ಪೆಟ್ರೋಲ್-ಡೀಸೆಲ್ ದರ ಇಳಿಕೆ (ಸಂಗ್ರಹ ಚಿತ್ರ) 
ವಾಣಿಜ್ಯ

ಪೆಟ್ರೋಲ್ 1 ರು., ಡೀಸೆಲ್ ಬೆಲೆಯಲ್ಲಿ 2ರು. ಇಳಿಕೆ

ಸತತ 4ನೇ ಬಾರಿಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಲ್ಲಿ ಇಳಿಕೆ ಕಂಡುಬಂದಿದ್ದು, ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 1 ರು. ಹಾಗೂ ಡೀಸೆಲ್ ದರದಲ್ಲಿ 2 ರು. ಕಡಿತಗೊಳಿಸಲಾಗಿದೆ.

ನವದೆಹಲಿ: ಸತತ 4ನೇ ಬಾರಿಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಲ್ಲಿ ಇಳಿಕೆ ಕಂಡುಬಂದಿದ್ದು, ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 1 ರು. ಹಾಗೂ ಡೀಸೆಲ್ ದರದಲ್ಲಿ 2 ರು. ಕಡಿತಗೊಳಿಸಲಾಗಿದೆ.

ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಛಾತೈಲ ದರಗಳ ದಿನೇ ದಿನೇ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗುತ್ತಿರುವ ಪರಿಣಾಮ ಭಾರತದಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ದರ  ಇಳಿಕೆಯಾಗಿದೆ ಎಂದು ಹೇಳಲಾಗುತ್ತಿದೆ. ದರ ಇಳಿಕೆ ಮಾಡಿ ಭಾರತೀಯ ತೈಲೋತ್ಪನ್ನ ಸಂಸ್ಥೆಗಳು ನಿರ್ಧಾರ ಕೈಗೊಂಡಿದ್ದರಿಂದ ನೂತನ ದರಗಳ ನಿನ್ನೆ ಮಧ್ಯರಾತ್ರಿಯಿಂದಲೇ  ಜಾರಿಯಾಗಿವೆ.

ಪ್ರಸ್ತುತ ದರ ಇಳಿಕೆಯನ್ನು ಸೇರಿದಂತೆ ಕಳೆದ ಜುಲೈ ತಿಂಗಳನಿಂದ ಈ ವರೆಗೂ 4 ಬಾರಿ ಪೆಟ್ರೋಲಿಯಂ ಉತ್ಪನ್ನಗಳ ದರ ಇಳಿಕೆಯಾಗಿವೆ. ಅಂತೆಯೇ ಡಾಲರ್ ಎದುರು ರುಪಾಯಿ ಚೇತರಿಕೆ  ಕೂಡ ದರ ಇಳಿಕೆಗೆ ಪ್ರಮುಖ ಕಾರಣ ಎಂದು ಹೇಳಲಾಗುತ್ತಿದೆ. ಆರ್ಥಿಕ ತಜ್ಞರ ಪ್ರಕಾರ ಇನ್ನೂ ಕೆಲವು ದಿನಗಳ ಕಾಲ ಡಾಲರ್ ಎದುರು ರುಪಾಯಿ ಮೌಲ್ಯ ಏರಿಕೆ ಮುಂದುವರೆಯಲಿದ್ದು,  ಅಮೆರಿಕನ್ ಬ್ಯಾಂಕುಗಳ ಬಡ್ಡಿ ಏರಿಕೆ ಇದಕ್ಕೆ ಮೂಲ ಕಾರಣ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

ಹೆಲಿಪ್ಯಾಡ್, ಸ್ವಿಮ್ಮಿಂಗ್ ಪೂಲ್, ಜಿಮ್: ಅನಿಲ್ ಅಂಬಾನಿಯ 3,716 ಕೋಟಿ ರೂ. ಬೆಲೆಬಾಳುವ 17 ಅಂತಸ್ತಿನ ಕಟ್ಟಡ 'Abode ಇಡಿ ವಶಕ್ಕೆ!

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

SCROLL FOR NEXT