೆ ಮಾಡಿದ್ದಾರೆ.
ಆದಾಯವಿಲ್ಲದ ಸಿ ವರ್ಗದ 121 ಮುಜರಾಯಿ ದೇವಸ್ಥಾನಗಳಿಗೆ 15 ಸಾವಿರವರೆಗೆ ನಗದು ಸಹಾಯಧನ ನೀಡಲಾಗುತ್ತಿದೆ. ಇನ್ನು ಮುಂದೆ ಈ ದೇವಸ್ಥಾನಗಳಿಗೆ ಸಮಾನವಾಗಿ 15 ಸಾವಿರ ನೀಡುವುದಾಗಿ ಸಿದ್ದರಾಮಯ್ಯನವರು ಘೋಷಣೆ ಮಾಡಿದ್ದಾರೆ.