ವಾಣಿಜ್ಯ

ಕಡಿಮೆ ವೆಚ್ಚದಲ್ಲಿ ಸೇವೆ ಒದಗಿಸುವ ಸಾಮರ್ಥ್ಯ ಭಾರತಕ್ಕಿದೆ: ಅರುಣ್ ಜೇಟ್ಲಿ

Sumana Upadhyaya

ನವದೆಹಲಿ: ಮೇಕ್ ಇನ್ ಇಂಡಿಯಾ ಅಭಿಯಾನದಡಿ ಭಾರತದಲ್ಲಿ ಉತ್ಪಾದನಾ ಕೇಂದ್ರಗಳನ್ನು ಸ್ಥಾಪಿಸಲು ವಿದೇಶಿ ಕಂಪೆನಿಗಳನ್ನು ಆಕರ್ಷಿಸಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದ್ದು, ಕಡಿಮೆ ವೆಚ್ಚದಲ್ಲಿ ಸೇವೆ ನೀಡುವ ಸಾಮರ್ಥ್ಯ ಭಾರತಕ್ಕಿದೆ ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ. ಅವರು ರಾಷ್ಟ್ರೀಯ ವೆಚ್ಚ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸರಕು ಮತ್ತು ಸೇವೆಗಳಿಗೆ ವೆಚ್ಚ ಬಹಳ ಮುಖ್ಯ ಅಂಶವಾಗಿರುತ್ತದೆ. ಉತ್ಪಾದನೆ ವೆಚ್ಚವನ್ನು ಕುಗ್ಗಿಸಲು ಭಾರಿ ಮತ್ತು ಸಣ್ಣ ಮಟ್ಟದಲ್ಲಿ ಅನೇಕ ವಿಷಯಗಳನ್ನು ಬಗೆಹರಿಸಬೇಕಾಗಿದೆ ಎಂದರು. ಮುಂದಿನ ತಿಂಗಳು 2016-17ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಯಾಗಲಿದ್ದು, ಅದಕ್ಕೆ ಸ್ವಲ್ಪ ದಿನಗಳ ಮುಂಚೆ ಹಣಕಾಸು ಸಚಿವರ ಈ ಹೇಳಿಕೆ ಮಹತ್ವ ಪಡೆದಿದೆ. ಈ ಬಾರಿಯ ಕೇಂದ್ರ ಸಾಮಾನ್ಯ ಬಜೆಟ್ ನಲ್ಲಿ ಮೇಕ್ ಇನ್ ಇಂಡಿಯಾ ಅಭಿಯಾನವನ್ನು ಅಭಿವೃದ್ಧಿಪಡಿಸಲು ಮತ್ತು ರಫ್ತನ್ನು ಇನ್ನಷ್ಟು ಸ್ಪರ್ಧಾತ್ಮಕವಾಗಿ ಹೆಚ್ಚಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬಹುದು.

SCROLL FOR NEXT