ಸಂಗ್ರಹ ಚಿತ್ರ 
ವಾಣಿಜ್ಯ

ಅಮೆರಿಕದಲ್ಲಿ ದರ ಹೆಚ್ಚಳ ಭೀತಿ; ಭಾರತೀಯ ಷೇರು ಮಾರುಕಟ್ಟೆ ಕುಸಿತ

ಅಮೆರಿಕದಲ್ಲಿ ದರ ಹೆಚ್ಚಳ ಭೀತಿ ನಡುವೆಯೇ ಭಾರತೀಯ ಷೇರುಮಾರುಕಟ್ಟೆ ಕುಸಿತಕಂಡಿದ್ದು, ಸೆನ್ಸೆಕ್ಸ್ ಬರೊಬ್ಬರಿ 500 ಅಂಕಗಳ ಕುಸಿತ ಕಂಡಿದೆ.

ಮುಂಬೈ: ಅಮೆರಿಕದಲ್ಲಿ ದರ ಹೆಚ್ಚಳ ಭೀತಿ ನಡುವೆಯೇ ಭಾರತೀಯ ಷೇರುಮಾರುಕಟ್ಟೆ ಕುಸಿತಕಂಡಿದ್ದು, ಸೆನ್ಸೆಕ್ಸ್ ಬರೊಬ್ಬರಿ 500 ಅಂಕಗಳ ಕುಸಿತ ಕಂಡಿದೆ.

ಅಮೆರಿಕದ ಫೆಡರಲ್ ಬ್ಯಾಂಕ್ ಗಳು ಬಡ್ಡಿದರ ಏರಿಕೆ ಮಾಡುವ ಕುರಿತು ಹಲವು ದಿನಗಳಿಂದ ಹರಿದಾಡುತ್ತಿದ್ದ ಊಹೋಪೋಹಗಳು ಇಂದು ಭಾರತೀಯ ಷೇರುಮಾರುಕಟ್ಟೆ ವ್ಯತಿರಿಕ್ತ ಪರಿಣಾಮ  ಬೀರಿದ್ದು, ಸೆನ್ಸೆಕ್ಸ್ 500 ಅಂಕಗಳ ಕುಸಿತದೊಂದಿಗೆ 27,629.54ಕ್ಕಿಳಿದಿದ್ದರೆ, ನಿಫ್ಟಿ ಕೂಡ 143 ಅಂಕಗಳ ಕುಸಿತದೊಂದಿಗೆ 8,565.75 ಅಂಕಗಳಿಗೆ ಇಳಿಕೆಯಾಗಿದೆ.

ಇನ್ನು ಸೆನ್ಸೆಕ್ಸ್ ಕುಸಿತ ಬೆನ್ನಲ್ಲೇ ರುಪಾಯಿ ಮೌಲ್ಯದಲ್ಲಿಯೂ ಕೂಡ ಕುಸಿತ ಕಂಡುಬಂದಿದ್ದು, ರುಪಾಯಿ ಮೌಲ್ಯ ಒಂದೇ ದಿನದಲ್ಲಿ 43 ಪೈಸೆ ಇಳಿಕೆಯಾಗುವುದರೊಂದಿಗೆ ರುಪಾಯಿ ದರ ಪ್ರತೀ  ಡಾಲರ್ ಗೆ 66.96 ರು. ಗೆ ಏರಿಕೆಯಾಗಿದೆ.

ಇಂದಿನ ವಹಿವಾಟಿನಲ್ಲಿ ಅದಾನಿ ಪೋರ್ಟ್ಸ್ ಸಂಸ್ಥೆಯ ಷೇರುಗಳ ಮೌಲ್ಯದಲ್ಲಿ ಶೇ.4.83ರಷ್ಟು ಮತ್ತು ರಿಲಯನ್ಸ್ ಸಂಸ್ಥೆಯ ಷೇರುಗಳ ಮೌಲ್ಯದಲ್ಲಿ 3.96ರಷ್ಟು ಕುಸಿತ ಕಂಡುಬಂದಿದೆ. ಉಳಿದಂತೆ  ಐಸಿಐಸಿಐ ಬ್ಯಾಂಕ್, ಟಾಟಾ ಮೋಟಾರ್ಸ್ ಮತ್ತು ಹೆಚ್ ಡಿ ಎಫ್ ಸಿ ಬ್ಯಾಂಕ್ ಗಳ ಷೇರು ಮೌಲ್ಯಗಳು ಕೂಡ ಕುಸಿತ ಕಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ ಕೆ ಶಿವಕುಮಾರ್ ಸ್ಫೋಟಕ ಆರೋಪ; Video

ಶಾಸಕರ ಲೆಟರ್‌ಹೆಡ್'ನಲ್ಲೇ 'ಸತ್ತಿದ್ದಾರೆ' ಎಂದು ಅರ್ಜಿ: ಯತ್ನಾಳ್ ಸೇರಿ ಮೂವರ ವಿರುದ್ಧ FIR ದಾಖಲು

'Evil Dead': ನಟ ನಾನಾ ಪಾಟೇಕರ್ ಸಾವು, #MeToo ಆರೋಪ ಮಾಡಿದ್ದ ನಟಿ ತನುಶ್ರೀ ದತ್ತಾ ಹೇಳಿದ್ದೇನು? ವಿಚಿತ್ರ ಪೋಸ್ಟ್!

ಇದ್ದಕ್ಕಿದ್ದಂತೆ ಬಾಯ್ತೆರೆದ ರಸ್ತೆ, ಕಾರು ಆಪೋಷನ, ಕೂದಲೆಳೆ ಅಂತರದಲ್ಲಿ ಚಾಲಕ ಬಚಾವ್-Video

'SIR' ವಿರುದ್ಧ ಭಾರೀ ಪ್ರತಿಭಟನೆ: ಜ್ಞಾನೇಶ್ ಕುಮಾರ್ Z+ ಭದ್ರತೆ ಮತ್ತಷ್ಟು ಹೆಚ್ಚಿಸಿದ ಕೇಂದ್ರ ಸರ್ಕಾರ!