ನವದೆಹಲಿ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಹಾಗೂ ಸರ್ಕಾರದ ನಡುವೆ ಯಾವುದೇ ವೈಮನಸ್ಯವಿಲ್ಲ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಭಾನುವಾರ ಹೇಳಿದ್ದಾರೆ.
ಹಣಕಾಸು ಮಾರುಕಟ್ಟೆ ನಿರ್ವಹಣೆಗೆ ಸಂಬಂಧಿಸಿದಂತೆ ಆರ್‌ಬಿಐ ಹಾಗೂ ಸರ್ಕಾರದ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ನಾವು ಮುಕ್ತವಾಗಿ ಹಾಗೂ ಸ್ಪಷ್ಟವಾಗಿ ಚರ್ಚೆ ಮಾಡಲಾಗಿದ್ದು, ನಮ್ಮ ನಡುವೆ ಭಿನ್ನಭಿಪ್ರಾಯದ ಪ್ರಶ್ನೆಯೇ ಇಲ್ಲ ಎಂದು ಜೇಟ್ಲಿ ಸ್ಪಷ್ಟಪಡಿಸಿದ್ದಾರೆ.
ಚರ್ಚೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್‌ಬಿಐ ಮೇಲೆ ಸರ್ಕಾರ ಯಾವುದೇ ರೀತಿಯ ಒತ್ತಡ ಹೇರುವುದಿಲ್ಲ. ಆರ್‌ಬಿಐ ನೀತಿಗೆ ಅನುಗುಣವಾಗಿ ಬ್ಯಾಂಕ್‌ಗಳು ಅದನ್ನು ಮಾಡಲಿವೆ ಎಂಬ ವಿಶ್ವಾಸವಿದೆ ಎಂದು ಅವರು ತಿಳಿಸಿದ್ದಾರೆ.
ನಂತರ ಮಾತನಾಡಿದ ಆರ್‌ಬಿಐ ಗವರ್ನರ್ ರಘುರಾಂ ರಾಜನ್ ಅವರು, ಭವಿಷ್ಯದಲ್ಲಿ ಬಡ್ಡಿ ದರ ಕಡಿತ ಹಣದುಬ್ಬರ ಸೂಚ್ಯಂಕದ ಮೇಲೆ ಅವಲಂಭಿಸಿದೆ ಎಂದಿದ್ದಾರೆ.