ಕಾರ್ಮಿಕ ಕಾರ್ಯದರ್ಶಿ ಶಂಕರ್ ಅಗರ್ವಾಲ್ (ಸಂಗ್ರಹ ಚಿತ್ರ) 
ವಾಣಿಜ್ಯ

ಇಎಸ್ ಐ. ಪಿಎಫ್ ತಪಾಸಣೆ ಮುಕ್ತ

ಸ್ಟಾರ್ಟ್ ಅಪ್ ಗಳನ್ನು ಮೂರು ವರ್ಷ ರಿಟರ್ನ್ಸ್ ಸಲ್ಲಿಕೆಯಿಂದ ವಿನಾಯಿತಿ ನೀಡುವಂತೆ ಕೇಂದ್ರ ಕಾರ್ಮಿಕ ಸಚಿವಾಲಯ ಭವಿಷ್ಯ ನಿಧಿ ಸಂಸ್ಥೆ ಮತ್ತು ಕಾರ್ಮಿಕರ ರಾಜ್ಯ ವಿಮೆ ಸಂಸ್ಥೆಗೆ ನಿರ್ದೇಶನ ನಿಡೀದೆ...

ನವದೆಹಲಿ: ಸ್ಟಾರ್ಟ್ ಅಪ್ ಗಳನ್ನು ಮೂರು ವರ್ಷ ರಿಟರ್ನ್ಸ್ ಸಲ್ಲಿಕೆಯಿಂದ ವಿನಾಯಿತಿ ನೀಡುವಂತೆ ಕೇಂದ್ರ ಕಾರ್ಮಿಕ ಸಚಿವಾಲಯ ಭವಿಷ್ಯ ನಿಧಿ ಸಂಸ್ಥೆ ಮತ್ತು ಕಾರ್ಮಿಕರ ರಾಜ್ಯ ವಿಮೆ  ಸಂಸ್ಥೆಗೆ ನಿರ್ದೇಶನ ನಿಡೀದೆ.

ಸ್ಟಾರ್ಟ್ ಅಪ್ ಗಳ ಪ್ರೋತ್ಸಾಹಕ್ಕೆ ಪ್ರಧಾನಿಳು ಕೈಗೊಂಡ ಕ್ರಮಗಳ ಹಾದಿಯಲ್ಲೇ ಸಾಗಿರುವ ಕೇಂದ್ರ ಕಾರ್ಮಿಕ ಸಚಿವಾಲಯ 9 ಕಾರ್ಮಿಕ ಕಾನೂನುಗಳಿಗೆ ಉದ್ಯಮಿಗಳು ಕೇವಲ ಸ್ವಯಂ  ದೃಢೀಕರಣ ಪತ್ರ ಸಲ್ಲಿಸಿದರೆ ಸಾಕು ಎಂದು ಇತ್ತೀಚೆಗೆ ಬಿಡುಗಡೆ ಮಾಡಿರುವ ನಿರ್ದೇಶನದಲ್ಲಿ ಹೇಳಿದೆ.

ಸ್ಟಾರ್ಟ್ ಅಪ್ ಗಳಿಗೆ ವಿಶೇಷ ಸೌಲಭ್ಯಗಳು ಮತ್ತು ಪ್ರೋತ್ಸಾಹಗಳು ಅಗತ್ಯವಾಗಿದೆ. ಇಂತಹ ಕಂಪನಿಗಳು ಕಾರ್ಮಿಕ ಇಲಾಖೆಗೆ ಸಂಬಂಧಿಸಿದಂತೆ ಸ್ವಯಂ ಪ್ರಮಾಣ ಪತ್ರಗಳನ್ನು  ಸಲ್ಲಿಸಿದರೂ ಸಾಕು ಎಂದು ಕಾರ್ಮಿಕ ಕಾರ್ಯದರ್ಶಿ ಶಂಕರ್ ಅಗರ್ವಾಲ್ ಹೇಳಿದ್ದಾರೆ.

ಕಟ್ಟಡ ಮತ್ತು ಇತರೆ ನಿರ್ಮಾಣ ಕಾಯ್ದೆ, ಅಂತಾರಾಜ್ಯ ವಲಸೆ ಕಾರ್ಮಿಕ ಕಾಯ್ದೆ, ವೇತನ ಮತ್ತು ಗ್ರಾಚುಟಿ ಕಾಯ್ದೆ ಗುತ್ತಿಗೆ ಕಾರ್ಮಿಕ ಕಾಯ್ದೆ, ಕೈಗಾರಿಕಾ ವ್ಯಾಜ್ಯಗಳ ಕಾಯ್ದೆ ಸೇರಿದಂತೆ ಹಲವು  ನಿಯಮಗಳು ಅನ್ವಯವಾಗದು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!