ಹಾರ್ವರ್ಡ್ ವಿಶ್ವವಿದ್ಯಾನಿಲಯ (ಸಂಗ್ರಹ ಚಿತ್ರ) 
ವಾಣಿಜ್ಯ

ಜಾಗತಿಕ ಬೆಳವಣಿಗೆ ನಿಧಾನಗತಿಯಲ್ಲಿದ್ದರೂ ಭಾರತದ ಆರ್ಥಿಕ ಬೆಳವಣಿಗೆ ಆಶಾದಾಯಕ : ಹಾರ್ವರ್ಡ್ ಅಧ್ಯಯನ ವರದಿ

ಮುಂಬರುವ ದಶಕಗಳಲ್ಲಿ ಅತ್ಯಂತ ವೇಗವಾಗಿ ಬೆಳೆಯುವ ಆರ್ಥಿಕತೆಯಾಗುವ ಸಾಮರ್ಥ್ಯ ಭಾರತಕ್ಕಿದೆ ಎಂದು ಹಾರ್ವರ್ಡ್ ವಿಶ್ವವಿದ್ಯಾನಿಲಯದ ಸಂಶೋಧನೆಯೊಂದು ಹೇಳಿದೆ.

ಮುಂಬೈ: ಮುಂಬರುವ ದಶಕಗಳಲ್ಲಿ ಅತ್ಯಂತ ವೇಗವಾಗಿ ಬೆಳೆಯುವ ಆರ್ಥಿಕತೆಯಾಗುವ ಸಾಮರ್ಥ್ಯ ಭಾರತಕ್ಕಿದೆ ಎಂದು ಹಾರ್ವರ್ಡ್ ವಿಶ್ವವಿದ್ಯಾನಿಲಯದ ಸಂಶೋಧನೆಯೊಂದು ಹೇಳಿದೆ.

ಚೀನಾದ ಆರ್ಥಿಕತೆ ಕುಗ್ಗುತ್ತಿದ್ದು, 2016 -2017 ರಲ್ಲಿ ಭಾರತದ ಆರ್ಥಿಕತೆ 7 .3 ರಿಂದ 7 .5  ಪ್ರತಿಶತ ಬೆಳವಣಿಗೆಯಾಗಲಿದೆ. ಇದಕ್ಕೆ ಪೂರಕವಾಗಿ ಪ್ರಸಕ್ತ ವರ್ಷದಲ್ಲಿ ಭಾರತದ ಜಿಡಿಪಿ 7 -7 .5 ರಷ್ಟು ಬೆಳವಣಿಗೆಯಾಗಲಿದೆ ಎಂದು ಅಂದಾಜಿಸಲಾಗಿದ್ದು ವಿಶ್ವದಲ್ಲಿ ಅತ್ಯಂತ ಹೆಚ್ಚು ವಾರ್ಷಿಕ ಆರ್ಥಿಕ ಅಭಿವೃದ್ಧಿಯಾಗುವ ದೇಶಗಳ ಪೈಕಿ ಭಾರತ ಮೊದಲನೇ ಸ್ಥಾನದಲ್ಲಿದೆ ಎಂದು ಇಂಟರ್ನ್ಯಾಷನಲ್ ಸೆಂಟರ್ ಫಾರ್ ಡೆವಲಪ್ಮೆಂಟ್ (ಸಿಐಡಿ) ಡಾಟಾ ಅಂದಾಜಿಸಿದೆ.
 
ಪೂರ್ವ ಆಫ್ರಿಕಾ,ಉಗಾಂಡ, ಟಾಂಜಾನಿಯಾ ಮತ್ತು ಕೀನ್ಯಾ ರಾಷ್ಟ್ರಗಳನ್ನು ಆರ್ಥಿಕ ಅಭಿವೃದ್ಧಿಯಾಗುವ ಟಾಪ್ 10 ರಾಷ್ಟ್ರಗಳ ಪೈಕಿ ಗುರುತಿಸಲಾಗಿದ್ದು, ವಾರ್ಷಿಕವಾಗಿ ಕನಿಷ್ಠ 5 .5 ಪ್ರತಿಶತ ಆರ್ಥಿಕ ಬೆಳವಣಿಗೆಯಾಗಲಿದೆ ಎಂದು ನಿರೀಕ್ಷಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ನಲ್ಲಿ 2 ವಾರ ಪೂರೈಸಿದ ಪ್ರತಿಭಟನೆ: ಸರ್ಕಾರಿ ಕಟ್ಟಡಗಳಿಗೆ ಬೆಂಕಿ, ಪ್ರತಿಭಟನಾಕಾರರಿಗೆ 'ಮರಣ ದಂಡನೆ' ಬೆದರಿಕೆ!

"Surely It's Time": ಕೊಹ್ಲಿ ನಿವೃತ್ತಿ ಬಗ್ಗೆ ದೊಡ್ಡ ಸಂದೇಶ ರವಾನಿಸಿದ ಉತ್ತಪ್ಪ!

'ಮನ್ರೇಗಾ ಬಚಾವೋ' ಸಂಗ್ರಾಮ: ಕಾಂಗ್ರೆಸ್ ಪಕ್ಷದಿಂದ ದೇಶಾದ್ಯಂತ 45 ದಿನಗಳ ಹೋರಾಟ ಆರಂಭ!

ಮಹಾರಾಷ್ಟ್ರದಲ್ಲಿ ಸಿಎಂ, ಡಿಸಿಎಂ ಮುಸುಕಿನ ಗುದ್ದಾಟ: ಅಜಿತ್ ಪವಾರ್ ವಿರುದ್ಧ ಫಡ್ನವೀಸ್ ಕಿಡಿ!

ಭಾಷಾ ಮಸೂದೆ ವಿರೋಧಿಸಿ ಸಿದ್ದರಾಮಯ್ಯ ಪತ್ರ: ಕೇರಳ ಸಿಎಂ ಸ್ಪಷ್ಟೀಕರಣ; ಪಿಣರಾಯಿ ವಿಜಯನ್ ಹೇಳಿದ್ದೇನು?

SCROLL FOR NEXT