ವಿಜಯ ಮಲ್ಯ 
ವಾಣಿಜ್ಯ

ಮಲ್ಯ ನಿವಾಸ, ಕಿಂಗ್‌ಫಿಶರ್ ಏರ್‌ಲೈನ್ಸ್ ಕಚೇರಿಗಳ ಮೇಲೆ ಸಿಬಿಐ ದಾಳಿ

ರಾಜ್ಯಸಭಾ ಸದಸ್ಯ ಹಾಗೂ ಉದ್ಯಮಿ ವಿಜಯ ಮಲ್ಯ ಅವರ ಲ್ಯಾವೆಲ್ಲೆ ರಸ್ತೆಯಲ್ಲಿರುವ ನಿವಾಸ ಹಾಗೂ ಅವರ ಮಾಲೀಕತ್ವದ ಕಿಂಗ್‌ಫಿಶರ್ ಏರ್‌ಲೈನ್ಸ್ ಕಚೇರಿಗಳ...

ಬೆಂಗಳೂರು: ರಾಜ್ಯಸಭಾ ಸದಸ್ಯ ಹಾಗೂ ಉದ್ಯಮಿ ವಿಜಯ ಮಲ್ಯ ಅವರ ಲ್ಯಾವೆಲ್ಲೆ ರಸ್ತೆಯಲ್ಲಿರುವ ನಿವಾಸ ಹಾಗೂ ಅವರ ಮಾಲೀಕತ್ವದ ಕಿಂಗ್‌ಫಿಶರ್ ಏರ್‌ಲೈನ್ಸ್ ಕಚೇರಿಗಳ ಮೇಲೆ ಶನಿವಾರ ಸಿಬಿಐ ದಾಳಿ ನಡೆಸಿದೆ.

ಐಡಿಬಿಐ ಬ್ಯಾಂಕ್‌ನಿಂದ 950 ಕೋಟಿ ರುಪಾಯಿ ಸಾಲ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಇಂದು ಮಲ್ಯ ನಿವಾಸ ಹಾಗೂ ಕಿಂಗ್‌ಫಿಶರ್ ಏರ್‌ಲೈನ್ಸ್‌ನ ದೆಹಲಿ, ಮುಂಬೈ, ಗೋವಾ ಹಾಗೂ ಬೆಂಗಳೂರು ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

ಕಿಂಗ್‌ಫಿಶರ್ ಏರ್‌ಲೈನ್ಸ್ ಈಗಾಗಲೇ ತನ್ನ ಸೇವೆಯನ್ನು ಸ್ಥಗಿತಗೊಳಿಸಿದ್ದು, ಬ್ಯಾಂಕಿಂಗ್ ನಿಯಮಗಳನ್ನು ಉಲ್ಲಂಘನೆ ಹಾಗೂ ಸಾಲ ಪಾವತಿಸುವಾಗ ವಂಚನೆ ಮಾಡಿದ ಆರೋಪ ಎದುರಿಸುತ್ತಿದೆ.

ನಷ್ಟಕ್ಕೆ ಸಿಲುಕಿದ ವಿಜಯಮಲ್ಯ ಒಡೆತನದ ಕಿಂಗ್‌ಫಿಶರ್‌ ಏರ್‌ಲೈನ್ಸ್‌ನ ವಿಮಾನಗಳು 2012ರ ಅಕ್ಟೋಬರ್‌ನಲ್ಲಿ ಹಾರಾಟವನ್ನು ಸಂಪೂರ್ಣವಾಗಿ ನಿಲ್ಲಿಸಿದ್ದವು. ಮತ್ತೆ ತನ್ನ ಕಾರ್ಯಚಟುವಟಿಕೆಗಳನ್ನು ಆರಂಭಿಸುವ ಕುರಿತು ಕೈಗೊಳ್ಳಲಿರುವ ಯೋಜನೆಗಳ ಬಗ್ಗೆ ವಿವರಿಸುವಲ್ಲಿ ವಿಫ‌ಲವಾದ ಕಾರಣ 2012ರ ಡಿ.31ರಂದು ನಾಗರಿಕ ವಿಮಾನಯಾನ ಪ್ರಧಾನ ನಿರ್ದೇಶಾನಲಯ ಕಿಂಗ್‌ಫಿಶರ್‌ ಏರ್‌ಲೈನ್ಸ್‌ನ ಹಾರಾಟ ಪರವಾನಗಿಯನ್ನು ರದ್ದುಗೊಳಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಸ್ತೂರಿರಂಗನ್ ವರದಿಯ ಭೌತಿಕ ಸಮೀಕ್ಷೆ ಬಗ್ಗೆ ಜನರ ಅಹವಾಲು ಆಲಿಸಿ ಅಧಿಕಾರಿಗಳೊಂದಿಗೆ ಚರ್ಚಿಸಿ ತೀರ್ಮಾನ: ಸಿಎಂ; Video

ದೀದಿಗೆ ದಿನಕ್ಕೊಂದು ಶಾಕ್; ನಂದೀಗ್ರಾಮದ ಬಳಿಕ ಕೈಕೊಟ್ಟ ರೆಜಿನಗರ ಉಪಚುನಾವಣೆ ಅಭ್ಯರ್ಥಿ ರಬಿಯುಲ್ ಆಲಂ ಚೌಧರಿ; ನಾಮಪತ್ರ ವಾಪಸ್

ವಿದೇಶಿ ನೌಕರರ ನೇಮಕಾತಿಗೆ ಅಮೆರಿಕ ಕತ್ತರಿ: H-1B ವೀಸಾ ನಿರ್ಬಂಧ ಮತ್ತೊಂದು ವರ್ಷಕ್ಕೆ ವಿಸ್ತರಣೆ..!

UPI MDR: ಗ್ರಾಹಕರಿಗೆ ಮತ್ತೊಂದು ತಲೆ ಬಿಸಿ; ಇನ್ನು ಮುಂದೆ ಪೆಟ್ರೋಲ್ ಪಂಪ್ ಗಳಲ್ಲಿ 2,000 ಕ್ಕಿಂತ ಹೆಚ್ಚಿನ ಯುಪಿಐ ಪಾವತಿ ಬಂದ್!

ಕನ್ನಡ ವರ್ಣಮಾಲೆ ಬರೆಯಲು ಬಾರದ ವಿದ್ಯಾರ್ಥಿಗಳ ಕಂಡು ಪ್ರದೀಪ್ ಈಶ್ವರ್ ಶಾಕ್: ಶಾಸಕರ ಸೂಚನೆಯಂತೆ 180 ಶಿಕ್ಷಕರಿಗೆ BEO ನೋಟಿಸ್!