ನವದೆಹಲಿ: ಮಾರ್ಚ್ ಅಂತ್ಯದ ವೇಳೆಗೆ ಸಾರ್ವಜನಿಕ ವಲಯದ ಬ್ಯಾಂಕ್ ಗಳಲ್ಲಿನ ಅನುತ್ಪಾದಕ ಆಸ್ತಿ (ಎನ್‍ಪಿಎ) ರು.2.67 ಲಕ್ಷ ಕೋಟಿಗೆ ತಲುಪಿದೆ. ಕಳೆದ ವರ್ಷದ ರು.2.16 ಲಕ್ಷ ಕೋಟಿಗೆ ತಲುಪಿದೆ ಎಂದು ಕೇಂದ್ರ ಹಣಕಾಸು ಖಾತೆ ಸಹಾಯಕ ಸಚಿವ ಜಯಂತ್ ಸಿನ್ಹ ಮಂಗಳವಾರ ಸಂಸತ್ತಿಗೆ ಮಾಹಿತಿ ನೀಡಿದರು.
ಸಾರ್ವಜನಿಕ ವಲಯದ ಬ್ಯಾಂಕ್ ಗಳಲ್ಲಿನ ಈ ಸುಸ್ತಿ ಸಾಲ ಪ್ರಮಾಣ ನಿರಂತರವಾಗಿ ಏರಿಕೆ ಕಾಣುತ್ತಿದೆ ಎಂದು ರಾಜ್ಯಸಭೆಗೆ ಲಿಖಿತ ಮಾಹಿತಿ ನೀಡಿದ್ದಾರೆ. ಸಾರ್ವಜನಿಕ ವಲಯದ ಬ್ಯಾಂಕ್‍ಗಳಲ್ಲಿನ ಎನ್‍ಪಿಎ ಪ್ರಮಾಣ 2014ರ ಮಾರ್ಚ್ ಅಂತ್ಯಕ್ಕೆ ಶೇ.4.72ರಷ್ಟು ಇದ್ದಿದ್ದು ಕಳೆದ ಮಾರ್ಚ್ ಅಂತ್ಯಕ್ಕೆ ಶೇ.5.43ಕ್ಕೆ ತಲುಪಿದೆ.
ಸುಸ್ತಿ ಸಾಲ ಹೆಚ್ಚುವುದು ಬ್ಯಾಂಕ್ ಗಳ ಆದಾಯ ಮತ್ತು ಕಡ್ಡಾಯವಾಗಿ ಇಟ್ಟುಕೊಳ್ಳಬೇಕಾದ ಬಂಡವಾಳದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ. ಈ ಕುರಿತು ಆರ್‍ಬಿಐ, ಸರ್ಕಾರ ಮತ್ತು ಬ್ಯಾಂಕ್‍ಗಳು ಆತಂಕಿತವಾಗಿವೆ ಎಂದಿದ್ದಾರೆ.