ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ವಾಣಿಜ್ಯ

8.5 ಲಕ್ಷ ಹೊಸ ಉದ್ಯೋಗ

Lingaraj Badiger
Updated On : 13 Jan 2014, 4:20 am

ಉದ್ಯೋಗಕ್ಕಾಗಿ ಹುಡುಕಾಡುವವರಿಗೆ ಹೊಸ ಭರವಸೆಯ ಬೆಳಕು ಮೂಡಿದೆ. 2014ರಲ್ಲಿ ವಿವಿಧ ಕ್ಷೇತ್ರಗಳಲ್ಲಿ ಒಟ್ಟು 8.5 ಲಕ್ಷ ಉದ್ಯೋಗಗಳು ಸೃಷ್ಟಿಯಾಗಲಿವೆ. ಹೀಗೆಂದು ಮೈಹೈರಿಂಗ್‌ಕ್ಲಬ್.ಕಾಂ ನಡೆಸಿದ ಅಧ್ಯಯನ ತಿಳಿಸಿದೆ. ಜಾಗತಿಕ ಮಟ್ಟದಲ್ಲಿ ಹಣಕಾಸು ಹಿಂಜರಿತದ ವದಂತಿಗಳ ನಡುವೆ ಈ ಅಧ್ಯಯನ ನಡೆದಿರುವುದು ಗಮನಾರ್ಹ ವಿಚಾರವಾಗಿದೆ. 12 ವಲಯಗಳ 5,600 ಸಂಸ್ಥೆಗಳ ಪ್ರತಿನಿಧಿಗಳ ಅಭಿಪ್ರಾಯಗಳನ್ನು ಆಧರಿಸಿ ಈ ಅಂಶಗಳನ್ನು ಕ್ರೋಢೀಕರಿಸಲಾಗಿದೆ.

1.5 ಲಕ್ಷ ಕೋಟಿ ಸಂಗ್ರಹ
ಪ್ರಸಕ್ತ ಹಣಕಾಸು ವರ್ಷದ ಏಪ್ರಿಲ್-ನವೆಂಬರ್ ಅವಧಿಯಲ್ಲಿ ಮ್ಯೂಚ್ಯುವಲ್ ಫಂಡ್ ಕ್ಷೇತ್ರದಲ್ಲಿ ಹೂಡಿಕೆದಾರರು 1.5 ಲಕ್ಷ ಕೋಟಿ ಮೊತ್ತವನ್ನು ಹೂಡಿಕೆ ಮಾಡಿದ್ದಾರೆ. ಇದು ಕಳೆದ ಹಣಕಾಸು ವರ್ಷಕ್ಕೆ ಹೋಲಿಸಿದರೆ ಎರಡರಷ್ಟಾಗಿದೆ. ಸೆಕ್ಯುರಿಟೀಸ್ ಮತ್ತು ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾದ ಬಳಿ ಇರುವ ಇತ್ತೀಚಿನ ಅಂಕಿ ಅಂಶಗಳಿಂದ ಈ ಅಂಶ ವ್ಯಕ್ತವಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement