ಬೆಂಗಳೂರು: ಮೊಬೈಲ್ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸಾರ್ವಜನಿಕ ಸ್ವಾಮ್ಯದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಪಾರುಪತ್ಯ ಮುಂದುವರಿಸಿದೆ.
ಕಳೆದ ಕ್ಯಾಲೆಂಡರ್ ವರ್ಷದಲ್ಲಿ ಶೇ.46ರಷ್ಟು ಬೆಳವಣಿಗೆ ಕಂಡಿರುವ ಬ್ಯಾಂಕ್, 1.25 ಕೋಟಿ ಗ್ರಾಹಕರು ಮೊಬೈಲ್ ಬ್ಯಾಂಕಿಂಗ್ ಮೂಲಕ ವ್ಯವಹಾರ ಮಾಡಿದ್ದಾರೆ.
2013ರಲ್ಲಿ 85.78 ಲಕ್ಷ ಗ್ರಾಹಕರು ಮೊಬೈಲ್ ಬ್ಯಾಂಕಿಂಗ್ ಸೇವೆ ಬಳಸಿದ್ದರು. ಆರ್‌ಬಿಐ ಮಾಹಿತಿ ಪ್ರಕಾರ ಅತಿ ಹೆಚ್ಚು ಮೊಬೈಲ್ ಬ್ಯಾಂಕಿಂಗ್ ಗ್ರಾಹಕರು ಹಾಗೂ ಉತ್ತಮ ಬೆಳವಣಿಗೆ ದಾಖಲಿಸಿದ ಬ್ಯಾಂಕ್ ಎಂಬ ಖ್ಯಾತಿಗೆ ಎಸ್‌ಬಿಐ ಒಳಗಾಗಿದೆ.