ಅರುಣ್ ಜೇಟ್ಲಿ - ನರೇಂದ್ರ ಮೋದಿ 
ವಾಣಿಜ್ಯ

ನೌಕರರ ಭವಿಷ್ಯ ನಿಧಿ ತೆರಿಗೆ ಮರು ಪರಿಶೀಲನೆಗೆ ಮೋದಿ ಸೂಚನೆ

ನೌಕರರ ಭವಿಷ್ಯ ನಿಧಿ (ಇಪಿಎಫ್) ಹಣ ಪಡೆಯಲು ನಿರ್ಧರಿಸಿದರೆ, ಆ ಪೈಕಿ ಶೇ. 60 ರಷ್ಟು ಮೊತ್ತಕ್ಕೆ ತೆರಿಗೆ ಕಟ್ಟಬೇಕು ಎಂಬ ವಿತ್ತ ಸಚಿವ ಅರುಣ್ ಜೇಟ್ಲಿ ಅವರ...

ನವದೆಹಲಿ: ನೌಕರರ ಭವಿಷ್ಯ ನಿಧಿ (ಇಪಿಎಫ್) ಹಣ ಪಡೆಯಲು ನಿರ್ಧರಿಸಿದರೆ, ಆ ಪೈಕಿ ಶೇ. 60 ರಷ್ಟು ಮೊತ್ತಕ್ಕೆ ತೆರಿಗೆ ಕಟ್ಟಬೇಕು ಎಂಬ ವಿತ್ತ ಸಚಿವ ಅರುಣ್ ಜೇಟ್ಲಿ ಅವರ ಮುಂಗಡ ಪತ್ರದ ಪ್ರಸ್ತಾವನೆಯನ್ನು ಮರುಪರಿಶೀಲಿಸುವಂತೆ ಪ್ರಧಾನಿ ನರೇಂದ್ರ ಮೋದಿ ವಿತ್ತ ಸಚಿವರಿಗೆ ಸೂಚಿಸಿದ್ದಾರೆ.
ಈ ಬಗ್ಗೆ ಮೋದಿಯವರು ಶನಿವಾರ ಜೇಟ್ಲಿಯವರಲ್ಲಿ ಮಾತನಾಡಿದ್ದು, ನೌಕರರ ಭವಿಷ್ಯ ನಿಧಿ ನಗದೀಕರಣದ ಮೇಲಿನ ತೆರಿಗೆ ಕುರಿತ ಪ್ರಸ್ತಾವನೆಯನ್ನು ಪುನರ್ ವಿಮರ್ಶೆಗೊಳಪಡಿಸಬೇಕು ಎಂದು ಹೇಳಿರುವುದಾಗಿ ಬಲ್ಲಮೂಲಗಳು ಹೇಳಿವೆ. 
ಏಪ್ರಿಲ್ 1 ರಿಂದ ಇಪಿಎಫ್ ಕಟ್ಟುವ ಹಣಕ್ಕೆ ಇದು ಅನ್ವಯವಾಗುತ್ತದೆ ಎಂದು ಜೇಟ್ಲಿ ಹೇಳಿದ್ದರು. ಸರ್ಕಾರದ ಈ ನಿರ್ಧಾರಕ್ಕೆ ಜನರಿಂದ ವ್ಯಾಪಕ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಮರುಪರಿಶೀಲನೆ ನಡೆಸುವಂತೆ ಮೋದಿ ಸೂಚಿಸಿದ್ದಾರೆ.
ಮರುಪರಿಶೀಲನೆ ಬಗ್ಗೆ ವಿತ್ತ ಸಚಿವರು ಶುಕ್ರವಾರ ಸಂಸತ್‌ನಲ್ಲಿ ಹೇಳಿಕೆ ನೀಡಬೇಕಿತ್ತು. ಆದರೆ ಮಾಜಿ ಸ್ಪೀಕರ್ ಪಿಎ ಸಂಗ್ಮಾ ನಿಧನರಾದ ಕಾರಣ ಸಂಸತ್ ಕಲಾಪವನ್ನು ಮುಂದೂಡಲಾಗಿತ್ತು.
ಮಂಗಳವಾರಕ್ಕಿಂತ ಮುನ್ನ ಸರ್ಕಾರ ನೌಕರರ ಭವಿಷ್ಯ ನಿಧಿ ಬಗ್ಗೆ ಪುನರ್‌ಪರಿಶೀಲನೆ ನಡೆಸಿ ಬದಲಾವಣೆಗಳನ್ನು ಮಾಡುವ ಸಾಧ್ಯತೆಗಳಿವೆ ಎಂದು ಬಲ್ಲಮೂಲಗಳಿಂದ ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

SCROLL FOR NEXT