ಸಾಂದರ್ಭೀಕ ಚಿತ್ರ 
ವಾಣಿಜ್ಯ

ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ ಮತ್ತೆ ಹೆಚ್ಚಳ

ಕೇಂದ್ರ ಸರ್ಕಾರ ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ಅಬಕಾರಿ ಸುಂಕವನ್ನು ಮತ್ತೆ ಹೆಚ್ಚಳ ಮಾಡಿದ್ದು, ಪ್ರತಿ ಲೀಟರ್‌ಗೆ ಪೆಟ್ರೋಲ್ ಗೆ 0.37 ಪೈಸೆ ಹಾಗೂ...

ನವದೆಹಲಿ: ಕೇಂದ್ರ ಸರ್ಕಾರ ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ಅಬಕಾರಿ ಸುಂಕವನ್ನು ಮತ್ತೆ ಹೆಚ್ಚಳ ಮಾಡಿದ್ದು, ಪ್ರತಿ ಲೀಟರ್‌ಗೆ ಪೆಟ್ರೋಲ್ ಗೆ 0.37 ಪೈಸೆ ಹಾಗೂ ಡೀಸೆಲ್ ಮೇಲೆ ಪ್ರತಿ ಲೀಟರ್ 2 ರುಪಾಯಿ ಹೆಚ್ಚಿಸಿದೆ.
ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಐದನೆ ಬಾರಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಹೆಚ್ಚಳ ಮಾಡಲಾಗಿದೆ. 
ಬ್ರ್ಯಾಂಡೆಡ್‌ರಹಿತ ಪೆಟ್ರೋಲ್‌ ಮೇಲಿನ ಮೂಲ ಅಬಕಾರಿ ಸುಂಕವನ್ನು  ರು. 7.36ರಿಂದ ರು.7.73ಕ್ಕೆ ಮತ್ತು ಬ್ರ್ಯಾಂಡೆಡ್‌ರಹಿತ ಡೀಸೆಲ್‌ ಮೇಲಿನ ಸುಂಕವನ್ನು ರು,5.83 ರಿಂದ ರು 7.83ಕ್ಕೆ ಹೆಚ್ಚಿಸಲಾಗಿದೆ.
ತೈಲ ಕಂಪನಿಗಳು ಕಳೆದ ಗುರುವಾರವಷ್ಟೇ ಪೆಟ್ರೋಲ್ ಬೆಲೆಯಲ್ಲಿ 63 ಪೈಸೆ ಹಾಗೂ ಡೀಸೆಲ್ ಬೆಲೆಯನ್ನು ರು.1.06 ರಷ್ಟು ಕಡಿತಗೊಳಿಸಿದ್ದವು.
ಕಚ್ಚಾ ತೈಲದ ಬೆಲೆ ಕಡಿಮೆಯಾಗಿರುವುದರಿಂದ ಕೇಂದ್ರ ಸರ್ಕಾರ ಕಳೆದ ತಿಂಗಳ ಪ್ರತಿ ಲೀಟರ್ ಪೆಟ್ರೋಲ್ ಮೇಲೆ 30 ಪೈಸೆ ಹಾಗೂ ಡೀಸೆಲ್ ಮೇಲೆ 1.17 ರುಪಾಯಿ ಅಬಕಾರಿ ಸುಂಕ ಹೆಚ್ಚಿಸುವ ಮೂಲಕ ಹೆಚ್ಚುವರಿಯಾಗಿ 2,500 ಕೋಟಿ ರುಪಾಯಿ ಸಂಗ್ರಹಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ