ಮುಖ್ಯಮಂತ್ರಿ ಅಭಿನಂದನೆ ಚಿತ್ರ 
ಕೇಂದ್ರ ಬಜೆಟ್

ಕೇಂದ್ರ ಬಜೆಟ್ 2023: ಚುನಾವಣೆ ಮೇಲೆ ಕಣ್ಣು; ಕರ್ನಾಟಕದ ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ನೆರವು

ರಾಜ್ಯ ವಿಧಾನಸಭಾ ಚುನಾವಣೆ ಸನ್ನಿಹದಲ್ಲಿರುವಂತೆಯೇ, ಭದ್ರಾ ಮೇಲ್ದಂಡೆ ಯೋಜನೆಗೆ ರೂ. 5,300 ಕೋಟಿ ನೆರವನ್ನು ಕೇಂದ್ರದಿಂದ ಒದಗಿಸಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ಘೋಷಿಸಿದ್ದಾರೆ.

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಸನ್ನಿಹದಲ್ಲಿರುವಂತೆಯೇ, ಭದ್ರಾ ಮೇಲ್ದಂಡೆ ಯೋಜನೆಗೆ ರೂ. 5,300 ಕೋಟಿ ನೆರವನ್ನು ಕೇಂದ್ರದಿಂದ ಒದಗಿಸಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ಘೋಷಿಸಿದ್ದಾರೆ.  ಲೋಕಸಭೆಯಲ್ಲಿಂದು ಬಜೆಟ್ ಮಂಡಿಸಿದ ನಿರ್ಮಲಾ ಸೀತಾರಾಮನ್,  ಬರ ಪೀಡಿತ ಮಧ್ಯ ಕರ್ನಾಟಕದಲ್ಲಿ ಭದ್ರಾ ಮೇಲ್ದಂಡೆ ಯೋಜನೆ ಅನುಷ್ಠಾನಕ್ಕಾಗಿ ಕೇಂದ್ರದಿಂದ ರೂ. 5,300 ಕೋಟಿ ನೆರವು ನೀಡಲಾಗುವುದು ಎಂದರು. 

ಈ ಯೋಜನೆಯಡಿ ಮೊದಲ ಹಂತದಲ್ಲಿ ತುಂಗಾ ನದಿಯಿಂದ 17.40 ಸಾವಿರ ಮಿಲಿಯನ್ ಟಿಎಂಸಿ ನೀರನ್ನು ಭದ್ರಾಗೆ ಮತ್ತು ಎರಡನೇ ಹಂತದಲ್ಲಿ ಭದ್ರಾ ಜಲಾಶಯದಿಂದ 29.90 ಟಿಎಂಸಿ ನೀರನ್ನು ಕೃಷ್ಣಾ ಜಲಾನಯನ ಪ್ರದೇಶದ ತುಂಗಭದ್ರಾ ಉಪ ಜಲಾನಯನ ಪ್ರದೇಶದಲ್ಲಿರುವ ಅಜ್ಜಂಪುರ ಬಳಿಯ ಸುರಂಗಕ್ಕೆ ಎತ್ತುವ ಉದ್ದೇಶ ಹೊಂದಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಈ ಬಾರಿಯ ಬಜೆಟ್ ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ರೂ. 5,300 ಕೋಟಿ ಅನುದಾನ ಒದಗಿಸುವ ಘೋಷಣೆಗಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹಾಗೂ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಧನ್ಯವಾದ ಸಲ್ಲಿಸಿದ್ದಾರೆ. ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸುವಂತೆಯೂ ಮುಖ್ಯಮಂತ್ರಿ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. 

2000ನೇ ಇಸವಿಯಲ್ಲಿ ಯೋಜನೆ ಘೋಷಿಸಲಾಯಿತು. 2003ರಲ್ಲಿ ಆಡಳಿತಾತ್ಮಕ ಅನುಮೋದನೆ ಸಿಕ್ಕಿತು. 2008ರಲ್ಲಿ ಯೋಜನೆಗೆ ಚಾಲನೆ ನೀಡಲಾಯಿತು. ಭೂಸ್ವಾಧೀನ ಪ್ರಕ್ರಿಯೆ, ಅರಣ್ಯ ಇಲಾಖೆ ಅನುಮತಿ ಪಡೆದುಕೊಳ್ಳುವುದು ವಿಳಂಬ, ವೆಚ್ಚ ಹೆಚ್ಚಳ ಸೇರಿದಂತೆ ನಾನಾ ಕಾರಣಗಳಿಂದ ಯೋಜನೆ ಆಮೆಗತಿಯಲ್ಲಿ ಸಾಗಿತ್ತು. ಸದ್ಯ ನಿಧಾನಕ್ಕೆ ವೇಗ ದೊರೆಯುತ್ತಿದೆ. ಇದೀಗ ಕೇಂದ್ರದ ನೆರವಿನಿಂದ ಮತ್ತಷ್ಟು ಉತ್ತೇಜನ ಸಿಗಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬೆಂಜಮಿನ್ ನೆತನ್ಯಾಹು ಮಾಡಿದ ಫೋನ್ ಕರೆಯೇ ಅಮೆರಿಕ-ಇರಾನ್ ಶಾಂತಿ ಮಾತುಕತೆ ಹಳಿತಪ್ಪುವಂತೆ ಮಾಡಿತು'

ಮಹಿಳಾ ಕೋಟಾ ಕಾನೂನು ಸಮಾನತೆಯ ಭಾರತಕ್ಕೆ ಪ್ರಮುಖ: ಪ್ರಧಾನಿ ಮೋದಿ

ಕ್ಷೇತ್ರಗಳ ಮರುವಿಂಗಡಣೆ ಪ್ರಸ್ತಾಪ ಅತ್ಯಂತ ಅಪಾಯಕಾರಿ ಹಾಗೂ ಸಂವಿಧಾನದ ಮೇಲಿನ ದಾಳಿ: ಸೋನಿಯಾ ಗಾಂಧಿ

ರಾಜ್ಯದಲ್ಲಿ ರಣ ಬಿಸಿಲು: 35 ಡಿಗ್ರಿ ತಲುಪಿದ ತಾಪಮಾನ, ಮಳೆ ಮುನ್ಸೂಚನೆ ಇಲ್ಲ ಎಂದ IMD

ಆಗ VOLVO, ಈಗ BMW; ಹಾರುಬೂದಿ ಸಾಗಿಸುತ್ತಿದ್ದ ಲಾರಿ ಉರುಳಿ ಐಶಾರಾಮಿ ಕಾರು ಅಪ್ಪಚ್ಚಿ, Video

SCROLL FOR NEXT