ಸುದ್ದಿಗಾರರೊಂದಿಗೆ ಮಾತನಾಡುತ್ತಿರುವ ಅರುಣ್ ಜೇಟ್ಲಿ 
ವಾಣಿಜ್ಯ

ಜಿಎಸ್ ಟಿ ಮಸೂದೆಯನ್ನು ಎಲ್ಲಾ ರಾಜ್ಯಗಳು ಒಪ್ಪಿವೆ; ಪ್ರಮುಖ ಘಟ್ಟದಲ್ಲಿದೆ: ಅರುಣ್ ಜೇಟ್ಲಿ

ತಮಿಳುನಾಡು ಹೊರತುಪಡಿಸಿ ಬೇರೆಲ್ಲಾ ರಾಜ್ಯಗಳು ಸರಕು ಮತ್ತು ಸೇವಾ ತೆರಿಗೆ(ಜಿಎಸ್ ಟಿ) ಯೋಜನೆಗೆ ಬೆಂಬಲ...

ನವದೆಹಲಿ: ತಮಿಳುನಾಡು ಹೊರತುಪಡಿಸಿ ಬೇರೆಲ್ಲಾ ರಾಜ್ಯಗಳು ಸರಕು ಮತ್ತು ಸೇವಾ ತೆರಿಗೆ(ಜಿಎಸ್ ಟಿ) ಯೋಜನೆಗೆ ಬೆಂಬಲ ಸೂಚಿಸಿವೆ ಮತ್ತು ಸ್ವೀಕರಿಸಿವೆ ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.

ಇಲ್ಲಿಯವರೆಗೆ ಪ್ರತಿಯೊಂದು ರಾಜ್ಯ ಜಿಎಸ್ ಟಿಗೆ ಸಂಬಂಧಪಟ್ಟಂತೆ ವಿವರವಾದ ಅಭಿಪ್ರಾಯ ವ್ಯಕ್ತಪಡಿಸಿವೆ ಮತ್ತು ಒಪ್ಪಿಕೊಂಡಿವೆ. ತಮಿಳುನಾಡು ರಾಜ್ಯ ಮಾತ್ರ ಕೆಲವೊಂದು ಬದಲಾವಣೆಗಳನ್ನು ಬಯಸಿದೆ ಎಂದು ಹಣಕಾಸು ಸಚಿವರು ನಿನ್ನೆ ಕೋಲ್ಕತ್ತಾದಲ್ಲಿ  22 ರಾಜ್ಯಗಳ ಹಣಕಾಸು ಸಚಿವರ ಉನ್ನತಾಧಿಕಾರಿಗಳ ಸಭೆಯ ನಂತರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು. ನಿನ್ನೆ ಮತ್ತು ಇಂದು ನಡೆಯಲಿರುವ ಸಭೆಯಲ್ಲಿ ಮಾದರಿ ಸರಕು ಮತ್ತು ಸೇವಾ ತೆರಿಗೆಗಳ ಕಾನೂನಿನ ಕುರಿತು ಚರ್ಚೆ ನಡೆಯಲಿದೆ.

ಕೇಂದ್ರ ಸರ್ಕಾರ ಪರೋಕ್ಷ ತೆರಿಗೆಯನ್ನು ಮುಂದಿನ ಹಣಕಾಸು ವರ್ಷದಿಂದ ಜಾರಿಗೆ ತರಲು ಯೋಜಿಸಿದ್ದು, ಜಿಎಸ್ ಟಿ ಮಸೂದೆ ರಾಜ್ಯಸಭೆಯಲ್ಲಿ ಅನುಮೋದನೆಗೆ ಕಾದು ಕುಳಿತಿದೆ. ಮುಂಬರುವ ಮುಂಗಾರು ಅಧಿವೇಶನದಲ್ಲಿ ಜಿಎಸ್ ಟಿ ಸಂವಿಧಾನ ತಿದ್ದುಪಡಿ ಮಸೂದೆಯನ್ನು ರಾಜ್ಯಸಭೆಯಲ್ಲಿ ಸರ್ಕಾರ ಮಂಡಿಸಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ