ಟಿಸಿಎಸ್ ಅಧ್ಯಕ್ಷರಾಗಿ ಇಶಾತ್ ಹುಸೇನ್ ನೇಮಕ
ಐಟಿ ದೈತ್ಯ ಕಂಪೆನಿ ಟಾಟಾ ಕನ್ಸಲ್ಟೆನ್ಸಿ ಸರ್ವಿಸ್ ನ ಅಧ್ಯಕ್ಷ ಸ್ಥಾನದಿಂದ ಸೈರಸ್ ಮಿಸ್ತ್ರಿಯವರನ್ನು...
ನವದೆಹಲಿ: ಐಟಿ ದೈತ್ಯ ಕಂಪೆನಿ ಟಾಟಾ ಕನ್ಸಲ್ಟೆನ್ಸಿ ಸರ್ವಿಸ್ ನ ಅಧ್ಯಕ್ಷ ಸ್ಥಾನದಿಂದ ಸೈರಸ್ ಮಿಸ್ತ್ರಿಯವರನ್ನು ವಜಾಗೊಳಿಸಿದ ನಂತರ ಅವರ ಸ್ಥಾನಕ್ಕೆ ರತನ್ ಟಾಟಾ ಅವರ ನಿಕಟವರ್ತಿ ಇಶಾತ್ ಹುಸೇನ್ ಆಗಮಿಸಿದ್ದಾರೆ. ಹೊಸ ಅಧ್ಯಕ್ಷರ ನೇಮಕಾತಿ ಆಗುವವರೆಗೆ ಇಶಾತ್ ಹುಸೇನ್ ಹಂಗಾಮಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಕಂಪೆನಿ ತಿಳಿಸಿದೆ.
ಭಾರತದ ಅತಿದೊಡ್ಡ ಸಾಫ್ಟ್ ವೇರ್ ಸೇವೆ ರಫ್ತಿನ ಕಂಪೆನಿಯಾದ ಟಿಸಿಎಸ್, ಟಾಟಾ ಸನ್ಸ್ ಕಡೆಯಿಂದ ಪತ್ರ ತಲುಪಿದ್ದು ಅದರಲ್ಲಿ ಹುಸೇನ್ ಅವರು ಮಿಸ್ತ್ರಿಯವರ ಅಧ್ಯಕ್ಷ ಸ್ಥಾನವನ್ನು ತಾತ್ಕಾಲಿಕವಾಗಿ ವಹಿಸಿಕೊಳ್ಳಲಿದ್ದಾರೆ ಎಂದು ನಮೂದನೆಯಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.