ಸಿಎಂ ಸಿದ್ದರಾಮಯ್ಯ 
ರಾಜ್ಯ ಬಜೆಟ್

ಜನತೆಯೇ ನನ್ನ ಪಾಲಿನ ಜನಾರ್ಧನರು, ನನ್ನ ಮತ್ತು ನನ್ನ ಸರ್ಕಾರದ ಮೇಲೆ ನಿಮ್ಮೆಲ್ಲರ ಆಶೀರ್ವಾದ ಇರಲಿ: ಸಿಎಂ ಸಿದ್ದರಾಮಯ್ಯ

ಜನತೆಯೇ ನನ್ನ ಪಾಲಿನ ಜನಾರ್ಧನರು, ನನ್ನ ಮತ್ತು ನನ್ನ ಸರ್ಕಾರದ ಮೇಲೆ ನಿಮ್ಮೆಲ್ಲರ ಆಶೀರ್ವಾದ ಇರಲಿ ಎಂದು ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.

ಬೆಂಗಳೂರು: ಜನತೆಯೇ ನನ್ನ ಪಾಲಿನ ಜನಾರ್ಧನರು, ನನ್ನ ಮತ್ತು ನನ್ನ ಸರ್ಕಾರದ ಮೇಲೆ ನಿಮ್ಮೆಲ್ಲರ ಆಶೀರ್ವಾದ ಇರಲಿ ಎಂದು ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.

ಪ್ರಸಕ್ತ ಸಾಲಿನ ಬಜೆಟ್ ಮಂಡನೆಗೂ ಮುನ್ನ ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿರುವ ಅವರು, ಜನತೆಯೇ ನನ್ನ ಪಾಲಿನ ಜನಾರ್ಧನರು, ಕೆಲವೇ ಹೊತ್ತಿನಲ್ಲಿ ನನ್ನ 14ನೇ ಬಜೆಟ್ ಮಂಡಿಸಲಿದ್ದೇನೆ ನನ್ನ ಮತ್ತು ನನ್ನ ಸರ್ಕಾರದ ಮೇಲೆ ನಿಮ್ಮೆಲ್ಲರ ಆಶೀರ್ವಾದ ಇರಲಿ ಎಂದು ಹೇಳಿದ್ದಾರೆ.

ನನ್ನ ಹಿಂದಿನ ಎಲ್ಲ ಬಜೆಟ್ ಗಳಲ್ಲಿ ‘ಸರ್ವರಿಗೂ ಸಮಪಾಲು, ಸಮಬಾಳು’ ಎಂಬ ಮೂಲಮಂತ್ರದ ‘ಕರ್ನಾಟಕ ಮಾದರಿ’ಯ ಆಡಳಿತವನ್ನು ನೀಡುವ ಪ್ರಯತ್ನ ಮಾಡುತ್ತಾ ಬಂದಿದ್ದೆ. ಪ್ರಸ್ತುತ ಮಂಡಿಸುತ್ತಿರುವ ಆಯವ್ಯಯ ಪತ್ರದಲ್ಲಿ ಈ ಮಾದರಿಯನ್ನು ಇನ್ನಷ್ಟು ಆಳವಾಗಿಸುವ, ವಿಸ್ತಾರವಾಗಿಸುವ ಪ್ರಯತ್ನ ಮಾಡುತ್ತೇನೆಂದು ತಿಳಿಸಿದ್ದಾರೆ.

ರಾಜಕೀಯ ಪ್ರೇರಿತ ಟೀಕೆ-ಟಿಪ್ಪಣಿಗಳಿಗೆ ಕಿವಿಗೊಡಬೇಡಿ. ನುಡಿದಂತೆಯೇ ನಡೆದಿದ್ದೇನೆ, ಮುಂದೆಯೂ ನಡೆಯುತ್ತೇನೆ. ನಿಮ್ಮ ನಂಬಿಕೆ-ವಿಶ್ವಾಸಗಳನ್ನು ಹುಸಿಗೊಳಿಸುವುದಿಲ್ಲ. ಇದು ನಾನು ನೀಡುವ ಅತ್ಯುನ್ನತ ಗ್ಯಾರಂಟಿ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT