ಸೇವಾ ಕ್ಷೇತ್ರದಲ್ಲಿ ಹೂಡಿಕೆಯಾಗಿರುವ ವಿದೇಶಿ ನೇರ ಬಂಡವಾಳ ಹೂಡಿಕೆ (ಎಫ್‌ಡಿಐ) ಶೇ.62ರಷ್ಟು ಇಳಿಕೆಯಾಗಿದೆ. 2012ರ ಏಪ್ರಿಲ್-ಅಕ್ಟೋಬರ್ ಅವಧಿಯಲ್ಲಿ ಸೇವಾ ಕ್ಷೇತ್ರಗಳಾದ ವಿಮೆ, ಬ್ಯಾಂಕಿಂಗ್, ಹೊರಗುತ್ತಿಗೆ, ಸಂಶೋಧನೆ ಮತ್ತು ಅಭಿವೃದ್ಧಿ ಕ್ಷೇತ್ರಗಳಲ್ಲಿ 3.6 ಬಿಲಿಯನ್ ಡಾಲರ್‌ಗಳಷ್ಟು ಮೊತ್ತದ ವಿದೇಶಿ ನೇರ ಬಂಡವಾಳ ಹೂಡಿಕೆಯಾಗಿತ್ತು. ಭಾರಿ ಪ್ರಮಾಣದ ಬಂಡವಾಳ ಹೂಡಿಕೆ ನಿರೀಕ್ಷೆ ಏನಿದ್ದರೂ ಹೊಸ ಸರ್ಕಾರ ರಚನೆಯಾದ ಬಳಿಕ ಎಂದು ಈ ಕ್ಷೇತ್ರದ ಪರಿಣತರು ಅಭಿಪ್ರಾಯಪಡುತ್ತಾರೆ.