ವಾಣಿಜ್ಯ

ಕೆನರಾ ಕರಕುಶಲ ತರಬೇತಿ

ಕೆನರಾ ಬ್ಯಾಂಕ್ ಪ್ರಾಯೋಜಿತ ಕೆ.ಪಿ.ಜಿ. ಪ್ರಭು ಕರಕುಶಲ ತರಬೇತಿ ಸಂಸ್ಥೆ ನಿರುದ್ಯೋಗಿ ಯುವಕರಿಗೆ ಮರ ಮತ್ತು ಕಲ್ಲು ಕೆತ್ತನೆ, ಲೋಹ ಶಿಲ್ಪ ಮತ್ತು ಕುಂಭಕಲೆ (ಟೆರ್ರಾಕೋಟ) ವಿಭಾಗಗಳಲ್ಲಿ ಉಚಿತ ತರಬೇತಿಗಾಗಿ ನೇರ ಸಂದರ್ಶನಕ್ಕೆ ಆಹ್ವಾನಿಸಲಾಗಿದೆ. ಮರ ಮತ್ತು ಕಲ್ಲು ಕೆತ್ತನೆ, ಲೋಹ ಶಿಲ್ಪ ವಿಭಾಗದ ತರಬೇತಿ ಅವಧಿಯು 18 ತಿಂಗಳಾಗಿದ್ದು, ಕುಂಭ ಕಲೆಯ ತರಬೇತಿಯು 6 ತಿಂಗಳ ಅವಧಿಯದ್ದಾಗಿರುತ್ತದೆ.
ವಿದ್ಯಾರ್ಹತೆ ಕನಿಷ್ಠ 7ನೇ ತರಗತಿ ಉತ್ತೀರ್ಣ, ವಯೋವುತಿ 18ರಿಂದ 35 ವರ್ಷದವರಾಗಿರಬೇಕು. ತರಬೇತಿ ಅವಧಿಯಲ್ಲಿ ಉಚಿತ ಊಟ, ವಸತಿ, ತರಬೇತಿಗೆ ಬೇಕಾದ ಕಚ್ಚಾ ಸಾಮಗ್ರಿ, ತರಬೇತಿ ಪ್ರವಾಸ, ನುರಿತ ಶಿಕ್ಷಕರಿಂದ ತರಬೇತಿಗಳನ್ನು ನೀಡಲಾಗುವುದು. ಗ್ರಾಮೀಣ, ಬಡ ಮತ್ತು ಪರಿಶಿಷ್ಟ ಜಾತಿ/ ಪಂಗಡದ ಅಭ್ಯರ್ಥಿಗಳಿಗೆ ಪ್ರಧಾನ್ಯತೆ ನೀಡಲಾಗುವುದು.
ನೇರ ಸಂದರ್ಶನ ಜ. 22ರ ವರೆಗೆ ನಡೆಯಲಿದೆ. ಆಸಕ್ತ ಯುವಕರು ಪೋಷಕರೊಡನೆ ಸ್ವಂತ ಖರ್ಚಿನಲ್ಲಿ ಹಾಜರಾಗತಕ್ಕದ್ದು. ಹೆಚ್ಚಿನ ವಿವರಕ್ಕೆ ಸಂಪರ್ಕಿಸಿ ನಿರ್ದೇಶಕರು, ಕೆನರಾ ಬ್ಯಾಂಕ್ ಪ್ರಾಯೋಜಿತ ಕೆ.ಪಿ.ಜೆ. ಪ್ರಭು ಕರಕುಶಲ ತರಬೇತಿ ಸಂಸ್ಥೆ, ಜೋಗರದುಡ್ಡಿ, ಬಿಡದಿ ಕೈಗಾರಿಕಾ ಪ್ರದೇಶ, ಬಿಡದಿ, ರಾಮನಗರ- 562109. ಮೊ. 9900158885.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!