ಗ್ರಾಹಕರಿಗೆ ಉತ್ತಮ ಗುಣಮಟ್ಟದ ನೆಟ್ವರ್ಕ್: ಏರ್ ಟೆಲ್ ನಿಂದ 60 ಸಾವಿರ ಕೋಟಿ ಹೂಡಿಕೆ
ಗ್ರಾಹಕರಿಗೆ ಉತ್ತಮ ಗುಣಮಟ್ಟದ ನೆಟ್ವರ್ಕ್ ನೀಡುವುದಕ್ಕಾಗಿ ಮುಂದಿನ ಮೂರು ವರ್ಷಗಳಲ್ಲಿ 60 ಸಾವಿರ ಕೋಟಿ ರೂಪಾಯಿ ಬಂಡವಾಳ ಹೂಡುವುದಾಗಿ ಭಾರತಿ ಏರ್ ಟೆಲ್ ಸಂಸ್ಥೆ ತಿಳಿಸಿದೆ.
ನವದೆಹಲಿ: ಗ್ರಾಹಕರಿಗೆ ಉತ್ತಮ ಗುಣಮಟ್ಟದ ನೆಟ್ವರ್ಕ್ ನೀಡುವುದಕ್ಕಾಗಿ ಮುಂದಿನ ಮೂರು ವರ್ಷಗಳಲ್ಲಿ 60 ಸಾವಿರ ಕೋಟಿ ರೂಪಾಯಿ ಬಂಡವಾಳ ಹೂಡುವುದಾಗಿ ಭಾರತಿ ಏರ್ ಟೆಲ್ ಸಂಸ್ಥೆ ತಿಳಿಸಿದೆ.
ನೆಟ್ವರ್ಕ್ ಪರಿವರ್ತನೆಗಾಗಿ ಪ್ರಾಜೆಕ್ಟ್ ಲೀಪ್ ಎಂಬ ಯೋಜನೆಯನ್ನು ರೂಪಿಸಲಾಗುತ್ತಿದ್ದು, ಧ್ವನಿ ಸೇವೆಗಳನ್ನು ಸುಧಾರಿಸುವುದಕ್ಕೆ ಹೆಚ್ಚಿನ ಬಂಡವಾಳ ಹೂಡಲಾಗುತ್ತಿದೆ ಎಂದು ಭಾರತಿ ಏರ್ ಟೆಲ್ ನ ಎಂಡಿ, ಸಿಇಒ, ಗೋಪಾಲ್ ವಿಠಲ್ ತಿಳಿಸಿದ್ದಾರೆ.
ನೆಟ್ವರ್ಕ್ ಸುಧಾರಣೆಗಾಗಿ ಏರ್ ಟೆಲ್ ಸಂಸ್ಥೆ ಸುಮಾರು 70 ಸಾವಿರ ಬೇಸ್ ಸ್ಟೇಷನ್ ಗಳನ್ನು 2015 -16 ನಲ್ಲಿ ನಿಯೋಜಿಸುತ್ತಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.