ಶೀಘ್ರದಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಮತ್ತಷ್ಟು ಏರಿಕೆ
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇದೀಗ ಏರಿಕೆಯತ್ತ ಮುಖಮಾಡಿದ್ದು, ಸದ್ಯದಲ್ಲೇ ಗ್ರಾಹಕರಿಗೆ ಮತ್ತಷ್ಟು ಬೆಲೆ ಏರಿಕೆಯ...
ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇದೀಗ ಏರಿಕೆಯತ್ತ ಮುಖಮಾಡಿದ್ದು, ಸದ್ಯದಲ್ಲೇ ಗ್ರಾಹಕರಿಗೆ ಮತ್ತಷ್ಟು ಬೆಲೆ ಏರಿಕೆಯ ಬಿಸಿ ತಟ್ಟಲಿದೆ.
ಇತ್ತೀಚಿಗಷ್ಟೇ ಪೆಟ್ರೋಲ್ ದರ ಏರಿಕೆ ಮಾಡಿದ್ದ ತೈಲ ಕಂಪನಿಗಳು ಇದೀಗ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಏರಿಯಾದ ಹಿನ್ನೆಲೆಯಲ್ಲಿ ಈಗ ಮತ್ತಷ್ಟು ಬೆಲೆ ಏರಿಕೆ ಮಾಡಲು ಮುಂದಾಗಿವೆ.
ಸದ್ಯ ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 64.72 ರು.ಹಾಗೂ ಡೀಸೆಲ್ ಬೆಲೆ 52.61ರು. ಇದೆ. ಆದರೆ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಪ್ರತಿ ಬ್ಯಾರೆಲ್ 53 ಡಾಲರ್ ಗೆ ಏರಿಕೆಯಾಗಿದೆ.
ಕಳೆದ ತಿಂಗಳು ರಷ್ಯಾ ತೈಲ ರಫ್ತು ರಾಷ್ಚ್ರಗಳ ಒಕ್ಕೂಟ ಸೇರಿದ ಪರಿಣಾಮ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆಯಲ್ಲಿ ಏರಿಕೆಗೆ ಕಾರಣವಾಗಿದ್ದು, ಅದನ್ನು ಗ್ರಾಹಕರಿಗೆ ವರ್ಗಾಯಿಸಲು ತೈಲ ಕಂಪನಿಗಳು ತುದಿಗಾಲಲ್ಲಿ ನಿಂತಿವೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.