ವಿಜಯ್ ಮಲ್ಯ 
ವಾಣಿಜ್ಯ

ವಿಜಯ್ ಮಲ್ಯಗೆ ಮತ್ತೊಂದು ಸಂಕಷ್ಟ: ಸಾಲದ ದೊರೆಯ ಪಾಸ್ ಪೋರ್ಟ್ ಅಮಾನತು

ಸಾಲಬಾಧೆಯಿಂದ ವಿದೇಶಕ್ಕೆ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ ಅವರಿಗೆ ಮತ್ತೊಂದು ಸಂಕಷ್ಟು ಎದುರಾಗಿದೆ. ಜಾರಿ ನಿರ್ದೇಶನಾಲಯ...

ನವದೆಹಲಿ: ಸಾಲಬಾಧೆಯಿಂದ ವಿದೇಶಕ್ಕೆ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ ಅವರಿಗೆ ಮತ್ತೊಂದು ಸಂಕಷ್ಟು ಎದುರಾಗಿದೆ. ಜಾರಿ ನಿರ್ದೇಶನಾಲಯ(ಇಡಿ)ದ ಮನವಿ ಹಿನ್ನೆಲೆಯಲ್ಲಿ ವಿದೇಶಾಂಗ ಸಚಿವಾಲಯ ಮದ್ಯದ ದೊರೆಯ ಪಾಸ್ ಪೋರ್ಟ್ ಅನ್ನು ಶುಕ್ರವಾರ ಅಮಾನತುಗೊಳಿಸಿದೆ.
ವಿಜಯ್ ಮಲ್ಯ ಅವರಿಗೆ ಜಾರಿ ನಿರ್ದೇಶನಾಲಯ ಈಗಾಗಲೇ ಮೂರು ಬಾರಿ ಸಮನ್ಸ್ ಜಾರಿ ಮಾಡಿದ್ದರೂ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಅವರ ಪಾಸ್ ಪೋರ್ಟ್ ರದ್ದುಗೊಳಿಸಿವಂತೆ ಪಾಸ್ ಪೋರ್ಟ್ ಕಚೇರಿಗೆ ಮನವಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇಂದು ವಿಜಯ್ ಮಲ್ಯ ಅವರ ಪಾಸ್ ಪೋರ್ಟ್ ಅನ್ನು ಅಮಾನತುಗೊಳಿಸಿದೆ.
ಐಡಿಬಿಐ ಬ್ಯಾಂಕ್ ನಿಂದ ಪಡೆದ 900 ಕೋಟಿ ರುಪಾಯಿ ಸಾಲವನ್ನು ದುರ್ಬಳಕೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಮುಂದೆ ವಿಜಯ್ ಮಲ್ಯ ವಿಚಾರಣೆಗೆ ಹಾಜರಾಗಬೇಕಿತ್ತು.
ಕಳೆದ ವರ್ಷ ಸಿಬಿಐ ದಾಖಲಿಸಿದ್ದ ಎಫ್ಐಆರ್ ಆಧರಿಸಿ ಇಡಿ ವಿಜಯ್ ಮಲ್ಯ ವಿರುದ್ಧ ಹಣ ದುರ್ಬಳಕೆ ಪ್ರಕರಣ ದಾಖಲಿಸಿಕೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್

42 ಎಸೆತ, 102 ರನ್: ವಿರಾಟ್ ಕೊಹ್ಲಿಯ ಸಾರ್ವಕಾಲಿಕ ದಾಖಲೆಯೇ ಉಡೀಸ್‌ ಮಾಡಿದ ಶ್ರೇಯಸ್ ಅಯ್ಯರ್‌!

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ