ಟಾಟಾ ಟ್ರಸ್ಟ್ ಅಧ್ಯಕ್ಷ ಸ್ಥಾನದಿಂದ ರತನ್ ಟಾಟಾ ಕೆಳಗಿಳಿಯುವುದಿಲ್ಲ: ಟಾಟಾ ಸನ್ಸ್
ಟಾಟಾ ಟ್ರಸ್ಟ್ ನ ಮಧ್ಯಂತರ ಅಧ್ಯಕ್ಷ ಸ್ಥಾನದಿಂದ ರತನ್ ಟಾಟಾ ಕೆಳಗಿಳಿಯುವುದಿಲ್ಲ ಎಂದು ಟಾಟಾ ಸನ್ಸ್ ಸ್ಪಷ್ಟ ಪಡಿಸಿದ್ದಾರೆ....
ಮುಂಬಯಿ: ಟಾಟಾ ಟ್ರಸ್ಟ್ ನ ಮಧ್ಯಂತರ ಅಧ್ಯಕ್ಷ ಸ್ಥಾನದಿಂದ ರತನ್ ಟಾಟಾ ಕೆಳಗಿಳಿಯುವುದಿಲ್ಲ ಎಂದು ಟಾಟಾ ಸನ್ಸ್ ಸ್ಪಷ್ಟ ಪಡಿಸಿದ್ದಾರೆ.
ಟಾಟಾ ಟ್ರಸ್ಟ್ ನ ಮಧ್ಯಂತರ ಅಧ್ಯಕ್ಷರಾಗಿರುವ ರತನ್ ಟಾಟಾ ತಮ್ಮ ಸ್ಥಾನದಿಂದ, ಈ ಸಮಯದಲ್ಲಿ ಕೆಳಗಿಳಿಯುವ ಬಗ್ಗೆ ಚಿಂತನೆ ನಡೆಸಿಲ್ಲ ಎಂದು ಟಾಟಾ ಸನ್ಸ್ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಟಾಟಾ ಟ್ರಸ್ಟ್ ರಾಷ್ಟೀಯ ಮಟ್ಟದಲ್ಲಿ ಅನೇಕ ಕ್ರಮಗಳನ್ನು ತೆಗೆದುಕೊಂಡಿದೆ. ಆ ಎಲ್ಲಾ ಯೋಜನೆಗಳನ್ನು ಟ್ರಸ್ಟ್ ಮುಂದುವರಿಸಿಕೊಂಡು ಹೋಗಲು ಬಯಸಿದ್ದು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.
ಟಾಟಾ ಸಮೂಹ ಸಂಸ್ಥೆಗಳ ಶೇ.66 ಪಾಲುಹೊಂದಿರುವ ಟಾಟಾ ಟ್ರಸ್ಟ್ನ ಅಧ್ಯಕ್ಷ ಸ್ಥಾನದಿಂದ ರತನ್ ಟಾಟಾ ಶೀಘ್ರದಲ್ಲೇ ಕೆಳಗಿಳಿಯಲಿದ್ದಾರೆ ವರದಿಯಾಗಿತ್ತು. ಈ ವರದಿಗೆ ಟಾಟಾ ಸನ್ಸ್ ತಮ್ಮ ಹೇಳಿಕೆಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.