ಪೆಟ್ರೋಲ್-ಡೀಸೆಲ್ ದರ ಏರಿಕೆ (ಸಂಗ್ರಹ ಚಿತ್ರ) 
ವಾಣಿಜ್ಯ

ಪೆಟ್ರೋಲ್ ದರ 3.13 ರು, ಡೀಸೆಲ್ 2.71 ರು ಏರಿಕೆ

ತಿಂಗಳ ಹಿಂದಷ್ಟೇ ದರ ಏರಿಕೆ ಕಂಡಿದ್ದ ಪೆಟ್ರೋಲ್ ಮತ್ತು ಡೀಸೆಲ್ ನಲ್ಲಿ ಶುಕ್ರವಾರ ಮತ್ತೆ ಭಾರಿ ಪ್ರಮಾಣದಲ್ಲಿ ದರ ಏರಿಕೆಯಾಗಿದೆ.

ನವದೆಹಲಿ: ತಿಂಗಳ ಹಿಂದಷ್ಟೇ ದರ ಏರಿಕೆ ಕಂಡಿದ್ದ ಪೆಟ್ರೋಲ್ ಮತ್ತು ಡೀಸೆಲ್ ನಲ್ಲಿ ಶುಕ್ರವಾರ ಮತ್ತೆ ಭಾರಿ ಪ್ರಮಾಣದಲ್ಲಿ ದರ ಏರಿಕೆಯಾಗಿದೆ.

ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 3.31 ರು ಮತ್ತು ಪ್ರತೀ ಲೀಟರ್ ಡೀಸೆಲ್ ದರದಲ್ಲಿ 2.71 ರು ಹೆಚ್ಚಳವಾಗಿದೆ. ನೂತನ ಪರಿಷ್ಕೃತ ದರ ಇಂದು ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿದೆ ಎಂದು ಮೂಲಗಳು ತಿಳಿಸಿವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಛಾ ತೈಲದರದಲ್ಲಿ ಹೆಚ್ಚಳವಾದ ಕಾರಣ ಭಾರತದಲ್ಲಿಯೂ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ದರ ಏರಿಕೆ ಅನಿವಾರ್ಯ ಎಂದು ಈ ಹಿಂದೆ ತೈಲ ಕಂಪನಿಗಳು ಹೇಳಿದ್ದವು. ಅದರ ಅನ್ವಯ ಕೇವಲ 15 ದಿನಗಳಲ್ಲಿಯೇ ಎರಡನೇ ಬಾರಿಗೆ ಇಂಧನ ದರದಲ್ಲಿ ಏರಿಕೆ ಕಂಡುಬಂದಿದೆ.

ಕಳೆದ ಏಪ್ರಿಲ್ 30ರಂದು ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 3.96 ರುಪಾಯಿ ಮತ್ತು ಡೀಸೆಲ್ ದರದಲ್ಲಿ 2.37 ರು.ಗಳಷ್ಟು ಏರಿಕೆಯಾಗಿತ್ತು. ಇಂಧನ ದರದ ಮೇಲಿದ್ದ ಸರ್ಕಾರದ ನಿಯಂತ್ರಣವನ್ನು ಕೇಂದ್ರ ಸರ್ಕಾರ ಹಿಂತೆಗೆದುಕೊಂಡ ಬಳಿಕ ಪೆಟ್ರೋಲ್ ದರದಲ್ಲಿ ಸಾಕಷ್ಟು ಇಳಿಕೆಯಾಗಿತ್ತು. ಇದೀಗ ಮತ್ತೆ ಇಂಧನ ಬೆಲೆ ಗಗನದತ್ತ ಮುಖ ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ನನ್ನ ಜೊತೆ ಮಲಗಿದ್ರೆ ಸಿನಿಮಾ ಅವಕಾಶ’: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ನಟಿ ಶಾಕಿಂಗ್ ಹೇಳಿಕೆ!

3 ಬಾರಿ ಸಿಎಂ ಕೂಡ ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಮಹಿಳೆ ಬಂಧನ

ವಿಚಿತ್ರವಾದ್ರೂ ಸತ್ಯ: ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ; ರೋಬೋಟ್ ವಶಕ್ಕೆ ಪಡೆದ ಪೊಲೀಸರು!

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!