ಕೇಂದ್ರ ಬಜೆಟ್

ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಗೆ ರೂ. 2 ಲಕ್ಷ ಕೋಟಿ: ನಿರ್ಮಲಾ ಸೀತಾರಾಮನ್

Nagaraja AB

ನವದೆಹಲಿ: ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಗೆ ರೂ. 2 ಲಕ್ಷ ಕೋಟಿ ವೆಚ್ಚವನ್ನು ಕೇಂದ್ರ ಸರ್ಕಾರದಿಂದ ಭರಿಸಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿಂದು ತಿಳಿಸಿದರು.

ಎಲ್ಲಾ ಅಂತ್ಯೋದಯ ಹಾಗೂ ದುರ್ಬಲ ವರ್ಗದ ಕುಟುಂಬಗಳಿಗೆ ಮುಂದಿನ ಒಂದು ವರ್ಷ ಆಹಾರ ಧಾನ್ಯ ಪೂರೈಕೆಗಾಗಿ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ ರೂ. 2 ಲಕ್ಷ ವೆಚ್ಚವನ್ನು ಕೇಂದ್ರ ಸರ್ಕಾರದಿಂದಲೇ ಭರಿಸಲಾಗುವುದು ಎಂದು ಅವರು ತಿಳಿಸಿದರು.

ಈ ಯೋಜನೆಯಡಿ ಕೋವಿಡ್-19  ಸಾಂಕ್ರಾಮಿಕ ಸಮಯದಲ್ಲಿ, 28 ತಿಂಗಳ ಕಾಲ 80 ಕೋಟಿಗೂ ಹೆಚ್ಚು ಜನರಿಗೆ ಉಚಿತ ಆಹಾರ ಧಾನ್ಯಗಳನ್ನು ಪೂರೈಸುವ ಮೂಲಕ ಯಾರೂ ಕೂಡಾ ಹಸಿವಿನಿಂದ ಮಲಗದಂತೆ ನೋಡಿಕೊಳ್ಳಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ಮಾಹಿತಿ ನೀಡಿದರು.

SCROLL FOR NEXT