ಮತ್ತೆ ಬಡ್ಡಿ ದರ ಇಳಿಕೆ?
ಭಾರತೀಯ ರಿಸರ್ವ್ ಬ್ಯಾಂಕ್(ಆರ್ಬಿಐ) ಮತ್ತೆ ಬಡ್ಡಿ ದರ ಇಳಿಸುವ ಸಾಧ್ಯತೆ ಇದೆ. ಮಂಗಳವಾರ ನಡೆಯಲಿರುವ ಹಣಕಾಸು...
ಮುಂಬೈ: ಭಾರತೀಯ ರಿಸರ್ವ್ ಬ್ಯಾಂಕ್(ಆರ್ಬಿಐ) ಮತ್ತೆ ಬಡ್ಡಿ ದರ ಇಳಿಸುವ ಸಾಧ್ಯತೆ ಇದೆ. ಮಂಗಳವಾರ ನಡೆಯಲಿರುವ ಹಣಕಾಸು ಪರಾಮರ್ಶೆ ವೇಳೆ ಈ ಘೋಷಣೆ ಹೊರಬೀಳಲಿದೆ ಎನ್ನಲಾಗಿದೆ. ಇದರಿಂದ ಗೃಹ, ವಾಹನ ಸೇರಿ ಎಲ್ಲ ಸಾಲದ ಇಎಂಐ ಇಳಿಕೆಯಾಗಲಿದೆ.
ಕುಸಿತ: ಹಣಕಾಸು ಪರಾಮರ್ಶೆ ನಡೆಯುವ ಮುನ್ನಾ ದಿನವೇ ಷೇರುಪೇಟೆ ಕುಸಿತ ಕಂಡಿದೆ. ಹೂಡಿಕೆದಾರರು ಷೇರು ಖರೀದಿಯಲ್ಲಿ ಆಸಕ್ತಿ ತೋರದ ಕಾರಣ ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ ಸೋಮವಾರ 61 ಅಂಕ ಕುಸಿದು, ದಿನಾಂತ್ಯಕ್ಕೆ 29,122ರಲ್ಲಿ ಕೊನೆ ಗೊಂಡಿತು. ನಿಫ್ಟಿ ಕೂಡ 11 ಅಂಕಗಳ ಕುಸಿತ ದಾಖಲಿಸಿ, 8,797ಕ್ಕೆ ವಹಿವಾಟು ಅಂತ್ಯಗೊಳಿಸಿತು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.