ಸಾಂದರ್ಭಿಕ ಚಿತ್ರ 
ವಾಣಿಜ್ಯ

ಹೊಸ 500 ರು. ನೋಟುಗಳ ಮುದ್ರಣಕ್ಕೆ ಹೆಚ್ಚಿನ ಒತ್ತು: ಹಣಕಾಸು ಸಚಿವಾಲಯ

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ 500 ರು. ಹೊಸ ನೋಟುಗಳ ಮುದ್ರಣದತ್ತ ಹೆಚ್ಚಿನ ಗಮನ ಕೇಂದ್ರೀಕರಿಸಿದ್ದು,ಮುಂದಿನ 2-3 ವಾರಗಳಲ್ಲಿ ಹಣದ ಕೊರತೆ ...

ನವದೆಹಲಿ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ 500 ರು. ಹೊಸ ನೋಟುಗಳ ಮುದ್ರಣದತ್ತ ಹೆಚ್ಚಿನ ಗಮನ ಕೇಂದ್ರೀಕರಿಸಿದ್ದು,ಮುಂದಿನ 2-3 ವಾರಗಳಲ್ಲಿ ಹಣದ ಕೊರತೆ ಸಮಸ್ಯೆಗೆ ಪರಿಹಾರ ಸಿಗಲಿದೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ.

ಪರಿಸ್ಥಿತಿ ಗಣನೀಯವಾಗಿ ಸುಧಾರಿಸುತ್ತಿದ್ದು, ಮಂದಿನ ಎರಡರಿಂದ ಮೂರು ವಾರಗಳಲ್ಲಿ ಸಮಸ್ಯೆಗೆ ಪರಿಹಾರ ಸಿಗುತ್ತದೆ ಎಂದು ಹಣಕಾಸು ವ್ಯವಹಾರಗಳ ಕಾರ್ಯದರ್ಶಿ ಶಕ್ತಿಕಾಂತ ದಾಸ್ ಹೇಳಿದ್ದಾರೆ.

ಆರಂಭದಲ್ಲಿ 2ಸಾವಿರ ರು ಮುಖಬೆಲೆಯ ನೋಟುಗಳ ಪೂರೈಕೆ ಬಗ್ಗೆ ಹೆಚ್ಚಿನ ಗಮನ ಹರಿಸಲಾಗಿತ್ತು. ಈಗ 500 ರು ನೋಟು ಮುದ್ರಣಕ್ಕೆ ಆದ್ಯತೆ ನೀಡಲಾಗುತ್ತಿದ್ದು, ಎಷ್ಟು ಬೇಗ ಸಾಧ್ಯವೋ ಅಷ್ಟು ಬೇಗ ಹಣದ ಕೊರತೆ ಸಮಸ್ಯೆ ಬಗೆಹರಿಸಲಾಗುವುದು ಎಂದಿದ್ದಾರೆ.ಎಲ್ಲೆಡೆ 2 ಸಾವಿರ ರು. ನೋಟುಗಳು ಸಾಕಷ್ಟು ಪ್ರಮಾಣದಲ್ಲಿ ದೊರೆಯುತ್ತಿದೆ. ಹೀಗಾಗಿ 500 ರು ನೋಟುಗಳ ಮುದ್ರಣದ ಕಡೆಗೆ ಗಮನ ಹರಿಸಲಾಗುತ್ತಿದೆ.

ಮುದ್ರಣದ ಜೊತೆಗೆ ಅದನ್ನು ಸುವ್ಯವಸ್ಥಿತ ರೀತಿಯಲ್ಲಿ ಎಲ್ಲಾ ಕಡೆ ಹಂಚಲು ಕ್ರಮ ಕೈಗೊಳ್ಳಲಾಗಿದೆ, ಗ್ರಾಮೀಣ ಭಾಗದ ಕೋ ಆಪರೇಟಿವ್ ಬ್ಯಾಂಕ್ ಗಳಲ್ಲಿ ಬೆಳೆ ಸಾಲಕ್ಕಾಗಿ ರೈತರಿಗೆ ನೀಡಲು ಹಣ ಸಾಕಷ್ಟಿದೆ. ಸರ್ಕಾರ ಆರ್ ಬಿಐ , ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ಗಳ ಜೊಕೆ ನಿರಂತರ ಸಂಪರ್ಕದಲ್ಲಿದ್ದು, ಸಹಕಾರಿ ಬ್ಯಾಂಕ್ ಗಳಿಗೆ ಅಗತ್ಯವಿರುವ ಹಣ ಪೂರೈಸಲು ಸೂಚಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಎರಡು ಲಕ್ಷ 20 ಸಾವಿರ ಎಟಿಎಂಗಳಿದ್ದು, ಅದರಲ್ಲಿ ಈಗಾಗಲೇ ಎರಡು ಲಕ್ಷ ಎಟಿಎಂಗಳು ಕಾರ್ಯ ನಿರ್ವಹಿಸುತ್ತಿವೆ. ಕೆಲವೊಮ್ಮೆ ಎಟಿಎಂಗಳಿಗೆ ಹಣ ಹಾಕುವ ಬದಲು ಬ್ಯಾಂಕ್ ಗಳು ತಮ್ಮ ಗ್ರಾಹಕರಿಗೆ ನೇರವಾಗಿ ಹಣ ನೀಡುತ್ತಿವೆ. ಹೀಗಾಗಿ ಎಟಿಎಂಗಳಲ್ಲಿ ಹಣದ ಕೊರತೆಯಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ. ಹೆಚ್ಚಿನ ಪ್ರಮಾಣದಲ್ಲಿ ಎಟಿಎಂಗಳು ಕಾರ್ಯನಿರ್ವಹಿಸುತ್ತಿವೆ, ಕೇವಲ ಶೇ13 ರಷ್ಟು ಎಟಿಎಂಗಳಲ್ಲಿ ಮಾತ್ರ ಹಣ ಸಿಗುತ್ತಿದೆ ಎಂದು ದೂರುವುದು ಸರಿಯಲ್ಲ ಎಂದು ಅವರು ವಿವರಿಸಿದ್ದಾರೆ.

ಈ ಮೊದಲು 500 ರು ನೋಟುಗಳನ್ನು ಹೊರಗೆ ವಿನ್ಯಾಸ ಮಾಡಲಾಗುತ್ತಿತ್ತು, ಆದರೆ ಈಗ 2000 ಹಾಗೂ 500 ರು ಮುಖ ಬೆಲೆ ನೋಟುಗಳ ವಿನ್ಯಾಸವನ್ನು ಮನೆಯಲ್ಲಿಯೇ ಮಾಡಲಾಗುತ್ತಿದೆ. ಹೀಗಾಗಿ ಹೊಸ ನೋಟುಗಳು ಹೆಚ್ಚು ಸುರಕ್ಷಿತವಾಗಿರುತ್ತವೆ ಎಂಬ ಭರವಸೆ ವ್ಯಕ್ತ ಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT