ಸೆನ್ಸೆಕ್ಸ್ 
ವಾಣಿಜ್ಯ

ಚೇತರಿಸಿಕೊಂಡ ಷೇರುಪೇಟೆ ಸೆನ್ಸೆಕ್ಸ್ 568 ಅಂಕ ಏರಿಕೆ

ಕಳೆದ ವಾರದಿಂದ ಗಣನೀಯ ಇಳಿಕೆ ಕಂಡಿದ್ದ ಮುಂಬೈ ಶೇರು ಪೇಟೆ ಇಂದು 568 ಅಂಕಗಳ ಭರ್ಜರಿ ಮುನ್ನಡೆಯನ್ನು ಕಂಡು ದಿನದ ವಹಿವಾಟನ್ನು 23,554.12 ಅಂಕಗಳ...

ಮುಂಬೈ: ಕಳೆದ ವಾರದಿಂದ ಗಣನೀಯ ಇಳಿಕೆ ಕಂಡಿದ್ದ ಮುಂಬೈ ಶೇರು ಪೇಟೆ ಇಂದು 568 ಅಂಕಗಳ ಭರ್ಜರಿ ಮುನ್ನಡೆಯನ್ನು ಕಂಡು ದಿನದ ವಹಿವಾಟನ್ನು 23,554.12 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿದೆ.

ಇದೇ ವೇಳೆ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ ಕೂಡ 182 ಅಂಕಗಳ ಮುನ್ನಡೆಯನ್ನು ದಾಖಲಿಸಿ ದಿನದ ವಹಿವಾಟನ್ನು 7,162.95 ಅಂಕಗಳ ಮಟ್ಟದಲ್ಲಿ ಮುಕ್ತಾಯಗೊಂಡಿತು.

ದಿನದ ವಹಿವಾಟಿನಲ್ಲಿ ಸೆನ್ಸೆಕ್ಸ್‌ ಮತ್ತು ನಿಫ್ಟಿ ಶೇ.2.6ರ ಏರಿಕೆಯನ್ನು ಸಾಧಿಸಿರುವುದು ಹೂಡಿಕೆದಾರರಲ್ಲಿ ಹೊಸ ಹುರುಪು ತುಂಬಿಸಿದೆ. ಇಂದು ಕ್ಯಾಪಿಟಲ್‌ ಗೂಡ್ಸ್‌, ಮೆಟಲ್ಸ್‌, ಆಟೋ ಉತ್ತಮ ಖರೀದಿಯನ್ನು ಕಂಡವು.

ಏಶ್ಯನ್‌ ಶೇರು ಮಾರುಕಟ್ಟೆಗಳ ಸ್ಥಿರತೆ ಮುಂಬೈ ಶೇರು ಪೇಟೆಯ ಸೆನ್ಸೆಕ್ಸ್‌ ಇಂದು ಸೋಮವಾರದ ಆರಂಭಿಕ ವಹಿವಾಟಿನಲ್ಲಿ 400 ಅಂಕಗಳ ಮುನ್ನಡೆಯನ್ನು ಸಾಧಿಸಿ 23,000 ಅಂಕಗಳ ಮಟ್ಟವನ್ನು ಮರಳಿ ಸಂಪಾದಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP