ವಾಣಿಜ್ಯ

3 ಬಿಲಿಯನ್ ನಷ್ಟ: ಯುಕೆಯಲ್ಲಿರುವ ಟಾಟಾ ಸಂಸ್ಥೆಯ ಉಕ್ಕು ಕಾರ್ಖಾನೆ ಮಾರಟಕ್ಕೆ

ಯುಕೆಯಲ್ಲಿರುವ ಟಾಟಾ ಸ್ಟೀಲ್ ಸಂಸ್ಥೆ 3 ಬಿಲಿಯನ್ ಡಾಲರ್ ನಷ್ಟ ಅನುಭವಿಸಿರುವುದರಿಂದ ಅಲ್ಲಿನ ಘಟಕವನ್ನು ಮಾರಾಟ ಮಾಡಲು ನಿರ್ಧರಿಸಿದೆ.

ಮುಂಬೈ: ಯುಕೆಯಲ್ಲಿರುವ ಟಾಟಾ ಸ್ಟೀಲ್ ಸಂಸ್ಥೆ 3 ಬಿಲಿಯನ್ ಡಾಲರ್ ನಷ್ಟ ಅನುಭವಿಸಿರುವುದರಿಂದ ಅಲ್ಲಿನ ಘಟಕವನ್ನು ಮಾರಾಟ ಮಾಡಲು ನಿರ್ಧರಿಸಿದೆ.
ಕ್ಲೈಡ್ ಬ್ರಿಡ್ಜ್ ಹಾಗೂ ಡಾಲ್ಜೆಲ್ ಉಕ್ಕು ಕಾರ್ಖಾನೆಗಳನ್ನು ಸ್ಕಾಟ್ ಲ್ಯಾಂಡ್ ನ ಸ್ಥಳಿಯ ಸರ್ಕಾರಕ್ಕೆ ಮಾರಾಟ ಮಾಡುವ ಒಪ್ಪಂದವನ್ನು ಪ್ರಕಟಿಸಿದ ಕೆಲವೇ ದಿನಗಳಲ್ಲಿ ಯುಕೆಯಲ್ಲಿರುವ ಟಾಟಾ ಸ್ಟೀಲ್ ಸಂಸ್ಥೆಯನ್ನೂ ಮಾರಾಟಕ್ಕಿಡಲು ನಿರ್ಧಾರ ಪ್ರಕಟಿಸಿದೆ.
ಯುರೋಪ್ ನಲ್ಲಿರುವ ಟಾಟಾ ಉದ್ಯಮದ ಕಾರ್ಯಕ್ಷಮತೆಯನ್ನು ಪರಿಶೀಲಿಸಿರುವ ಟಾಟಾ ಸ್ಟೀಲ್ ಮಂಡಳಿ, ಕಳೆದ 12 ತಿಂಗಳುಗಳಿಂದ ಯುಕೆಯಲ್ಲಿರುವ ಟಾಟಾ ಸ್ಟೀಲ್ ಸಂಸ್ಥೆಯ ಹಣಕಾಸು ಸ್ಥಿತಿ ಕಳಪೆಯಾಗಿರುವುದನ್ನು ಪರಿಗಣಿಸಿದ್ದು ಟಾಟಾ ಸ್ಟೀಲ್ ಕಾರ್ಖಾನೆಯನ್ನು ಮಾರಾಟ ಮಾಡಲು ನಿರ್ಧರಿಸಿದೆ ಎಂದು ಟಾಟಾ ಸ್ಟೀಲ್ ಮಂಡಳಿ ಹೇಳಿಕೆ ಬಿಡುಗಡೆ ಮಾಡಿದೆ. 
2008 ರ ಆರ್ಥಿಕ ಬಿಕ್ಕಟ್ಟಿನ ನಂತರ ಜಾಗತಿಕ ಮಟ್ಟದಲ್ಲಿ ಉಕ್ಕಿನ ಬೇಡಿಕೆ ಕಡಿಮೆಯಾಗಿದ್ದು, ಯುಕೆ ಹಾಗೂ ಯುರೋಪ್ ಗಳಲ್ಲಿ ವ್ಯಾಪಾರ ಸ್ಥಿತಿಗತಿಗಳು ಹದಗೆಟ್ಟಿವೆ ಎಂದು ಟಾಟಾ ಉಕ್ಕು ಮಂಡಳಿ ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Geneva ಸಭೆಯಲ್ಲಿ ಭಾರತದ ವಿರುದ್ಧ ಟೀಕೆ; ‘ರಾಜಕೀಯ ಪ್ರೇರಿತ ಹೇಳಿಕೆಗಳ ಒಪ್ಪಲ್ಲ’ ಎಂದ MEA, ವಿಶ್ವಸಂಸ್ಥೆ ಸಮಿತಿ ವಿರುದ್ಧ ಕಿಡಿ..!

'ವಿರೋಧವಿದ್ದರೂ ಮೋಹನ್ ಭಾಗವತ್ ಅಮೆರಿಕಕ್ಕೆ ಯಾಕೆ ಹೋದ್ರು? ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ನಾನಾ ಪಟೋಲೆ ಪ್ರಶ್ನೆ!

ದೇಶಾದ್ಯಂತ H1N1 ಪ್ರಕರಣಗಳ ಏರಿಕೆ: ಸೋಂಕಿನ ಲಕ್ಷಣಗಳು, ಸಾರ್ವಜನಿಕರು ಪಾಲಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳು, IMA ಸಲಹೆ ಏನು?

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

'ಟಾಕ್ಸಿಕ್' ಸಿನಿಮಾ ವಿರುದ್ಧ ಸುಳ್ಳು ಮಾಹಿತಿ ಪ್ರಕಟಿಸದಂತೆ ಕೋರ್ಟ್ ತಡೆಯಾಜ್ಞೆ!