ಚೀನಾದಲ್ಲಿ 2 ನೇ ಸಂಶೋಧನಾ ಮತ್ತು ಅಭಿವೃದ್ಧಿ ಕೇಂದ್ರವನ್ನು ಪ್ರಾರಂಭಿಸಲಿರುವ ಆಪಲ್ 
ವಾಣಿಜ್ಯ

ಚೀನಾದಲ್ಲಿ 2 ನೇ ಸಂಶೋಧನಾ ಮತ್ತು ಅಭಿವೃದ್ಧಿ ಕೇಂದ್ರವನ್ನು ಪ್ರಾರಂಭಿಸಲಿರುವ ಆಪಲ್

ಆಪಲ್ ಸಂಸ್ಥೆ ಚೀನಾದಲ್ಲಿ ಎರಡನೇ ಸಂಶೋಧನಾ ಮತ್ತು ಅಭಿವೃದ್ಧಿ ಕೇಂದ್ರವನ್ನು ಪ್ರಾರಂಭಿಸುವುದಾಗಿ ಘೋಷಿಸಿದೆ.

ಬೀಜಿಂಗ್: ಆಪಲ್ ಸಂಸ್ಥೆ ಚೀನಾದಲ್ಲಿ ಎರಡನೇ ಸಂಶೋಧನಾ ಮತ್ತು ಅಭಿವೃದ್ಧಿ ಕೇಂದ್ರವನ್ನು ಪ್ರಾರಂಭಿಸುವುದಾಗಿ ಘೋಷಿಸಿದೆ.

ಹಾರ್ಡ್ ವೇರ್ ಉತ್ಪಾದನಾ ಕೇಂದ್ರವಾಗಿರುವ ಚೀನಾದ ಷೆನ್ಜೆನ್ ನಗರದಲ್ಲಿ ಆಪಲ್ ಸಂಸ್ಥೆಯ 2 ನೇ ಸಂಶೋಧನಾ ಮತ್ತು ಅಭಿವೃದ್ಧಿ ಕೇಂದ್ರ 2017 ಕ್ಕೆ ಪ್ರಾರಂಭವಾಗಲಿದೆ. ಮುಂದಿನ ವರ್ಷ ಸಂಸ್ಥೆಯ ಎರಡನೇ ಸಂಶೋಧನಾ ಹಾಗು ಅಭಿವೃದ್ಧಿ ಕೇಂದ್ರ ಪ್ರಾರಂಭವಾಗಲಿದ್ದು ನಮ್ಮ ಇಂಜಿನಿಯರ್ ಗಳು ಇಲ್ಲಿನ ಸ್ಥಳೀಯ ಉತ್ಪಾದಕ ಪಾಲುದಾರರೊಂದಿಗೆ ಮತ್ತಷ್ಟು ನಿಕಟವಾಗಿ ಕಾರ್ಯನಿರ್ವಹಿಸಬಹುದು ಎಂದು ಆಪಲ್ ವಕ್ತಾರರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಹೊಸ ಸಂಶೋಧನಾ ಮತ್ತು ಅಭಿವೃದ್ಧಿ ಕೇಂದ್ರ ಪ್ರಾರಂಭವಾಗುವುದನ್ನು ಘೋಷಿಸುವುದಕ್ಕೂ ಮುನ್ನ ಆಪಲ್ ಸಂಸ್ಥೆಯ ಸಿಇಒ, ಚೀನಾ ಸರ್ಕಾರಿ ಅಧಿಕಾರಿಗಳನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.  ಚೀನಾದಲ್ಲಿರುವ ಆಪಲ್ ಉತ್ಪಾದನಾ ಘಟಕದಲ್ಲಿ ಈಗ 100,000 ನೌಕರರಿದ್ದು ಉತ್ಪಾದನೆ ಕ್ಷೇತ್ರದಲ್ಲಿ ಷೆನ್ಜೆನ್ ಪ್ರಮುಖ ನಗರವಾಗಿರಲಿದೆ ಎಂದು ಟಿಮ್ ಕುಕ್ ಹೇಳಿದ್ದಾರೆ. ಹೊಸ ಸಂಶೋಧನಾ ಮತ್ತು ಅಭಿವೃದ್ಧಿ ಕೇಂದ್ರದಲ್ಲಿ ವಿಶ್ವವಿದ್ಯಾನಿಲಯಗಳನ್ನು ಒಳಗೊಂಡ ಸಂಶೋಧನೆ ಮತ್ತು ಅಭಿವೃದ್ಧಿ ಕೆಲಸಗಳು ನಡೆಯಲಿದ್ದು 500 ನೌಕರರು ಇರಲಿದ್ದಾರೆ ಎಂದು ಅಂದಾಜಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?