ಅನಿಲ ದರ ಇಳಿಕೆ ಹೂಡಿಕೆ ಮೇಲೆ ಪರಿಣಾಮ ಬೀರಲಿದೆ: ಮೂಡೀಸ್
ನೈಸರ್ಗಿಕ ಅನಿಲ ಬೆಲೆ ಇಳಿಕೆ ಮಾಡಿರುವುದು ಬಂಡವಾಳ ಹೂಡಿಕೆ ಮೇಲೆ ಪರಿಣಾಮ ಬೀರಲಿದೆ ಎಂದು ಗ್ಲೋಬಲ್ ರೇಟಿಂಗ್ ಏಜೆನ್ಸಿ ಮೂಡೀಸ್ ಹೇಳಿದೆ.
ನವದೆಹಲಿ: ನೈಸರ್ಗಿಕ ಅನಿಲ ಬೆಲೆ ಇಳಿಕೆ ಮಾಡಿರುವುದು ಬಂಡವಾಳ ಹೂಡಿಕೆ ಮೇಲೆ ಪರಿಣಾಮ ಬೀರಲಿದೆ ಎಂದು ಗ್ಲೋಬಲ್ ರೇಟಿಂಗ್ ಏಜೆನ್ಸಿ ಮೂಡೀಸ್ ಹೇಳಿದೆ.
ಕೇಂದ್ರ ಸರ್ಕಾರ ನೈಸರ್ಗಿಕ ಅನಿಲ ದರ ಇಳಿಕೆ ಮಾಡಿರುವುದು ಸರಕಾರಿ ಸ್ವಾಮ್ಯದ ತೈಲ ಮತ್ತು ನೈಸರ್ಗಿಕ ಅನಿಲ ಸಂಸ್ಥೆಗಳ ಮೇಲೆ ಪರಿಣಾಮ ಬೀರುವುದಷ್ಟೇ ಅಲ್ಲದೇ ಪರಿಶೋಧನೆ ಹೂಡಿಕೆ ಮತ್ತು ಇಂಧನ ಆಮದು ಮಾಡಿಕೊಳ್ಳುವುದರ ಮೇಲೆ ಪರಿಣಾಮ ಬೀರಲಿದೆ ಎಂದು ಗ್ಲೋಬಲ್ ರೇಟಿಂಗ್ಸ್ ಅಭಿಪ್ರಾಯಪಟ್ಟಿದೆ.
ಬೆಲೆ ಇಳಿಕೆಯಿಂದಾಗಿ ಒಎನ್ ಜಿಸಿ ಗೆ ಮತ್ತಷ್ಟು ಆದಾಯ ಕಡಿಮೆಯಾಗಲಿದೆ. ಸರ್ಕಾರದ ಕ್ರಮದಿಂದಾಗಿ ಒಎನ್ ಜಿಸಿಯ ಆದಾಯ 300 ಮಿಲಿಯನ್ ಡಾಲರ್ ಕಡಿಮೆಯಾಗಿದ್ದರೆ ಆಯಿಲ್ ಇಂಡಿಯಾಗೆ 33 ಮಿಲಿಯನ್ ಡಾಲರ್ ಕಡಿಮೆಯಾಗಿದೆ ಎಂದು ಜಾಗತಿಕ ಕ್ರೆಡಿಟ್ ರೇಟಿಂಗ್ ಸಂಸ್ಥೆ ಮೂಡೀಸ್ ತಿಳಿಸಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.