ಇಂದಿರಾ ಕ್ಯಾಂಟೀನ್ ಸಾಂದರ್ಭಿಕ ಚಿತ್ರ 
ರಾಜ್ಯ ಬಜೆಟ್

ಕರ್ನಾಟಕ ಬಜೆಟ್ 2023-24: ಇಂದಿರಾ ಕ್ಯಾಂಟೀನ್ ಗೆ 100 ಕೋಟಿ ರೂ. ಮೀಸಲು

ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಂಡಿಸಿದ 2023-24ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ಇಂದಿರಾ ಕ್ಯಾಂಟೀನ್ ಗಳ ಬಲವರ್ಧನೆಗೆ ಆದ್ಯತೆ ನೀಡಲಾಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ನಿರ್ಲಕ್ಷಿಸಲಾಗಿದ್ದ ಇಂದಿರಾ ಕ್ಯಾಂಟೀನ್ ಗಳ ಅಭಿವೃದ್ಧಿಗಾಗಿ 100 ಕೋಟಿ ರೂ. ಮೀಸಲಿಡಲಾಗುವುದು ಎಂದು ಅವರು ತಿಳಿಸಿದರು. 

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಂಡಿಸಿದ 2023-24ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ಇಂದಿರಾ ಕ್ಯಾಂಟೀನ್ ಗಳ ಬಲವರ್ಧನೆಗೆ ಆದ್ಯತೆ ನೀಡಲಾಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ನಿರ್ಲಕ್ಷಿಸಲಾಗಿದ್ದ ಇಂದಿರಾ ಕ್ಯಾಂಟೀನ್ ಗಳ ಅಭಿವೃದ್ಧಿಗಾಗಿ 100 ಕೋಟಿ ರೂ. ಮೀಸಲಿಡಲಾಗುವುದು ಎಂದು ಅವರು ತಿಳಿಸಿದರು. 

2017ರಲ್ಲಿ ಸಿದ್ದರಾಮಯ್ಯ ಅವರು ಸಿಎಂ ಆಗಿದ್ದ ವೇಳೆ ಇಂದಿರಾ ಕ್ಯಾಂಟೀನ್ ಆರಂಭಿಸಿದ್ದರು. ಕಡಿಮೆ ದರದಲ್ಲಿ ಆಹಾರ ನೀಡುವ ಇಂದಿರಾ ಕ್ಯಾಂಟೀನ್ ಭಾರೀ ಜನಪ್ರಿಯವಾಗಿತ್ತು. ಬೆಂಗಳೂರಿನಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲೇ 175 ಇಂದಿರಾ ಕ್ಯಾಂಟೀನ್‌ಗಳನ್ನು ಸ್ಥಾಪಿಸಲಾಗಿತ್ತು. ಇದಲ್ಲದೆ ಹಲವು ಜಿಲ್ಲಾ ಕೇಂದ್ರಗಳಲ್ಲೂ ಇಂದಿರಾ ಕ್ಯಾಂಟೀನ್ ಆರಂಭಿಸಲಾಗಿತ್ತು. ಇದು ಸಿದ್ದರಾಮಯ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿತ್ತು.

2023ರಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಇಂದಿರಾ ಕ್ಯಾಂಟೀನ್ ಗಳ ಪರಿಶೀಲನೆ ಕುರಿತು ಅಧಿಕಾರಿಗಳಿಂದ ಮುಖ್ಯಮಂತ್ರಿ ವರದಿ ಕೇಳಿದ್ದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ಇಂದಿರಾ ಕ್ಯಾಂಟೀನ್‌ನಲ್ಲಿ ಊಟದ ಮೆನು ಬದಲಾವಣೆ ಮಾಡಿ ಗುಣಮಟ್ಟದ ಶುಚಿ-ರುಚಿ ಊಟ ನೀಡಲು ನಿರ್ಧಾರ ಮಾಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿ: 6 ಅಂತಸ್ತಿನ ಕಟ್ಟಡ ಕುಸಿತ; ಓರ್ವ ಸಾವು, ಹಲವರು ಸಿಲುಕಿರುವ ಶಂಕೆ

ಉಡುಪಿ: ವಿಟ್ಲಪಿಂಡಿ ಉತ್ಸವದ ವೇಳೆ ಸ್ವಾಮೀಜಿಗಳ ಕೈಯಿಂದ ಜಾರಿದ ಶ್ರೀಕೃಷ್ಣನ ಉತ್ಸವ ಮೂರ್ತಿ, ಭಕ್ತರಲ್ಲಿ ಹೆಚ್ಚಿದ ಆತಂಕ!

ಮಧ್ಯಪ್ರದೇಶದಲ್ಲಿ ನಕಲಿ ಮದ್ಯ ಸೇವಿಸಿ 12 ಮಂದಿ ಸಾವು, ಹಲವರ ಸ್ಥಿತಿ ಗಂಭೀರ! ಕಠಿಣ ಕ್ರಮಕ್ಕೆ ಸಿಎಂ ಆದೇಶ

Maruti Suzuki Baleno ಹೊಸ ಆವೃತ್ತಿ ಬಿಡುಗಡೆ: ಬೆಲೆ, ಮೈಲೇಜ್, ವೈಶಿಷ್ಟ್ಯ: ಕಾರು ಖರೀದಿಸುವ ಮುನ್ನ ನೀವು ತಿಳಿಯಬೇಕಾದ ಅಂಶಗಳಿವು...

ಫೋನ್ ಕರೆ ಸ್ವೀಕರಿಸಲು ಬೈಕ್ ನಿಲ್ಲಿಸಿದ್ದ ಕುಟುಂಬಕ್ಕೆ ವೇಗದ ಕಾರು ಡಿಕ್ಕಿ; 3 ವರ್ಷದ ಮಗು ಸೇರಿ ಮೂವರ ಸಾವು