ಯುಎಸ್ ಫೆಡರಲ್ ಬ್ಯಾಂಕ್ (ಸಂಗ್ರಹ ಚಿತ್ರ) 
ವಾಣಿಜ್ಯ

ಬಡ್ಡಿದರ ಹೆಚ್ಚಿಸದ ಫೆಡರಲ್ ಬ್ಯಾಂಕ್

ಅಮೆರಿಕದ ಫೆಡರಲ್ ಬ್ಯಾಂಕ್ ತನ್ನ ಪ್ರಮುಖ ಸಾಲಗಳ ಮೇಲಿನ ಬಡ್ಡಿದರಗಳನ್ನು ಯಥಾಸ್ಥಿತಿ ಮುಂದುವರೆಸಿದೆ. ಕಳೆದ ಹತ್ತು ವರ್ಷಗಳಿಂದಲೂ ಫೆಡರಲ್ ರಿಸರ್ವ್ ಬಡ್ಡಿದರ ಶೂನ್ಯದ ಸನಿಹ ಅಂದರೆ ಶೇ.0.25ರ ನಡುವೆ ಮುಂದುವರೆದಿದೆ...

ವಾಷಿಂಗ್ಟನ್: ಅಮೆರಿಕದ ಫೆಡರಲ್ ಬ್ಯಾಂಕ್ ತನ್ನ ಪ್ರಮುಖ ಸಾಲಗಳ ಮೇಲಿನ ಬಡ್ಡಿದರಗಳನ್ನು ಯಥಾಸ್ಥಿತಿ ಮುಂದುವರೆಸಿದೆ. ಕಳೆದ ಹತ್ತು ವರ್ಷಗಳಿಂದಲೂ ಫೆಡರಲ್ ರಿಸರ್ವ್ ಬಡ್ಡಿದರ ಶೂನ್ಯದ ಸನಿಹ ಅಂದರೆ ಶೇ.0.25ರ ನಡುವೆ ಮುಂದುವರೆದಿದೆ.

ಅಮೆರಿಕ ಫೆಡರಲ್ ಬ್ಯಾಂಕ್ ಬಡ್ಡಿದರಗಳನ್ನು ಏರಿಸಿದರೆ ಭಾರತ ಮತ್ತಿತರ ಅಭಿವೃದ್ಧಿಶೀಲ ದೇಶಗಳ ಮಾರುಕಟ್ಟೆಗಳಲ್ಲಿ ಹಣ ತೊಡಗಿಸಿರುವ ವಿದೇಶಿ ಹಣಕಾಸು ಸಂಸ್ಥೆಗಳು ಹೆಚ್ಚಿನ ಬಡ್ಡಿ  ಸಿಗಲಿದೆ ಎಂದು ಅಮೆರಿಕದತ್ತ ಮುಖ ಮಾಡಲಿವೆ. ಹೀಗಾಗಿ ಯಥಾಸ್ಥಿತಿ ಮುಂದುವರೆದಿರುವುದು ಅಭಿವೃದ್ಧಿ ದೇಶಗಳ ಪಾಲಿಗೆ ಸ್ವಲ್ಪ ನಿರಾಳತೆ ತಂದಿದೆ. ಗರಿಷ್ಠ ಉದ್ಯೋಗ ಅವಕಾಶಗಳನ್ನು ಸೃಷ್ಟಿಸುವುದು ಮತ್ತು ದರ ಸುಸ್ಥಿರತೆ ಕಾಯ್ದುಕೊಳ್ಳುವ ಉದ್ದೇಶದಿಂದ ಬಡ್ಡಿದರಗಳಲ್ಲಿ ಪರಿಷ್ಕರಣೆ ಮಾಡಿಲ್ಲ ಎಂದು ಸಭೆ ನಂತರ ಬಿಡುಗಡೆ ಮಾಡಿರುವ ಪತ್ರಿಕಾ ಹೇಳಿಕೆಯಲ್ಲಿ ಫೆಡರಲ್  ಬ್ಯಾಂಕ್ ವಿವರಿಸಿದೆ.

ಸಂಕಷ್ಟದಲ್ಲಿ ಆರ್ಥಿಕತೆ

ರಾಜನ್ ಅಮೆರಿಕ ಮತ್ತು ವಿಶ್ವದ ಆರ್ಥಿಕತೆ ಸಂಕಷ್ಟದಲ್ಲಿದೆ. ಈ ಕಾರಣದಿಂದಾಗಿಯೇ ಫೆಡರಲ್ ರಿಸರ್ವ್ ಬಡ್ಡಿದರಗಳನ್ನು ಹೆಚ್ಚಿಸಲಿಲ್ಲ. ಬಡ್ಡಿದರ ಏರಿಕೆಯಿಂದ ವಿಶ್ವ ಮಾತ್ರವಲ್ಲದೆ ಅಮೆರಿಕದ  ಆರ್ಥಿಕತೆಗೂ ತೊಂದರೆಯಾಗಲಿದೆ ಎಂದು ಆರ್‍ಬಿಐ ಗೌರ್ನರ್ ರಘುರಾಂ ರಾಜನ್ ಅಭಿಪ್ರಾಯಪಟ್ಟಿದ್ದಾರೆ.

ಭಾರತಕ್ಕೆ ಒಳಿತು: ಶಕ್ತಿಕಂಠದಾಸ್
ಫೆಡರಲ್ ಬ್ಯಾಂಕ್ ಬಡ್ಡಿದರಗಳನ್ನು ಹೆಚ್ಚಿಸದಿರುವ ನಿರ್ಧಾರ ಭಾರತ ದಂತಹ ಅಭಿವೃದ್ಧಿಶೀಲ ದೇಶಗಳಿಗೆ ಒಳ್ಳೆಯದಾಗಿದ್ದು ಇಲ್ಲಿನ ಬಡ್ಡಿದರಗಳನ್ನು ಅಗತ್ಯಕ್ಕೆ ಅನುಗುಣವಾಗಿ   ರೂಪಿಸಿಕೊಳ್ಳಬಹುದು ಎಂದು ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿ ಶಕ್ತಿಕಂಠ ದಾಸ್ ಅಭಿಪ್ರಾಯಪಟ್ಟಿದ್ದಾರೆ. ಫೆಡರಲ್ ಬ್ಯಾಂಕ್ ಬಡ್ಡಿದರಗಳನ್ನು ಹೆಚ್ಚಿಸಲಿದೆ ಎಂಬ ನಿರೀಕ್ಷೆಗಳಿದ್ದವು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

SCROLL FOR NEXT