ನವದೆಹಲಿ/ಲಂಡನ್: ವಿಶ್ವ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಆರು ವರ್ಷದಲ್ಲಿಯೇ ಕನಿಷ್ಠ ಮಟ್ಟಕ್ಕೆ ಇಳಿಕೆಯಾಗಿದೆ.
ಅಮೆರಿಕ ಮಾರಕಟ್ಟೆಯಲ್ಲಿ ಉತ್ಪಾದನೆಯಾಗುವ ಕಚ್ಚಾ ತೈಲದ ಬೆಲೆ ಬ್ಯಾರೆಲ್‌ಗೆ 44.21 ಡಾಲರ್ ಆಗಿದೆ.
ಭಾರತದಲ್ಲಿಯೂ ಈ ವಾರದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ 50ರಿಂದ 70 ಪೈಸೆಗೆ ಇಳಿಕೆಯಾಗುವ ಸಾಧ್ಯತೆ ಇದೆ. ಫೆಬ್ರವರಿಯಲ್ಲೂ ಇದೇ ಪರಿಸ್ಥಿತಿ ಮುಂದುವರಿದರೆ ಕೇಂದ್ರ ಸರ್ಕಾರ ಕೂಡ ಬಜೆಟ್‌ನಲ್ಲಿ ತೈಲೋತ್ಪನ್ನಗಳ ದರ ಇಳಿಕೆ ಬಗ್ಗೆ ಕ್ರಮಗಳನ್ನು ಘೋಷಿಸುವ ಸಾಧ್ಯತೆ ಇದೆ.