ಸಂಗ್ರಹ ಚಿತ್ರ 
ಕೇಂದ್ರ ಬಜೆಟ್

ಬಜೆಟ್ 2023: ಸರ್ಕಾರಿ ಸಂಸ್ಥೆಗಳ ಎಲ್ಲಾ ಡಿಜಿಟಲ್ ವ್ಯವಸ್ಥೆಗಳಿಗೆ ಸಾಮಾನ್ಯ ಗುರುತಿನ ಚೀಟಿಯಾಗಿ ‘ಪ್ಯಾನ್ ಕಾರ್ಡ್’ ಪರಿಗಣನೆ!

ಇನ್ನು ಮುಂದೆ ವ್ಯಾಪಾರಸ್ಥರು ಡಿಜಿಟಲ್ ವ್ಯವಹಾರಗಳಿಗೆ ಪ್ಯಾನ್​ ಕಾರ್ಡ್​ನ್ನು ಸಾಮಾನ್ಯ ಗುರುತಿನ ಚೀಟಿಯಾಗಿ ಪರಿಗಣನೆಗೆ ತೆಗೆದುಕೊಳ್ಳಬಹುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬುಧವಾರ ಹೇಳಿದ್ದಾರೆ.

ನವದೆಹಲಿ: ಇನ್ನು ಮುಂದೆ ವ್ಯಾಪಾರಸ್ಥರು ಡಿಜಿಟಲ್ ವ್ಯವಹಾರಗಳಿಗೆ ಪ್ಯಾನ್​ ಕಾರ್ಡ್​ನ್ನು ಸಾಮಾನ್ಯ ಗುರುತಿನ ಚೀಟಿ ಆಗಿ ಪರಿಗಣನೆಗೆ ತೆಗೆದುಕೊಳ್ಳಬಹುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬುಧವಾರ ಹೇಳಿದ್ದಾರೆ.

ಲೋಕಸಭೆಯಲ್ಲಿ 2023-24ನೇ ಸಾಲಿನ ಬಜೆಟ್ ಮಂಡನೆ ಮಾಡಿದ ಅವರು, ಸರ್ಕಾರಿ ಸಂಸ್ಥೆಗಳ ಎಲ್ಲಾ ಡಿಜಿಟಲ್ ವ್ಯವಸ್ಥೆಗಳಿಗೆ ಸಾಮಾನ್ಯ ಗುರುತಿನ ಚೀಟಿಯಾಗಿ ‘ಪ್ಯಾನ್ ಕಾರ್ಡ್’ ಪರಿಗಣನೆ ತೆಗೆದುಕೊಳ್ಳಲಾಗುವುದು ಎಂದು ಘೋಷಿಸಿದರು.

ಪ್ಯಾನ್  ಕಾರ್ಡ್​ನ್ನು ಸಾಮಾನ್ಯ ಕಾರ್ಡ್​ ಆಗಿ ಬಳಕೆ ಮಾಡುವುದರಿಂದ ಬಂಡವಾಳದಾರರಿಗೆ ಮತ್ತಷ್ಟು ಸಹಕಾರಿಯಾಗಬಹುದು ಎಂದು ನಿರೀಕ್ಷಿಸಲಾಗಿದೆ. ಪ್ರಸ್ತುತ, ಕೇಂದ್ರ ಮತ್ತು ರಾಜ್ಯ ಮಟ್ಟದಲ್ಲಿ ಸರಕು ಮತ್ತು ಸೇವಾ ತೆರಿಗೆ ಗುರುತಿನ ಸಂಖ್ಯೆ (GSTIN), ತೆರಿಗೆದಾರರ ಗುರುತಿನ ಸಂಖ್ಯೆ (TIN), ತೆರಿಗೆ ಕಡಿತ ಖಾತೆ ಸಂಖ್ಯೆ (TDA), ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (EPFO) ನಂತಹ ಗುರುತಿನ ಚೀಟಿಗಳನ್ನು ಬಳಸಲಾಗುತ್ತದೆ. ಇದೆಲ್ಲವನ್ನು ಸರಳೀಕೃತಗೊಳಿಸುವ ಉದ್ಧೇಶದಿಂದ ಪ್ಯಾನ್​ಕಾರ್ಡ್​ನ್ನು ಸಾಮಾನ್ಯ ಗುರುತಿನ ಚೀಟಿಯಾಗಿ ಬಳಸಬಹುದು ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!