ರತನ್ ಟಾಟಾ 
ವಾಣಿಜ್ಯ

ಮಹಿಳೆಯರಿಗೆ ಇಂಟರ್ ನೆಟ್: ಟಾಟಾ ಆಸಕ್ತಿ

ಡಿಜಿಟಲ್ ಇಂಡಿಯಾ ಮೇಳಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ ಬೆನ್ನಲ್ಲೆ ಟಾಟಾ ಟ್ರಸ್ಟ್‍ನ ಅಧ್ಯಕ್ಷರಾದ ರತನ್ ಟಾಟಾ ತಮ್ಮದೇ ರೀತಿಯಲ್ಲಿ...

ಮುಂಬೈ: ಡಿಜಿಟಲ್ ಇಂಡಿಯಾ  ಮೇಳಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ ಬೆನ್ನಲ್ಲೆ ಟಾಟಾ ಟ್ರಸ್ಟ್‍ನ ಅಧ್ಯಕ್ಷರಾದ ರತನ್ ಟಾಟಾ ತಮ್ಮದೇ ರೀತಿಯಲ್ಲಿ ಈ ಯೋಜನೆಯಲ್ಲಿ ತೊಡಗಿಸಿಕೊಳ್ಳಲು ನಿರ್ಧರಿಸಿದ್ದಾರೆ. ಕೇಂದ್ರ ಸರ್ಕಾರ ಕೈಗೊಂಡಿರುವ ಡಿಜಿಟಲ್ ಇಂಡಿಯಾ ಯೋಜನೆ ಯನ್ನು ಶ್ಲಾಘಿಸಿರುವ ಅವರು, ಗ್ರಾಮೀಣ ಪ್ರದೇಶದಲ್ಲಿ ಮಹಿಳೆ ಯರಿಗೆ ಇಂಟರ್‍ನೆಟ್ ಸೌಲಭ್ಯ ಕಲ್ಪಿಸಲು ಗೂಗಲ್ ಮತ್ತು ಇಂಟೆಲ್ ಜೊತೆ ಮೈತ್ರಿ ಮಾಡಿಕೊಂಡಿರುವುದಾಗಿ ತಿಳಿಸಿದ್ದಾರೆ. ಇಂಟರ್‍ನೆಟ್ ಮೂಲಕ ಗ್ರಾಮೀಣ ಜನರನ್ನು ಶಿಕ್ಷಿತರನ್ನಾಗಿ ಮಾಡಬಹುದು. ಇದು ಗ್ರಾಮೀಣ ಪ್ರದೇಶದ ಮಹಿಳೆಯರು ಉತ್ತಮ ಬದುಕು
ಕಂಡುಕೊಳ್ಳಲು ಸಹಕಾರಿಯಾಗಲಿದೆ. ಎಲ್ಲ ಪ್ರದೇಶಗಳಿಗೂ ವ್ಯವಹಾರವನ್ನು ವಿಸ್ತರಿಸಬಹುದು ಎಂದು ಹೇಳಿದ್ದಾರೆ. ಬಹಳ ಹಿಂದೆ ದೂರವಾಣಿ ಸಂಪರ್ಕ ಪಡೆಯಲು ಹತ್ತು ವರ್ಷ ಕಾಯಬೇಕಾಗಿತ್ತು ಎಂದು ತಾನು ವಿದ್ಯಾರ್ಥಿಯಾಗಿದ್ದಾಗಿನ ಪರಿಸ್ಥಿತಿಯನ್ನು ಸ್ಮರಿಸಿದ ಅವರು, ದೂರ ಸಂಪರ್ಕ ವ್ಯಾಪಕವಾದಂತೆ  ಇಡೀ ಜನಸಮುದಾಯವನ್ನು ಸಬಲೀಕರಣ ಮಾಡಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ. ನಗರ ಪ್ರದೇಶದಲ್ಲಿ ಪುರುಷರಿಗಿಂತಲೂ ಮಹಿಳೆಯರು ಹೆಚ್ಚು ಇಂಟರ್‍ನೆಟ್ ಬಳಕೆ ಮಾಡುತ್ತಿದ್ದಾರೆ. ಆದರೆ ಗ್ರಾಮೀಣ ಪ್ರದೇಶದಲ್ಲಿ ಶೇ.10ರಷ್ಟು ಮಹಿಳೆಯರು ಮಾತ್ರ ಇಂಟರ್‍ನೆಟ್ ಬಳಕೆ ಮಾಡುತ್ತಿದ್ದಾರೆ ಎಂದು ಗೂಗಲ್ ಕಂಪನಿಯ ಅಧಿಕಾರಿಗಳು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT