ಸಿರಿಧಾನ್ಯ-ಶ್ರೀ ಅನ್ನ 
ಕೇಂದ್ರ ಬಜೆಟ್

'ಸಿರಿಧಾನ್ಯ... ಶ್ರೀ ಅನ್ನ': ಭಾರತವನ್ನು ಸಿರಿಧಾನ್ಯ ತವರಾಗಿಸಲು ವಿತ್ತ ಸಚಿವ ನಿರ್ಮಲಾ ಸೀತಾರಾಮನ್ ಪಣ

ಭಾರತವನ್ನು ಸಿರಿಧಾನ್ಯಗಳ ತವರನ್ನಾಗಿಸಲು ಕೇಂದ್ರ ಬಜೆಟ್ 2023-24ರಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಹತ್ವದ ಕ್ರಮ ಕೈಗೊಂಡಿದ್ದಾರೆ.

ನವದೆಹಲಿ: ಭಾರತವನ್ನು ಸಿರಿಧಾನ್ಯಗಳ ತವರನ್ನಾಗಿಸಲು ಕೇಂದ್ರ ಬಜೆಟ್ 2023-24ರಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಹತ್ವದ ಕ್ರಮ ಕೈಗೊಂಡಿದ್ದಾರೆ.

ಹೌದು.. ಕೇಂದ್ರ ಬಜೆಟ್ ನಲ್ಲಿ ಈ ಬಾರಿ ನಿರ್ಮಲಾ ಸೀತಾರಾಮನ್, ಕೃಷಿ ಕ್ಷೇತ್ರಕ್ಕೆ ಮಹತ್ವದ ಕೊಡುಗೆಗಳನ್ನು ನೀಡಿದ್ದು, ಅದರಲ್ಲಿ ವಿಶೇಷವಾಗಿ ಸಿರಿಧಾನ್ಯ ಉತ್ಪಾದನೆಗೆ ಹೆಚ್ಚಿನ ಮಹತ್ವ ನೀಡಿದ್ದಾರೆ. ಸಿರಿಧಾನ್ಯ ಉತ್ಪಾದನೆಗೆ ಅನೇಕ ಯೋಜನೆಗಳ ಮೂಲಕ ಸಣ್ಣ ರೈತರಿಗೆ ನೆರವು ನೀಡಲಾಗುತ್ತದೆ ಎಂದಿರುವ ಅವರು, ಹೈದರಾಬಾದ್ ನಲ್ಲಿ ಸಿರಿಧಾನ್ಯ ಸಂಶೋಧನಾ ಕೇಂದ್ರವನ್ನು ಸ್ಥಾಪಿಸುವುದಾಗಿ ಹೇಳಿದ್ದಾರೆ.

'ಭಾರತವು ಇಡೀ ವಿಶ್ವಕ್ಕೆ ಸಿರಿಧಾನ್ಯಗಳನ್ನು ಮಹತ್ವದ ಕೊಡುಗೆಯನ್ನಾಗಿ ನೀಡಿದೆ. ಭಾರತವು ಸಿರಿಧಾನ್ಯಗಳನ್ನು ಉತ್ಪಾದನೆ ಮಾಡುವ ಜಗತ್ತಿನ ರಾಷ್ಟ್ರಗಳಲ್ಲಿ ಮುಂಚೂಣಿಯಲ್ಲಿದೆ. ಭಾರತದ ಪ್ರಯತ್ನದಿಂದ 2023ರ ವರ್ಷವನ್ನು ಸಿರಿಧಾನ್ಯಗಳ ವರ್ಷವೆಂದು ವಿಶ್ವಸಂಸ್ಥೆ ಘೋಷಿಸಿದೆ. ಇದರ ಸದುಪಯೋಗವನ್ನು ಪಡೆದುಕೊಳ್ಳಲು ಕೇಂದ್ರ ಸರ್ಕಾರ, ಭಾರತೀಯ ರೈತರಿಗೆ ಅಪೂರ್ವವಾದ ಅವಕಾಶವನ್ನು ಕೊಟ್ಟಿದೆ. ಸಿರಿಧಾನ್ಯಗಳನ್ನು ಬೆಳೆಸಲು ಅನೇಕ ಯೋಜನೆಗಳ ಮೂಲಕ ನೆರವು ನೀಡಲಾಗುತ್ತದೆ ಎಂದು ಅವರು ತಿಳಿಸಿದರು.

ಅಂತೆಯೇ ದೇಶದಲ್ಲಿರುವ 63,000 ಕೃಷಿ ಕೊಆಪರೇಟಿವ್ ಸೊಸೈಟಿಗಳನ್ನು ಕೇಂದ್ರೀಕೃತಗೊಳಿಸಲಾಗುತ್ತದೆ. ಇದಕ್ಕಾಗಿ 2,516 ಕೋಟಿ ರೂ.ಗಳನ್ನು ನಿಗದಿಗೊಳಿಸಲಾಗುತ್ತದೆ. ಪ್ರಾಥಮಿಕ ಕೃಷಿ ಸಾಲ ಸಹಕಾರ ಸಂಸ್ಥೆಗಳನ್ನು ಒಂದೇ ಸೂರಿನಡಿ ತರಲಾಗುತ್ತದೆ ಎಂದು ಹೇಳಿದ್ದಾರೆ.

ಅಲ್ಲದೆ, ದೇಶದಲ್ಲಿ ಕೃಷಿ ಚಟುವಟಿಕೆಗಳನ್ನು ವೈಜ್ಞಾನಿಕ ರೀತಿಯಲ್ಲಿ ಮುನ್ನಡೆಸಲು ಸಾಧ್ಯವಾಗುವಂತೆ ಕೃಷಿ ವೇಗವರ್ಧನೆ ನಿಧಿಯನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ. ಕೃಷಿ ಸ್ಟಾರ್ಟ್ ಅಪ್ ಗಳ ಸ್ಥಾಪನೆ. ಕೃಷಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಳು ಇನ್ನು ಒಂದೇ ಡಿಜಿಟಲ್ ಪ್ಲಾಟ್ ಫಾರಂನಲ್ಲಿ ಲಭ್ಯವಾಗಲಿವೆ. ಇದಕ್ಕಾಗಿ, ಡಿಜಿಟಲ್ ಪಬ್ಲಿಕ್ ಇನ್ ಫ್ರಾಸ್ಟ್ರಕ್ಚರ್ ಸ್ಥಾಪನೆ ಮಾಡಲಾಗುತ್ತದೆ.  2024ರ ಹೊತ್ತಿಗೆ ಕೃಷಿ ಸಾಲವನ್ನು 20 ಲಕ್ಷ ಕೋಟಿ ರೂ.ಗಳಿಗೆ ಏರಿಸುವ ಸಾಧ್ಯತೆ ಇದೆ. ನ್ಯಾಷನಲ್ ಮೊನೆಸ್ಟೈಸೇಷನ್ ಪೈಪ್ ಲೈನ್ ಯೋಜನೆಗೆ 9 ಸಾವಿರ ಕೋಟಿ ರೂ. ಹೂಡಿಕೆ ಮಾಡಲಾಗುತ್ತದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಪರಸ್ತ್ರೀ ಮೋಹ, ನಂಬಿಕೆ ದ್ರೋಹ: ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLOಗಳಿಂದ ಅಹೋರಾತ್ರಿ ಧರಣಿ!

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

SCROLL FOR NEXT