ಸೈರಸ್ ಮಿಸ್ತ್ರಿ 
ವಾಣಿಜ್ಯ

ಸೈರಸ್ ಮಿಸ್ತ್ರಿ ಬೆಂಬಲಕ್ಕೆ ನಿಂತ ಟಾಟಾ ಗ್ರೂಪ್ ನ ಭಾರತೀಯ ಹೋಟೆಲ್ ಗಳ ನಿರ್ದೇಶಕರು

ಟಾಟಾ ಗ್ರೂಪ್ ನ ಭಾರತೀಯ ಹೋಟೆಲ್ ಗಳ ಸ್ವತಂತ್ರ ನಿರ್ದೇಶಕರು ಟಾಟಾ ಸನ್ಸ್‌ ಅಧ್ಯಕ್ಷ ಹುದ್ದೆಯಿಂದ ವಜಾಗೊಂಡಿರುವ ಸೈರಸ್‌....

ಮುಂಬೈ: ಟಾಟಾ ಗ್ರೂಪ್ ನ ಭಾರತೀಯ ಹೋಟೆಲ್ ಗಳ ಸ್ವತಂತ್ರ ನಿರ್ದೇಶಕರು ಟಾಟಾ ಸನ್ಸ್‌ ಅಧ್ಯಕ್ಷ ಹುದ್ದೆಯಿಂದ ವಜಾಗೊಂಡಿರುವ ಸೈರಸ್‌ ಮಿಸ್ತ್ರಿ ಅವರ ಬೆಂಬಲಕ್ಕೆ ನಿಂತಿವೆ.
ಇಂದು ಬಾಂಬೆ ಹೌಸ್ ನಲ್ಲಿ ಸೈರಸ್ ಮಿಸ್ತ್ರಿ ನೇತೃತ್ವದಲ್ಲಿ ಭಾರತೀಯ ಹೋಟೆಲ್ ಗಳ ನಿರ್ದೇಶಕರ ಸಭೆ ನಡೆಯಿತು, ಈ ವೇಳೆ ಬಾಂಬೆ ಹೌಸ್ ಹೊರಗಡೆ ಮಾಧ್ಯಮ ಸಿಬ್ಬಂದಿ ಹಾಗೂ ಭದ್ರತಾ ಸಿಬ್ಬಂದಿ ನಡುವೆ ತೀವ್ರ ಜಟಾಪಟಿಯೂ ನಡೆಯಿತು.
ಸಭೆಯ ನಂತರ ಹೋಟೆಲ್ ಗಳ ಸ್ವತಂತ್ರ ನಿರ್ದೇಶಕರು ತಮ್ಮ ಅಧ್ಯಕ್ಷರ ಬಗ್ಗೆ ಸಂಪೂರ್ಣ ವಿಶ್ವಾಸ ಹೊಂದಿರುವುದಾಗಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ.
ಮಿಸ್ತ್ರಿ ಅವರು ಸಭೆಯಲ್ಲಿ ಈ ವರ್ಷದ ವಾರ್ಷಿಕ ವಹಿವಾಟಿನ ಮೌಲ್ಯ ಮಾಪನ ಮಾಡಿದ್ದು, ಅವರು ತೆಗೆದುಕೊಂಡ ನಿರ್ಧಾರ, ಕಾರ್ಯತಂತ್ರಗಳ ಸೂಚನೆ ಬಗ್ಗೆ ಸ್ವತಂತ್ರ ನಿರ್ದೇಶಕರು ಸರ್ವಾನುಮತದಿಂದ ಮೆಚ್ಚುಗೆ ವ್ಯಕ್ತಪಡಿಸಿದರು ಮತ್ತು ಸೈರಸ್ ಮಿಸ್ತ್ರಿ ಅವರ ನಾಯಕತ್ವದ ಬಗ್ಗೆ ಸಂಪೂರ್ಣ ವಿಶ್ವಾಸ ವ್ಯಕ್ತಪಡಿಸಿದರು ಎಂದು ಪ್ರಕಟಣೆ ತಿಳಿಸಿದೆ.
ಸೈರಸ್ ಮಿಸ್ತ್ರಿ ಅವರು ಟಾಟಾ ಸಮೂಹದಲ್ಲಿ ಪ್ರಮುಖ ಪಾಲುದಾರ ಸಂಸ್ಥೆಯಾಗಿರುವ ಟಾಟಾ ಸನ್ಸ್‌ ಅಧ್ಯಕ್ಷ ಹುದ್ದೆಯಿಂದ ವಜಾಗೊಂಡಿದ್ದು, ಟಾಟಾ ಸ್ಟೀಲ್‌, ಟಿಸಿಎಸ್‌ ಮತ್ತು ಟಾಟಾ ಮೋಟಾರ್ಸ್‌ ಹಾಗೂ ಗ್ರೂಪ್ ನ ಇತರೆ ಸಂಸ್ಥೆಗಳ ಅಧ್ಯಕ್ಷ ಹುದ್ದೆಯಲ್ಲಿ ಮುಂದುವರೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!