ಕೇಂದ್ರ ಬಜೆಟ್

ಕೇಂದ್ರ ಬಜೆಟ್ 2023: 50 ಹೆಚ್ಚುವರಿ ವಿಮಾನ ನಿಲ್ದಾಣ, ಏರೋಡ್ರಮ್, ಹೆಲಿಪೋರ್ಟ್‌'ಗಳ ನಿರ್ಮಾಣ

Manjula VN

ನವದೆಹಲಿ: 2023-24ನೇ ಸಾಲಿನ ಕೇಂದ್ರ ಬಜೆಟ್ ಘೋಷಣೆ ಮಾಡಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಪ್ರಾದೇಶಿಕ ಸಂಪರ್ಕ ಸುಧಾರಣೆಗೆ 50ಕ್ಕೂ ಹೆಚ್ಚು ವಿಮಾನ ನಿಲ್ದಾಣ, ಏರೋಡ್ರೋಮ್‌, ಹೆಲಿಪೋರ್ಟ್‌ಗಳನ್ನು ಸ್ಥಾಪಿಸುವುದಾಗಿ ಘೋಷಣೆ ಮಾಡಿದ್ದಾರೆ.

ಲೋಕಸಭೆಯಲ್ಲಿ ಪ್ರಸಕ್ತ ಸಾಲಿನ ಬಜೆಟ್ ಘೋಷಣೆ ಮಾಡಿದ ಅವರು, ಪ್ರಾದೇಶಿಕ ಸಂಪರ್ಕ ಸುಧಾರಣೆಗೆ 50ಕ್ಕೂ ಹೆಚ್ಚು ವಿಮಾನ ನಿಲ್ದಾಣ, ಏರೋಡ್ರೋಮ್‌, ಹೆಲಿಪೋರ್ಟ್‌ಗಳನ್ನು ಸ್ಥಾಪಿಸುವುದಾಗಿ ಹೇಳಿದರು.

ದೇಶದಾದ್ಯಂತ ಪ್ರಾದೇಶಿಕ ಸಂಪರ್ಕವನ್ನು ಸುಧಾರಿಸುವ ಗುರಿಯನ್ನು ಹೊಂದಿರುವ ಉಡಾನ್ ಯೋಜನೆಗೆ ಈ ಕ್ರಮದಿಂದ ಮತ್ತಷ್ಟು ಉತ್ತೇಜನ ಸಿಗುವ ನಿರೀಕ್ಷೆಯಿದೆ.

‘ಸಂಪರ್ಕ ವ್ಯವಸ್ಥೆಯನ್ನು ಬಲಪಡಿಸಲು 50 ಹೆಚ್ಚುವರಿ ವಿಮಾನ ನಿಲ್ದಾಣಗಳು, ಏರೋಡ್ರೋಮ್‌, ಹೆಲಿಪ್ಯಾಡ್‌ಗಳು ಮತ್ತು ಜಲ ಮಾರ್ಗಗಳನ್ನು ರೂಪಿಸಲಾಗುವುದು’ ಎಂದು ಸೀತಾರಾಮನ್ ಅವರು ಹೇಳಿದರು.

SCROLL FOR NEXT