ಆಯವ್ಯಯ ಸಿದ್ದಪಡಿಸಿದ ನಿರ್ಮಲಾ ಸೀತಾರಾಮನ್ ಟೀಮ್ 
ಕೇಂದ್ರ ಬಜೆಟ್

ಬಿಯಾಂಡ್ ಬಜೆಟ್: ದಣಿವರಿಯದೆ ಆಯವ್ಯಯ ಸಿದ್ದಪಡಿಸಿದ ನಿರ್ಮಲಾ ಸೀತಾರಾಮನ್ ಟೀಮ್ ನ ಮಾಸ್ಟರ್ ಮೈಂಡ್ಸ್ ಇವರೇ!

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ 2023 ರ ಬಜೆಟ್ ಹಿಂದೆ ದಣಿವರಿಯದೆ ಕೆಲಸ ಮಾಡುವ ತಂಡ ಹೊಂದಿದೆ.

ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ 2023 ರ ಬಜೆಟ್ ಹಿಂದೆ ದಣಿವರಿಯದೆ ಕೆಲಸ ಮಾಡುವ ತಂಡ ಹೊಂದಿದೆ. ಈ ವರ್ಷದ ಯೂನಿಯನ್ ಬಜೆಟ್ 2023 ರ ತಯಾರಿಯ ಹಿಂದೆ ಅಧಿಕಾರಿಗಳು ಮತ್ತು ಸಲಹೆಗಾರರ ತಂಡ ಇಲ್ಲಿದೆ.

ಕೇಂದ್ರದಲ್ಲಿ 2014ರಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೇರಿದ ಬಳಿಕ ಮಂಡನೆಯಾಗುತ್ತಿರುವ ಸತತ 11ನೇ ಬಜೆಟ್‌ ಇದಾಗಿದೆ. ನಿರ್ಮಲಾ ಸೀತಾರಾಮನ್‌ ಅವರು ಈ ಬಜೆಟ್‌ ಮಂಡಿಸುತ್ತಿದ್ದಾರಾದರೂ, ಅದರ ತಯಾರಿಕೆಯಲ್ಲಿ ಹಲವು ಉನ್ನತಾಧಿಕಾರಿಗಳು ಹಾಗೂ ಸಲಹೆಗಾರರು ಪಾತ್ರ ವಹಿಸಿದ್ದಾರೆ. ಅಂತಹ ಕೆಲವು ಪ್ರಮುಖರ ಮಾಹಿತಿ ಇಲ್ಲಿದೆ.

ಟಿ.ವಿ. ಸೋಮನಾಥನ್‌: ಹಣಕಾಸು ಕಾರ್ಯದರ್ಶಿ
ತಮಿಳುನಾಡು ಕೆಡರ್‌ನ 1987ರ ಬ್ಯಾಚ್‌ನ ಐಎಎಸ್‌ ಅಧಿಕಾರಿ. ಇವರು ಈ ಮೊದಲು ಅವರು ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯದ ಜಂಟಿ ಕಾರ್ಯದರ್ಶಿ ಮತ್ತು 2015–2017 ರ ಅವಧಿಯಲ್ಲಿ ಪ್ರಧಾನಿ ಮೋದಿ ಅವರಿಗೆ ಜಂಟಿ ಕಾರ್ಯದರ್ಶಿಯಾಗಿದ್ದರು. ಈ ಹಿಂದೆ ವಿಶ್ವ ಬ್ಯಾಂಕ್‌ನ ಬಜೆಟ್‌ ಪಾಲಿಸಿ ಸಮಿತಿಯ ವ್ಯವಸ್ಥಾಪಕರಾಗಿಯೂ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ.

ವಿವೇಕ್‌ ಜೋಶಿ: ಹಣಕಾಸು ಸೇವೆಗಳ ಇಲಾಖೆಯ ಕಾರ್ಯದರ್ಶಿ
ಡಾ. ವಿವೇಸ್ ಜೋಶಿ ಅವರು 1989ರ ಬ್ಯಾಚ್‌ನ ಐಎಎಸ್‌ ಅಧಿಕಾರಿ. ಹಣಕಾಸು ಸೇವೆಗಳ ಇಲಾಖೆಯ ಕಾರ್ಯದರ್ಶಿಯಾಗಿ, ಬ್ಯಾಂಕಿಂಗ್‌ಗೆ ಸಂಬಂಧಿಸಿದ ನೀತಿಗಳು, ಯೋಜನೆಗಳ ವ್ಯವಹಾರಗಳನ್ನು ನೋಡಿಕೊಳ್ಳುತ್ತಿದ್ದಾರೆ. ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ (ಆರ್‌ಬಿಐ) ಮಂಡಳಿಯ ಸದಸ್ಯರೂ ಆಗಿರುವ ಜೋಶಿ, ಇದಕ್ಕೂ ಮೊದಲು ಕೇಂದ್ರ ಗೃಹ ಸಚಿವಾಲಯದ ಮಹಾನೋಂದಣಿ ಅಧಿಕಾರಿ ಹಾಗೂ ಸೆನ್ಸಸ್‌ ಆಯುಕ್ತರಾಗಿದ್ದರು.

ಸಂಜಯ್‌ ಮಲ್ಹೋತ್ರಾ: ಕಂದಾಯ ಕಾರ್ಯದರ್ಶಿ
ರಾಜಸ್ಥಾನ ಕೆಡರ್‌ನ 1990ರ ಬ್ಯಾಚ್‌ನ ಐಎಎಸ್‌ ಅಧಿಕಾರಿಯಾಗಿರುವ ಸಂಜಯ್‌ ಮಲ್ಹೋತ್ರಾ, ಕಂದಾಯ ಇಲಾಖೆ ಕಾರ್ಯದರ್ಶಿಯಾಗಿ ನೇಮಕವಾಗುವುದಕ್ಕೂ ಮುನ್ನ ಗ್ರಾಮೀಣ ವಿದ್ಯುದೀಕರಣ ನಿಗಮದ (ಆರ್‌ಇಸಿ) ಮುಖ್ಯಸ್ಥರು ಹಾಗೂ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. ಐಐಟಿ ಕಾನ್ಪುರದಲ್ಲಿ ಪದವಿ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದ್ದಾರೆ.

ಅಜಯ್‌ ಸೇಥ್‌: ಆರ್ಥಿಕ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿ
ಕರ್ನಾಟಕ ಕೆಡರ್‌ನ 1987ರ ಬ್ಯಾಚ್‌ನ ಐಎಎಸ್‌ ಅಧಿಕಾರಿಯಾಗಿರುವ ಅಜಯ್‌ ಸೇಥ್‌, ಸಾರ್ವಜನಿಕ ಹಣಕಾಸು ವಲಯದಲ್ಲಿ 33 ವರ್ಷಗಳ ಅಪಾರ ಅನುಭವ ಹೊಂದಿದ್ದಾರೆ. ಬಜೆಟ್‌, ತೆರಿಗೆ ಮತ್ತು ವಿದೇಶಿ ಹೂಡಿಕೆಯಂತಹ ವಿಚಾರಗಳಲ್ಲಿ ನುರಿತ ಜ್ಞಾನ ಹೊಂದಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಚ್ಚುವರಿ ಕಾರ್ಯದರ್ಶಿ, ವಾಣಿಜ್ಯ ತೆರಿಗೆ ಆಯುಕ್ತ ಸೇರಿದಂತೆ ಕರ್ನಾಟಕ ಸರ್ಕಾರದ ವಿವಿಧ ಹುದ್ದೆಗಳನ್ನು ನಿಭಾಯಿಸಿದ್ದಾರೆ. ಸಾರ್ವಜನಿಕ ಆಡಳಿತದಲ್ಲಿನ ಅತ್ಯುತ್ತಮ ಸೇವೆಗಾಗಿ ನೀಡುವ ಪ್ರಧಾನ ಮಂತ್ರಿಗಳ ಪ್ರಶಸ್ತಿಯನ್ನು 2013ರಲ್ಲಿ ಪಡೆದಿರುವ ಸೇಥ್‌, ಏಷಿಯಾ ಅಭಿವೃದ್ಧಿ ಬ್ಯಾಂಕ್‌ನ ಸಲಹೆಗಾರರಾಗಿಯೂ ಕರ್ತವ್ಯ ನಿರ್ವಹಿಸಿದ್ದಾರೆ.

ತುಹಿನ್‌ ಕಾಂತ ಪಾಂಡೆ: ಹೂಡಿಕೆ ಮತ್ತು ಸಾರ್ವಜನಿಕ ಆಸ್ತಿ ನಿರ್ವಹಣೆ ಇಲಾಖೆಯ ಕಾರ್ಯದರ್ಶಿ
ಎಲ್‌ಐಸಿ ಹಾಗೂ ಏರ್‌ ಇಂಡಿಯಾ ಸೇರಿದಂತೆ ಹಲವು ಸಂಸ್ಥೆಗಳಲ್ಲಿನ ಬಂಡವಾಳ ಹಿಂತೆಗೆದ ರೂವಾರಿಯಾಗಿರುವ ತುಹಿನ್‌ ಪಾಂಡೆ, ಒಡಿಶಾ ಕೆಡರ್‌ನ 1987ರ ಬ್ಯಾಚ್‌ನ ಐಎಎಸ್‌ ಅಧಿಕಾರಿ. ಕೈಗಾರಿಕಾ ಅಭಿವೃದ್ಧಿ, ಸಾರ್ವಜನಿಕ ಹಣಕಾಸು ಮತ್ತು ಆರ್ಥಿಕ ನಿರ್ವಹಣೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಯೋಜನಾ ಆಯೋಗಕ್ಕೆ ಐದು ವರ್ಷಗಳ ಅವಧಿಗೆ ಜಂಟಿ ಕಾರ್ಯದರ್ಶಿಯಾಗಿ 2009ರಲ್ಲಿ ನೇಮಕವಾದ ಇವರು, ನಂತರ ಸಂಸದೀಯ ವ್ಯವಹಾರಗಳ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ 2 ವರ್ಷಗಳ ಅವಧಿಗೆ ನೇಮಕಗೊಂಡಿದ್ದರು.

ವಿ. ಅನಂತ ನಾಗೇಶ್ವರನ್‌: ಮುಖ್ಯ ಆರ್ಥಿಕ ಸಲಹೆಗಾರ
ವಿ. ಅನಂತ ನಾಗೇಶ್ವರನ್‌ ಅವರು ಮುಖ್ಯ ಆರ್ಥಿಕ ಸಲಹೆಗಾರರಾಗಿ 2022ರ ಜನವರಿ 28ರಂದು ನೇಮಕವಾದರು. ಇವರು ಐಐಎಂ ಅಹಮದಾಬಾದ್‌ ಹಾಗೂ ಮೆಸ್ಸಾಚುಸೆಟ್ಸ್‌ ವಿವಿ ವಿದ್ಯಾರ್ಥಿಯಾಗಿದ್ದು, 2019–2021ರ ಅವಧಿಯಲ್ಲಿ ಪ್ರಧಾನಿ ಮೋದಿ ಅವರ ಆರ್ಥಿಕ ಸಲಹಾ ಸಮಿತಿಯ ಅರೆಕಾಲದ ಸದಸ್ಯರಾಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT