ಬಜೆಟ್ ಮಂಡಿಸುತ್ತಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ 
ಕೇಂದ್ರ ಬಜೆಟ್

ಮಕ್ಕಳಿಗಾಗಿ ರಾಷ್ಟ್ರೀಯ ಡಿಜಿಟಲ್ ಲೈಬ್ರರಿ ಸ್ಥಾಪನೆ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದು ತಮ್ಮ ಬಜೆಟ್ ಭಾಷಣದಲ್ಲಿ ಗುಣಮಟ್ಟದ ಪುಸ್ತಕಗಳ ಲಭ್ಯತೆಗಾಗಿ ಮಕ್ಕಳು ಮತ್ತು ಹದಿಹರೆಯದವರಿಗೆ ರಾಷ್ಟ್ರೀಯ ಡಿಜಿಟಲ್ ಲೈಬ್ರರಿಯನ್ನು ಸ್ಥಾಪಿಸಲಾಗುವುದು ಎಂದು ಘೋಷಿಸಿದರು. 

ನವದೆಹಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದು ತಮ್ಮ ಬಜೆಟ್ ಭಾಷಣದಲ್ಲಿ ಗುಣಮಟ್ಟದ ಪುಸ್ತಕಗಳ ಲಭ್ಯತೆಗಾಗಿ ಮಕ್ಕಳು ಮತ್ತು ಹದಿಹರೆಯದವರಿಗೆ ರಾಷ್ಟ್ರೀಯ ಡಿಜಿಟಲ್ ಲೈಬ್ರರಿಯನ್ನು ಸ್ಥಾಪಿಸಲಾಗುವುದು ಎಂದು ಘೋಷಿಸಿದರು. 

ಡಿಜಿಟಲ್ ಲೈಬ್ರರಿಯು ಭೌಗೋಳಿಕತೆ, ಇತರೆ ಭಾಷೆಗಳು, ಪ್ರಕಾರಗಳು ಮತ್ತು ಹಂತಗಳಲ್ಲಿ ಗುಣಮಟ್ಟದ ಪುಸ್ತಕಗಳ ಲಭ್ಯತೆಯು ಪ್ರವೇಶವನ್ನು ಸುಲಭಗೊಳಿಸುತ್ತದೆ ಎಂದು ಸೀತಾರಾಮನ್ ಅವರು ತಮ್ಮ ಐದನೇ ಬಜೆಟ್ ಮಂಡಿಸುವಾಗ ಹೇಳಿದರು.

ರಾಜ್ಯಗಳಿಗೆ ಪಂಚಾಯತ್ ಮತ್ತು ವಾರ್ಡ್ ಮಟ್ಟದಲ್ಲಿ ಭೌತಿಕ ಗ್ರಂಥಾಲಯಗಳನ್ನು ಸ್ಥಾಪಿಸಲು ಮತ್ತು ರಾಷ್ಟ್ರೀಯ ಡಿಜಿಟಲ್ ಲೈಬ್ರರಿ ಸಂಪನ್ಮೂಲಗಳನ್ನು ಪ್ರವೇಶಿಸಲು ಮೂಲಸೌಕರ್ಯಗಳನ್ನು ಒದಗಿಸಲು ಪ್ರೋತ್ಸಾಹಿಸಲಾಗುವುದು ಎಂದು ಅವರು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರು 2019 ರಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬಂದಾಗ ಹಣಕಾಸು ಸಚಿವೆಯಾಗಿ ನೇಮಕಗೊಂಡಿದ್ದ ನಿರ್ಮಲಾ ಅವರು 2019ರ ಜುಲೈ 5ರಂದು ತಮ್ಮ ಚೊಚ್ಚಲ ಬಜೆಟ್ ಅನ್ನು ಮಂಡಿಸಿದ್ದರು.

2024ರ ಏಪ್ರಿಲ್-ಮೇ ತಿಂಗಳಲ್ಲಿ ಮುಂದಿನ ಲೋಕಸಭೆ ಚುನಾವಣೆ ನಡೆಯಲಿರುವ ಕಾರಣ ಈ ವರ್ಷದ ಬಜೆಟ್‌ಗೆ ಹೆಚ್ಚಿನ ಮಹತ್ವವಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

SCROLL FOR NEXT