ಬಿಒಬಿ ಲಾಭ ರು.1,052 ಕೋಟಿ
ಪ್ರಸಕ್ತ ಹಣಕಾಸು ಸಾಲಿನ ಮೊದಲ ತ್ರೈಮಾಸಿಕದಲ್ಲಿ ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಆಫ್ ಬರೋಡ ರು.1,052.15 ಕೋಟಿ ನಿವ್ವಳ ಲಾಭ ಗಳಿಸಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಗಳಿಸಿದ್ದ ರು.1,361.88 ಕೋಟಿಗೆ ಹೋಲಿಸಿದರೆ ಶೇ.22.74ರಷ್ಟು ಇಳಿಮುಖ ಕಂಡಿದೆ...
ನವದೆಹಲಿ: ಪ್ರಸಕ್ತ ಹಣಕಾಸು ಸಾಲಿನ ಮೊದಲ ತ್ರೈಮಾಸಿಕದಲ್ಲಿ ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಆಫ್ ಬರೋಡ ರು.1,052.15 ಕೋಟಿ ನಿವ್ವಳ ಲಾಭ ಗಳಿಸಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಗಳಿಸಿದ್ದ ರು.1,361.88 ಕೋಟಿಗೆ ಹೋಲಿಸಿದರೆ ಶೇ.22.74ರಷ್ಟು ಇಳಿಮುಖ ಕಂಡಿದೆ.
ಅನುತ್ಪಾದಕ ಆಸ್ತಿಯನ್ನು ಕೈಬಿಡಲು ಕೈಗೊಂಡ ಕ್ರಮಗಳು ಮತ್ತು ಸಿಬ್ಬಂದಿ ವೇತನ ಹೆಚ್ಚಳದಿಂದಾಗಿ ಲಾಭ ಕಡಿಮೆಯಾಗಿದೆ. ಬ್ಯಾಂಕ್ನ ಒಟ್ಟಾರೆ ಆದಾಯದಲ್ಲಿ ಶೇ.4.8ರಷ್ಟು ಏರಿಕೆ ಕಂಡು ರು.12,243.72 ಕೋಟಿಗೆ ತಲುಪಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಈ ಆದಾಯ ರು.11,682.50 ಕೋಟಿಯಷ್ಟಿತ್ತು ಎಂದು ಮುಂಬೈ ಷೇರು ಮಾರುಕಟ್ಟೆಗೆ ಸಲ್ಲಿಸಿರುವ ವರದಿಯಲ್ಲಿ ವಿವರಿಸಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.