ಕೇಂದ್ರ ಬಜೆಟ್

ಕೇಂದ್ರ ಬಜೆಟ್ 2023: ಮುಂದಿನ ಮೂರು ವರ್ಷಗಳಲ್ಲಿ 38,800 ಶಿಕ್ಷಕರ ನೇಮಕ

Nagaraja AB

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್  ಶಿಕ್ಷಕರ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಶುಭ ಸುದ್ದಿಯನ್ನು ಘೋಷಿಸಿದ್ದಾರೆ.  ಏಕಲವ್ಯ ಮಾದರಿ ವಸತಿ ಶಾಲೆಗಳಿಗೆ 8,800 ಶಿಕ್ಷಕರು ಮತ್ತು ಸಹಾಯಕ ಸಿಬ್ಬಂದಿಯನ್ನು ಕೇಂದ್ರ ಸರ್ಕಾರ ನೇಮಿಸಿಕೊಳ್ಳಲಿದೆ ಎಂದು ಅವರು ಹೇಳಿದರು. 

ನಿರ್ಮಲಾ ಸೀತಾರಾಮನ್ ತಮ್ಮ ಐದನೇ ಬಜೆಟ್ ನಲ್ಲಿ  ದುರ್ಬಲ ಬುಡಕಟ್ಟು ಗುಂಪುಗಳಿಗೆ ಪ್ರಮುಖ ಯೋಜನೆಗಳನ್ನು ಘೋಷಿಸಿದರು.  3.5 ಲಕ್ಷ ಬುಡಕಟ್ಟು ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುತ್ತಿರುವ 740  ಏಕಲವ್ಯ ಮಾದರಿ ವಸತಿ ಶಾಲೆಗಳಿಗೆ ಇನ್ನೂ ಮೂರು ವರ್ಷಗಳಲ್ಲಿ ಶಿಕ್ಷಕರು ಹಾಗೂ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು. 

ನಿರ್ದಿಷ್ಟವಾಗಿ ದುರ್ಬಲ ಬುಡಕಟ್ಟು ಗುಂಪುಗಳ ಸಾಮಾಜಿಕ-ಆರ್ಥಿಕ ಪರಿಸ್ಥಿತಿ ಸುಧಾರಿಸಲು, PVTG ಅಭಿವೃದ್ಧಿ ಮಿಷನ್ ಪ್ರಾರಂಭಿಸಲಾಗುವುದು. ಈ ಮಿಷನ್ ನಡಿ ಬುಡಕಟ್ಟು ಸಮುದಾಯಕ್ಕೆ ಸುರಕ್ಷಿತ ಮನೆ, ಶುದ್ಧ ಕುಡಿಯುವ ನೀರು, ಚರಂಡಿ, ಶಿಕ್ಷಣ ಆರೋಗ್ಯ, ರಸ್ತೆ ಮತ್ತು ಟೆಲಿಕಾಂ ಸಂಪರ್ಕ ಮತ್ತಿತರ ಸುಸ್ಥಿರ ಜೀವನೋಪಾಯದ ಅಗತ್ಯತೆಗಳನ್ನು ಪೂರೈಸಲಾಗುವುದು ಎಂದರು. 

ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ಕ್ರಿಯಾ ಯೋಜನೆಯಡಿ ಮುಂದಿನ 3 ವರ್ಷಗಳಲ್ಲಿ ಮಿಷನ್ ಕಾರ್ಯಗತಗೊಳಿಸಲು ರೂ. 15,000 ಕೋಟಿ ಮೀಸಲಿಡಲಾಗುವುದು ಎಂದು ಅವರು ಹೇಳಿದರು.

ಮುಂದಿನ 3 ವರ್ಷಗಳಲ್ಲಿ ಏಕಲವ್ಯ ಮಾದರಿ ವಸತಿ ಶಾಲೆಗಳು (EMRS), 3.5 ಲಕ್ಷ ಬುಡಕಟ್ಟು ವಿದ್ಯಾರ್ಥಿಗಳಿಗೆ ಸೇವೆ ಸಲ್ಲಿಸುತ್ತಿರುವ ಏಕಲವ್ಯ ಮಾದರಿ ವಸತಿ ಶಾಲೆಗಳ ಅಡಿಯಲ್ಲಿ 740 ಶಾಲೆಗಳಿಗೆ ಕೇಂದ್ರವು 38,800 ಶಿಕ್ಷಕರು ಮತ್ತು ಸಹಾಯಕ ಸಿಬ್ಬಂದಿಯನ್ನು ನೇಮಿಸಿಕೊಳ್ಳಲಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.

SCROLL FOR NEXT