ಬಜೆಟ್ ಮಂಡನೆಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ 
ರಾಜ್ಯ ಬಜೆಟ್

ಮತ್ತೊಮ್ಮೆ ಮೌಢ್ಯಕ್ಕೆ ಸೆಡ್ಡು ಹೊಡೆದ ಸಿಎಂ ಸಿದ್ದರಾಮಯ್ಯ: ದೇವಸ್ಥಾನಕ್ಕೆ ಭೇಟಿ ನೀಡದೆಯೇ ಬಜೆಟ್ ಮಂಡನೆ

ಸಾಮಾನ್ಯವಾಗಿ ಬಜೆಟ್ ಮಂಡನೆಗೂ ಮುನ್ನ ದೇವಸ್ಥಾನಕ್ಕೆ ಭೇಟಿ ನೀಡುವ ಸಂಪ್ರದಾಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಲಾಂಜಲಿ ಇಟ್ಟಿದ್ದು, ದೇಗುಲಕ್ಕೆ ಭೇಟಿ ನೀಡದೆಯೇ ನೇರವಾಗಿ ವಿಧಾನಸಭೆಗೆ ತೆರಳಿ 2023-24ನೇ ಸಾಲಿನ ಬಜೆಟ್ ಮಂಡಿಸಿದ್ದಾರೆ.

ಬೆಂಗಳೂರು: ಸಾಮಾನ್ಯವಾಗಿ ಬಜೆಟ್ ಮಂಡನೆಗೂ ಮುನ್ನ ದೇವಸ್ಥಾನಕ್ಕೆ ಭೇಟಿ ನೀಡುವ ಸಂಪ್ರದಾಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಲಾಂಜಲಿ ಇಟ್ಟಿದ್ದು, ದೇಗುಲಕ್ಕೆ ಭೇಟಿ ನೀಡದೆಯೇ ನೇರವಾಗಿ ವಿಧಾನಸಭೆಗೆ ತೆರಳಿ ಶುಕ್ರವಾರ 2023-24ನೇ ಸಾಲಿನ ಬಜೆಟ್ ಮಂಡಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ನೇರವಾಗಿ ವಿಧಾನಸೌಧಕ್ಕೆ ಆಗಮಿಸಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯ ಅಧ್ಯಕ್ಷತೆ ವಹಿಸುವ ಮೂಲಕ, ಬಜೆಟ್ ಮಂಡನೆಗೂ ಮುನ್ನ ದೇವಸ್ಥಾನಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುವ ಸಂಪ್ರದಾಯವನ್ನು ಮುರಿದರು.

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ತಮ್ಮ ಅಧಿಕಾರಾವಧಿಯಲ್ಲಿ ಬಜೆಟ್ ಅಧಿವೇಶನದಲ್ಲಿ ಪಾಲ್ಗೊಳ್ಳಲು ಬರುವ ಮುನ್ನ ಎರಡು ದೇವಸ್ಥಾನಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದರು. ಬೊಮ್ಮಾಯಿ ಅವರು ಆರ್‌ಟಿ ನಗರದ ಶ್ರೀಕಂಠೇಶ್ವರ ದೇವಸ್ಥಾನ ಮತ್ತು ಆಂಜನೇಯನ ದೇಗುಲಕ್ಕೆ ಭೇಟಿ ನೀಡಿದ್ದರು. 

ಅಂಧಶ್ರದ್ಧೆಗಳಿಗೆ ಉತ್ತೇಜನ ನೀಡದ ಸಿಎಂ ಸಿದ್ದರಾಮಯ್ಯನವರು ವಾಸ್ತು ಕಾರಣಕ್ಕೆ ಮುಚ್ಚಲಾಗಿದ್ದ ವಿಧಾನಸೌಧದ ಕಚೇರಿಯ ದಕ್ಷಿಣ ದ್ವಾರವನ್ನು ತೆಗೆಸಿದ್ದರು. ಅವರು ಸಿಎಂ ಆಗಿದ್ದ ಅವಧಿಯಲ್ಲಿ ಹಲವು ಬಾರಿ ಚಾಮರಾಜನಗರ ನಗರಕ್ಕೆ ಭೇಟಿ ನೀಡಿದ್ದರು. ಚಾಮರಾಜನಗರಕ್ಕೆ ಭೇಟಿ ನೀಡಿದವರು ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ನಂಬಿಕೆ ಇತ್ತು. 

ಬಜೆಟ್ ಮಂಡನೆ ವೇಳೆ ಹಾಜರಿರುವಂತೆ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದರು. ಒಗ್ಗಟ್ಟು ಪ್ರದರ್ಶಿಸಿ ಪ್ರತಿಪಕ್ಷಗಳ ದಾಳಿಗೆ ತಕ್ಕ ಉತ್ತರ ನೀಡುವಂತೆಯೂ ಕೇಳಿಕೊಂಡರು. ಖಾತರಿ ಯೋಜನೆಗಳನ್ನು ಅನುಷ್ಠಾನಗೊಳಿಸಿಯೇ ತೀರುವ ಒತ್ತಡದಲ್ಲಿರುವುದರಿಂದ ತಮ್ಮತಮ್ಮ ಕ್ಷೇತ್ರಗಳಿಗೆ ಹೆಚ್ಚಿನ ಅನುದಾನಕ್ಕಾಗಿ ಒತ್ತಾಯ ಮಾಡಬೇಡಿ ಎಂದು ಅವರು ಶಾಸಕರನ್ನು ಕೋರಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

Ragigudda Metro ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

SCROLL FOR NEXT