ರು.251ಕ್ಕೆ ಸ್ಮಾರ್ಟ್ ಫೋನ್: ತನಿಖೆಗೆ ಆದೇಶಿಸಿದ ಕೇಂದ್ರ ಸರ್ಕಾರ
ನೋಯಿಡಾ ಮೂಲದ ರಿಂಗಿಂಗ್ ಬೆಲ್ ಕಂಪನಿಯ ರು.251 ಬೆಲೆಯ ಸ್ಮಾರ್ಟ್ ಫೋನ್ ಬಗ್ಗೆ ತನಿಖೆ ನಡೆಸುವಂತೆ ಕೇಂದ್ರ ಸರ್ಕಾರ...
ನವದೆಹಲಿ: ನೋಯಿಡಾ ಮೂಲದ ರಿಂಗಿಂಗ್ ಬೆಲ್ ಕಂಪನಿಯ ರು.251 ಬೆಲೆಯ ಸ್ಮಾರ್ಟ್ ಫೋನ್ ಬಗ್ಗೆ ತನಿಖೆ ನಡೆಸುವಂತೆ ಕೇಂದ್ರ ಸರ್ಕಾರ ಆದೇಶಿಸಿದೆ.
ಅತ್ಯಂತ ಕಡಿಮೆ ಬೆಲೆಗೆ ಸ್ಮಾರ್ಟ್ ಫೋನ್ ತಯಾರಿಕೆ ಮತ್ತು ಮಾರಾಟ ಹೇಗೆ ಸಾಧ್ಯ ಎಂಬುದುರ ಬಗ್ಗೆ ತನಿಖೆ ನಡೆಸುವಂತೆ ಕೇಂದ್ರ ಸರ್ಕಾರ ಆದೇಶಿಸಿದ್ದು, ದೂರಸಂಪರ್ಕ ಇಲಾಖೆ ತನಿಖೆ ನಡೆಸಿ ವರದಿ ಸಲ್ಲಿಸಲಿದೆ.
ಅತ್ಯಂತ ಕಡಿಮೆ ಬೆಲೆಗೆ ಮೊಬೈಲ್ ಮಾರಾಟ ಮಾಡುವುದನ್ನು ತಡೆಯಬೇಕು ಎಂದು ಕೋರಿ ಭಾರತೀಯ ಮೊಬೈಲ್ ತಯಾರಕರ ಸಂಘ(ಐಸಿಎ) ದೂರಸಂಪರ್ಕ ಖಾತೆ ಸಚಿವ ರವಿಶಂಕರ್ ಪ್ರಸಾದ್ ಅವರಿಗೆ ದೂರು ಸಲ್ಲಿಸಿತ್ತು. ಈ ಹಿನ್ನಲೆಯಲ್ಲಿ ಸಚಿವರು, ತನಿಕೆ ನಡೆಸಿ ವರದಿ ನೀಡುವಂತೆ ದೂರಸಂಪರ್ಕ ಇಲಾಖೆಗೆ ಸೂಚಿಸಿದ್ದಾರೆ.
"ಫ್ರೀಡಂ 251'ರ ಸ್ಮಾರ್ಟ್ ಫೋನ್ ಗಾಗಿ ಗ್ರಾಹಕರು ಮುಗಿ ಬಿದ್ದ ಹಿನ್ನಲೆಯಲ್ಲಿ ವೆಬ್ ಸೈಟ್ ಸ್ಥಗಿತಗೊಂಡಿದ್ದು, ತಾತ್ಕಾಲಿಕವಾಗಿ ಬುಕ್ಕಿಂಗ್ ಪ್ರಕ್ರಿಯೆ ನಿಲ್ಲಿಸಲಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.